ಸರ್ಕಾರಿ ಕಚೇರಿಗಳಲ್ಲಿ ಯುಎಸ್‌ಬಿ, ಪೆನ್‌ಡ್ರೈವ್‌ಗಳ ಬಳಕೆ ನಿಷೇಧಿಸಿದ ಜಮ್ಮು ಕಾಶ್ಮೀರ ಸರ್ಕಾರ

Date:

ಸೂಕ್ಷ್ಮವಾಗಿರುವ ಸರ್ಕಾರಿ ಮಾಹಿತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದ ಸರ್ಕಾರವು ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಯುಎಸ್‌ಬಿ ಮತ್ತು ಪೆನ್‌ಡ್ರೈವ್‌ಗಳ ಬಳಕೆಯನ್ನು ನಿಷೇಧಿಸಿದೆ. ಸರ್ಕಾರದ ಆಯುಕ್ತ ಕಾರ್ಯದರ್ಶಿ ಎಂ ರಾಜು ಹೊರಡಿಸಿದ ಅಧಿಕೃತ ಆದೇಶದ ಪ್ರಕಾರ, ಜಮ್ಮು ಕಾಶ್ಮೀರದಲ್ಲಿ ಸೈಬರ್ ಭದ್ರತೆಯನ್ನು ಹೆಚ್ಚಿಸುವ ಗುರಿಯನ್ನು ಈ ಕ್ರಮವು ಹೊಂದಿದೆ.

“ಜಮ್ಮು ಕಾಶ್ಮೀರದಲ್ಲಿ ಸೈಬರ್ ಭದ್ರತೆಯನ್ನು ಹೆಚ್ಚಿಸಲು, ಸೂಕ್ಷ್ಮ ಸರ್ಕಾರಿ ಮಾಹಿತಿಯನ್ನು ರಕ್ಷಿಸಲು, ಡೇಟಾ ಉಲ್ಲಂಘನೆ, ಮಾಲ್‌ವೇರ್ ಎರರ್, ಅನಧಿಕೃತ ಪ್ರವೇಶದ ಅಪಾಯಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಮ್ಮು ಮತ್ತು ಶ್ರೀನಗರದ ನಾಗರಿಕ ಸಚಿವಾಲಯದ ಎಲ್ಲಾ ಆಡಳಿತ ಸರ್ಕಾರಿ ಇಲಾಖೆಗಳಲ್ಲಿ, ಎಲ್ಲಾ ಜಿಲ್ಲೆಗಳ ಉಪಾಯುಕ್ತ ಕಚೇರಿಗಳಲ್ಲಿ ಅಧಿಕೃತ ಸಾಧನಗಳಲ್ಲಿ ಪೆನ್‌ಡ್ರೈವ್ ಬಳಕೆಯನ್ನು ನಿಷೇಧಿಸಲು ನಿರ್ಧರಿಸಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಮೋದಿಯ ಬಿಜೆಪಿ, ಕೇಂದ್ರ ಸರ್ಕಾರದ ದಮನನೀತಿಗೆ ಉತ್ತರ ಕೊಟ್ಟ ಜಮ್ಮು-ಕಾಶ್ಮೀರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ ಕಾರ್ಯಾಚರಣೆಗೆ ಅಗತ್ಯವಾಗಿರುವ ಕಾರಣಕ್ಕೆ ಕೆಲವು ಸಂದರ್ಭಗಳಲ್ಲಿ ಪ್ರತಿ ಇಲಾಖೆಯಲ್ಲಿ ಎರಡರಿಂದ ಮೂರು ಪೆನ್‌ಡ್ರೈವ್‌ಗಳ ಬಳಕೆಗೆ ಅನುಮತಿಸಬಹುದು. ಆದರೆ ಅದಕ್ಕೂ ಮುನ್ನ ರಾಷ್ಟ್ರೀಯ ಮಾಹಿತಿ ಕೇಂದ್ರದ ರಾಜ್ಯ ಮಾಹಿತಿ ಅಧಿಕಾರಿ (SIO) ಮನವಿ ಸಲ್ಲಿಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಈ ಸೂಚನೆಯನ್ನು ಪಾಲಿಸದಿದ್ದರೆ ಗಂಭೀರವಾಗಿ ಪರಿಗಣಿಸಲಾಗುವುದು. ಈ ಸಂಬಂಧ ಜಾರಿಯಲ್ಲಿರು ನಿಯಮಗಳ ಅಡಿಯಲ್ಲಿ ಶಿಸ್ತು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಮ್ಮು ಕಾಶ್ಮೀರ ಸರ್ಕಾರವು ಎಚ್ಚರಿಕೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...