ಜಮ್ಮು ಮತ್ತು ಕಾಶ್ಮೀರ | ಲಷ್ಕರ್-ಎ-ತೈಬಾದ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಹತ್ಯೆ

Date:

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಎ-ತೈಬಾ (ಎಲ್ಇಟಿ) ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಎಂಬಾತನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿವೆ ಎಂದು ವರದಿಯಾಗಿದೆ.

ಬಂಡಿಪೋರಾ ಬಳಿ ಭಯೋತ್ಪಾದಕರಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು, ಭಾರತೀಯ ಸೇನೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಭಯೋತ್ಪಾದಕರು ಮತ್ತು ಸೇನೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಎಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಹತ್ಯೆ ನಡೆಸಿದ ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿವೆ. ಕಾರ್ಯಾಚರಣೆ ವೇಳೆ ಅಲ್ತಾಫ್ ಲಲ್ಲಿಯನ್ನು ಹತ್ಯೆ ಮಾಡಲಾಗಿದೆ ಎಂದು ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...