ಜಮ್ಮು ಕಾಶ್ಮೀರ ಚುನಾವಣೆ | ಎರಡನೇ ಹಂತದ ಮತದಾನ ಆರಂಭ, ಒಮರ್ ಅಬ್ದುಲ್ಲಾ ಕಣದಲ್ಲಿ

Date:

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಬುಧವಾರ ಆರಂಭವಾಗಿದೆ. 26 ಸ್ಥಾನಗಳಿಗೆ ಕಣದಲ್ಲಿರುವ 239 ಅಭ್ಯರ್ಥಿಗಳ ಭವಿಷ್ಯವನ್ನು ಇಂದು 25 ಲಕ್ಷ ಮತದಾರರು ನಿರ್ಧರಿಸಲಿದ್ದಾರೆ.

ಬಿಗಿ ಭದ್ರತೆಯ ನಡುವೆ 26 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಕಣದಲ್ಲಿರುವ ಕ್ಷೇತ್ರದ ಮತದಾನವೂ ಇಂದು ನಡೆಯುತ್ತಿದೆ. ಅವರು ಬುದ್ಗಾಮ್ ಮತ್ತು ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ ಅವರು ನೌಶೇರಾ ವಿಧಾನಸಭಾ ಕ್ಷೇತ್ರದಿಂದ ಮತ್ತು ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಅವರು ಸೆಂಟ್ರಲ್-ಶಾಲ್ತೆಂಗ್ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ: ಮೊದಲ ಹಂತದ 24 ಕ್ಷೇತ್ರಗಳಲ್ಲಿ ಮತದಾನ ಆರಂಭ

ಇಂದು ಕಂಗನ್, ಗಂದರ್‌ಬಾಲ್, ಹಜರತ್‌ಬಾಲ್, ಖನ್ಯಾರ್, ಹಬ್ಬಕದಲ್, ಲಾಲ್ ಚೌಕ್, ಚನ್ನಪೋರಾ, ಝಡಿಬಲ್, ಈದ್ಗಾ, ಸೆಂಟ್ರಲ್ ಶಾಲ್ತೆಂಗ್, ಬುದ್ಗಾಮ್, ಬೀರ್ವಾ, ಖಾನ್‌ಸಾಹಿಬ್, ಚ್ರಾರ್-ಐ-ಶರೀಫ್, ಚದೂರ, ಗುಲಾಬ್‌ಗಢ್, ರಿಯಾಸಿ, ಶ್ರೀ ಮಾತಾ ವೈಷ್ಣೋ ದೇವಿ, ಕಲಕೋಟೆ – ಸುಂದರ್‌ಬಾನಿ, ನೌಶೇರಾ, ರಾಜೌರಿ, ಬುಧಾಲ್, ತನ್ನಮಂಡಿ, ಸುರನ್‌ಕೋಟೆ, ಪೂಂಚ್ ಹವೇಲಿ ಮತ್ತು ಮೆಂಧರ್ ಕ್ಷೇತ್ರಗಳಲ್ಲಿ ಇಂದು ಚುನಾವಣೆ ನಡೆಯುತ್ತಿದೆ.

ಅಕ್ಟೋಬರ್ 1ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...