ಜಮ್ಮು ಕಾಶ್ಮೀರ | ಮೇಘಸ್ಫೋಟ: ಮೃತರ ಸಂಖ್ಯೆ 60ಕ್ಕೆ ಏರಿಕೆ, ನೂರಾರು ಮಂದಿ ನಾಪತ್ತೆ

Date:

ಜಮ್ಮು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಸಂಭವಿಸಿದ ಬೃಹತ್ ಮೇಘಸ್ಫೋಟದಲ್ಲಿ ಮೃತರ ಸಂಖ್ಯೆಯು 60ಕ್ಕೆ ಏರಿಕೆಯಾಗಿದೆ. ಎರಡನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನೂ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಹಿಮಾಲಯದ ಮಾತಾ ಚಂಡಿ ದೇಗುಲಕ್ಕೆ ಹೋಗುವ ಮಚೈಲ್ ಮಾತಾ ಯಾತ್ರಾ ಮಾರ್ಗದಲ್ಲಿ ಹಠಾತ್ ಪ್ರವಾಹ ಉಂಟಾಗಿ ನೂರಾರು ಜನರು ನಾಪತ್ತೆಯಾಗಿದ್ದಾರೆ, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. ಈವರೆಗೆ 167 ಮಂದಿಯನ್ನು ರಕ್ಷಿಸಲಾಗಿದೆ. 38 ಮಂದಿ ಸ್ಥಿತಿ ಗಂಭೀರವಾಗಿದೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ: 40 ಮಂದಿ ಸಾವು, 200ಕ್ಕೂ ಹೆಚ್ಚು ನಾಪತ್ತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ತಂಡ ಶುಕ್ರವಾರ ಮೇಘಸ್ಫೋಟ ಪೀಡಿತ ಗ್ರಾಮವನ್ನು ತಲುಪಿದ್ದು, ಇನ್ನೂ ಎರಡು ತಂಡಗಳು ತಮ್ಮ ಕಾರ್ಯಾಚರಣೆಯಲ್ಲಿ ತೊಡಗಿವೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಸೇನೆಯು ಮತ್ತೊಂದು ತುಕಡಿಯನ್ನು ನಿಯೋಜಿಸಿದೆ. ರಾಷ್ಟ್ರೀಯ ರೈಫಲ್ಸ್ ಪಡೆಗಳು ಕಾರ್ಯಾಚರಣೆಯಲ್ಲಿ ಸೇರಿಕೊಂಡಿವೆ.

ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಮುಂದುವರಿದಂತೆ ಸಾವುನೋವುಗಳ ಸಂಖ್ಯೆಯೂ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಹೇಳುತ್ತಾರೆ. ಪ್ರವಾಹ ಉಂಟಾಗಿ ಕನಿಷ್ಠ 16 ವಸತಿ ಮನೆಗಳು ಮತ್ತು ಸರ್ಕಾರಿ ಕಟ್ಟಡಗಳು, ಮೂರು ದೇವಾಲಯಗಳಿಗೆ, ಒಂದು ಡಜನ್‌ಗೂ ಅಧಿಕ ವಾಹನಗಳಿಗೆ ಹಾನಿ ಉಂಟಾಗಿದೆ.

ಇನ್ನು ಪ್ರವಾಹದ ಕಾರಣ ಜಿಲ್ಲಾಡಳಿತವು ಕಿಶ್ತ್ವಾರ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ರದ್ದುಗೊಳಿಸಿದೆ. ಸಮಾರಂಭವನ್ನು ಧ್ವಜಾರೋಹಣ ಮತ್ತು ರಾಷ್ಟ್ರಗೀತೆಗೆ ಸೀಮಿತಗೊಳಿಸಬೇಕು. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಅಥವಾ ಮನೆಯಲ್ಲಿ ಔತಣವ ನ್ನು ನಡೆಸಬಾರದು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...