ಜಮ್ಮು ಕಾಶ್ಮೀರ | ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧನ ಮೃತದೇಹ ಪತ್ತೆ

Date:

ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧನ ಮೃತದೇಹವು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕಳೆದ ರಾತ್ರಿ ಅನಂತ್‌ನಾಗ್‌ನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆ ಉಗ್ರರುವ ಅಪಹರಣ ಮಾಡಿದ್ದ ಇಬ್ಬರು ಯೋಧರಲ್ಲಿ ಹಿಲಾಲ್ ಅಹ್ಮದ್ ಭಟ್ ಎಂಬವರ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಅಪಹರಣಕ್ಕೊಳಗಾಗಿದ್ದ ಇಬ್ಬರು ಯೋಧರ ಪೈಕಿ ಓರ್ವ ಯೋಧ ತಪ್ಪಿಸಿಕೊಂಡಿದ್ದರು. ಆದರೆ ಹಿಲಾಲ್ ಉಗ್ರರ ವಶದಲ್ಲಿದ್ದರು. ಕೋಕರ್‌ನಾಗ್‌ನ ಕಜ್ವಾನ್ ಅರಣ್ಯ ಪ್ರದೇಶದಲ್ಲಿ ಅವರ ಶವ ಪತ್ತೆಯಾಗಿದೆ. ಇಂದು ಬೆಳಿಗ್ಗೆ ಯೋಧ ನಾಪತ್ತೆಯಾಗಿದ್ದಾರೆ ಎಂದು ಚಿನಾರ್ ಕಾರ್ಪ್ಸ್ ದೃಢಪಡಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಎನ್‌ಕೌಂಟರ್‌ನಲ್ಲಿ ಸೇನಾ ಅಧಿಕಾರಿ ಹುತಾತ್ಮ, ಮುಂದುವರಿದ ಕಾರ್ಯಾಚರಣೆ

“ದೇಶಕ್ಕಾಗಿ ಹೋರಾಟ ನಡೆಸುತ್ತಿದ್ದ ಕೆಚ್ಚೆದೆಯ ವೀರ, ರೈಫಲ್‌ಮ್ಯಾನ್ ಹಿಲಾಲ್ ಅಹ್ಮದ್ ಭಟ್ ತ್ಯಾಗವನ್ನು ಚಿನಾರ್ ಕಾರ್ಪ್ಸ್ ಗೌರವಿಸುತ್ತದೆ. ಅವರ ಧೈರ್ಯ ಮತ್ತು ಸಮರ್ಪಣೆ ನಮಗೆ ಎಂದೆಂದಿಗೂ ಸ್ಫೂರ್ತಿ ನೀಡುತ್ತದೆ. ಭಾರತೀಯ ಸೇನೆಯು ಆಳವಾದ ಸಂತಾಪ ವ್ಯಕ್ತಪಡಿಸುತ್ತದೆ. ಅವರ ಕುಟುಂಬದೊಂದಿಗೆ ನಾವಿದ್ದೇವೆ” ಎಂದು ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಆಫ್ ಆರ್ಮಿ ಎಕ್ಸ್‌ನಲ್ಲಿ ಹೇಳಿದೆ.

“ಗುಪ್ತಚರ ಮಾಹಿತಿಯ ಆಧಾರದ ಮೇಲೆ ಅಕ್ಟೋಬರ್ 8ರಂದು ಕಜ್ವಾನ್ ಅರಣ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಪೋಲೀಸ್ ಮತ್ತು ಏಜೆನ್ಸಿಗಳೊಂದಿಗೆ ಭಾರತೀಯ ಸೇನೆಯು ಜಂಟಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಪ್ರಾದೇಶಿಕ ಸೇನೆಯ ಒಬ್ಬ ಯೋಧ ನಾಪತ್ತೆಯಾಗಿರುವುದರಿಂದ ಕಾರ್ಯಾಚರಣೆಯು ರಾತ್ರಿಯಿಡೀ ಮುಂದುವರೆದಿತ್ತು” ಎಂದು ಚಿನಾರ್ ಕಾರ್ಪ್ಸ್ ಆಫ್ ಆರ್ಮಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...