ಶೀಘ್ರದಲ್ಲೇ ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಪ್ರಧಾನಿ ಮೋದಿ

Date:

ಜಮ್ಮು ಕಾಶ್ಮೀರಕ್ಕೆ ಶೀಘ್ರದಲ್ಲೇ ರಾಜ್ಯ ಸ್ಥಾನಮಾನ ನೀಡುವುದರ ಜೊತೆ, ವಿಧಾನಸಭಾ ಚುನಾವಣೆಗಳನ್ನು ಕೂಡ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಜಮ್ಮು ಕಾಶ್ಮೀರದ ಉದಂಪುರ್‌ನಲ್ಲಿ ಮಾತನಾಡಿದ ಅವರು, ಮೋದಿ ಬಹಳ ಮುಂದೆ ಯೋಚಿಸುತ್ತಾರೆ. ಇಲ್ಲಿಯವರೆಗೂ ಈಗ ಏನು ನಡೆಯುತ್ತಿದೆಯೊ ಅದು ಕೇವಲ ಟ್ರೈಲರ್‌ ಮಾತ್ರ. ನಾನು ಜಮ್ಮು ಕಾಶ್ಮೀರಕ್ಕೆ ನೂತನ ಹಾಗೂ ಆದ್ಭುತವಾದ ಚಿತ್ರಣ ರೂಪಿಸಲು ನಿರತನಾಗಿದ್ದೇನೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಧಾನಸಭೆ ಚುನಾವಣೆಗಳನ್ನು ನಡೆಸುವ ಸಮಯ ದೂರವಿಲ್ಲ. ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಸ್ಥಾನಮಾನ ಪಡೆಯಲಿದೆ. ನಿಮ್ಮ ಶಾಸಕ ಹಾಗೂ ನಿಮ್ಮ ಮಂತ್ರಿಗಳೊಂದಿಗೆ ನಿಮ್ಮ ಕನಸನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಲ್ಲಿ ಒಂದು ದಿನ ಶಾಂತಿಯುತವಾಗಿದ್ದರೆ ಪತ್ರಿಕೆಯಲ್ಲಿ ಅದೇ ಮುಖಪುಟವಾಗುತ್ತಿತ್ತು. ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಬದಲಾಗಿದೆ. ಈ ಚುನಾವಣೆಯು ಸಂಸದರನ್ನು ಮಾತ್ರ ಆಯ್ಕೆ ಮಾಡುವುದಿಲ್ಲ.ಸುಭದ್ರ ಸರ್ಕಾರವನ್ನು ಚುನಾಯಿಸುತ್ತದೆ. ಸುಭದ್ರ ಸರ್ಕಾರ ಏನೆಲ್ಲ ಮಾಡಲಿದೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ” ಎಂದು ಮೋದಿ ಹೇಳಿದರು.

“ನಿಮ್ಮೆಲ್ಲರ ಆಶೀರ್ವಾದದಿಂದ 370ನೇ ವಿಧಿಯ ಗೋಡೆಯನ್ನು ನಾಶ ಮಾಡಿದ್ದೇನೆ. 370ನೇ ವಿಧಿಯನ್ನು ಮರಳಿ ಸ್ಥಾಪಿಸಲು ಕಾಂಗ್ರೆಸ್ ಸೇರಿದಂತೆ ದೇಶದ ಯಾವುದೇ ರಾಜಕೀಯ ಪಕ್ಷಕ್ಕೆ ಸವಾಲು ಹಾಕುತ್ತೇನೆ. ಈ ದೇಶವು ಅವರನ್ನು ನೋಡಲು ಬಯಸುವುದಿಲ್ಲ” ಎಂದು ಪ್ರಧಾನಿ ಹೇಳಿದರು.

ಕಾಂಗ್ರೆಸ್, ನ್ಯಾಷನಲ್‌ ಕಾನ್ಫರೆನ್ಸ್, ಪಿಡಿಪಿ ಹಾಗೂ ಎಲ್ಲ ಇತರ ಪಕ್ಷಗಳು ಜಮ್ಮು ಮತ್ತು ಕಾಶ್ಮೀರವನ್ನು ಹಳೆಯ ದಿನಕ್ಕೆ ತೆಗೆದುಕೊಂಡು ಹೋಗಲು ಬಯಸುತ್ತವೆ. ಕುಟುಂಬ ಆಧಾರಿತ ಪಕ್ಷಗಳು ಮಾಡಿದಷ್ಟು ಹಾನಿಯನ್ನು ಬೇರೆ ಯಾರೂ ಮಾಡಿಲ್ಲ” ಎಂದು ಮೋದಿ ವಿಪಕ್ಷಗಳನ್ನು ಟೀಕಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...