ನಿಗೂಢ ಕಾಯಿಲೆಗೆ ಐದು ಮಕ್ಕಳು ಸೇರಿ ಇಡೀ ಕುಟುಂಬವೇ ಬಲಿ; ನನ್ನ ಜಗತ್ತೇ ನಾಶವಾಯಿತು ಎಂದ ಅಸ್ಲಾಂ

Date:

ಜಮ್ಮು ಕಾಶ್ಮೀರದಲ್ಲಿ ಕಾಣಿಸಿಕೊಂಡಿರುವ ನಿಗೂಢ ಕಾಯಿಲೆ ಒಂದು ಕುಟುಂಬವನ್ನೇ ಬಲಿ ತೆಗೆದುಕೊಂಡಿದೆ. ತನ್ನ ಎಲ್ಲಾ ಕುಟುಂಬಸ್ಥರನ್ನು ಕಳೆದುಕೊಂಡ ಮೊಹಮ್ಮದ್ ಅಸ್ಲಾಂ “ನನ್ನ ಜಗತ್ತೇ ನಾಶವಾಯಿತು” ಎಂದು ಭಾವುಕರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಗಡಿ ಜಿಲ್ಲೆಯ ದೂರದ ಬುಧಾಲ್ ಗ್ರಾಮದಲ್ಲಿರುವ ಅಸ್ಲಾಂ ಒಂದು ವಾರದೊಳಗೆ ತನ್ನ ಚಿಕ್ಕಪ್ಪ, ಚಿಕ್ಕಮ್ಮ, ಮೂವರು ಗಂಡು ಮಕ್ಕಳು, ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಜಮ್ಮು-ಕಾಶ್ಮೀರ | ನಿಗೂಢ ಕಾಯಿಲೆ; ಒಂದೇ ಗ್ರಾಮದಲ್ಲಿ 10 ಮಕ್ಕಳು ಸೇರಿ 13 ಮಂದಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ಬೆಳಿಗ್ಗೆ ಅಸ್ಲಾಂ ಅವರ ಚಿಕ್ಕಮ್ಮ ಜಟ್ಟಿ ಬೇಗಂ (60) ನಿಗೂಢ ಕಾಯಿಲೆಗೆ ಬಲಿಯಾದರು. ಈ ಮೂಲಕ ಈ ನಿಗೂಢ ಕಾಯಿಲೆಯಿಂದ ಸಾವನ್ನಪ್ಪಿದ್ದವರು ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಈವರೆಗೆ ನಾಲ್ವರು ವಯಸ್ಕರು ಮತ್ತು 12 ಮಕ್ಕಳು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ.

ಈ ವರ್ಷದ ಜನವರಿ 9ರಿಂದ ಅಸ್ಲಾಂ ಅವರ ಕುಟುಂಬದಲ್ಲಿ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ. ಅಸ್ಲಾಂ ಅವರ ತಾಯಿಯ ಚಿಕ್ಕಪ್ಪ ಮೊಹಮ್ಮದ್ ಯೂಸುಫ್ (63) ಗುರುವಾರ ನಿಗೂಢ ಕಾಯಿಲೆಯಿಂದ ನಿಧನರಾದರು.

“ಒಂದು ವಾರದಲ್ಲಿ ನನ್ನ ಪ್ರಪಂಚವೇ ನಾಶವಾಗಿದೆ. ಮೂವರು ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳನ್ನು ನಾನು ಕಳೆದುಕೊಂಡಿದ್ದೇನೆ. ಈಗ ನನ್ನ ಏಕೈಕ ಪುತ್ರಿ ಯಾಸ್ಮಿನ್ ಕೌನ್ಸರ್ (15) ಜಮ್ಮುವಿನ ಎಸ್‌ಎಂಜಿಎಸ್‌ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ. ಅವಳು ಬದುಕುಳಿಯುತ್ತಾಳೋ ಇಲ್ಲವೋ ನಮಗೆ ತಿಳಿದಿಲ್ಲ” ಎಂದು ಅಸ್ಲಾಂ ಹೇಳಿದರು. ಇನ್ನು ಯಾಸ್ಮಿನ್ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಗೋಡ್ಸೆಯನ್ನು ಉಳಿಸಿಕೊಳ್ಳಲು ಆತನ ಪೋಷಕರು ಆತನಿಗೆ ಹೆಣ್ಣುಡುಗೆ ತೊಡಿಸಿ ಹೆಣ್ಣಾಗಿ ಬೆಳೆಸಿದ್ದರಂತೆ

2024ರ ಡಿಸೆಂಬರ್ 7ರಿಂದ ಜಮ್ಮು ಕಾಶ್ಮೀರದಲ್ಲಿ ವಿಚಿತ್ರ ಕಾಯಿಲೆಗೆ ಹಲವರು ಬಲಿಯಾಗುತ್ತಿದ್ದಾರೆ. ಒಂದು ಕಾರ್ಯಕ್ರಮವೊಂದರಲ್ಲಿ ಊಟ ಮಾಡಿದ ಬಳಿಕ ಹಲವು ಮಂದಿ ಅಸ್ವಸ್ಥರಾಗಿದ್ದರು. ಆದರೆ “ಫಜಲ್ ಅವರ ಮನೆಯ ಕಾರ್ಯಕ್ರಮದಲ್ಲಿ 30-40 ಜನರು ಊಟ ಮಾಡಿದ್ದಾರೆ. ಕೇವಲ ಮೂರು ಕುಟುಂಬದವರು ಮಾತ್ರ ಏಕೆ ಅಸ್ವಸ್ಥರಾಗಿದ್ದಾರೆ” ಎಂದು ಅಸ್ಲಾಂ ಪ್ರಶ್ನಿಸಿದ್ದಾರೆ.

ಸದ್ಯ ಗ್ರಾಮದಲ್ಲಿ ಸಾವಿರಾರು ಮಂದಿಯ ಮಾದರಿಯನ್ನು ಪಡೆಯಲಾಗಿದ್ದು, ಯಾವುದೇ ವೈರಲ್ ಅಥವಾ ಕಾಯಿಲೆ ಪತ್ತೆಯಾಗಿಲ್ಲ. ಆದ್ದರಿಂದ ಈ ವಿಭಿನ್ನ ಮಾದರಿಗಳ ಪರೀಕ್ಷೆ ನಡೆಸಲಾಗುತ್ತಿದೆ. ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಇದು ಸಾಂಕ್ರಾಮಿಕ ರೋಗವಲ್ಲ ಎಂಬುದು ಸಾಬೀತಾಗಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...