ಜಮ್ಮು ಕಾಶ್ಮೀರ | ಸೇನಾ ವಾಹನ ಅಪಘಾತ; ಮೃತ ಐವರು ಯೋಧರಲ್ಲಿ ಮೂವರು ಕನ್ನಡಿಗರು

Date:

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಬಲ್ನೋಯಿ ಪ್ರದೇಶದಲ್ಲಿ ನಿನ್ನೆ (ಡಿಸೆಂಬರ್ 24) ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರು ಯೋಧರ ಪೈಕಿ ಮೂವರು ಕನ್ನಡಿಗರು ಎಂದು ವರದಿಯಾಗಿದೆ.

ಮೃತ ಮೂವರು ಯೋಧರನ್ನು ಬೆಳಗಾವಿ ಜಿಲ್ಲೆಯ ಸಾಂಬ್ರಾ ಗ್ರಾಮದ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರದ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮತ್ತು ಮಹಾಲಿಂಗಪುರದ ಮಹೇಶ್ ಮರಿಗೊಂಡ (25) ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | 350 ಅಡಿ ಕಣಿವೆಗೆ ಉರುಳಿದ ಸೇನಾ ವಾಹನ: ಐವರು ಸೈನಿಕರು ಸಾವು, ಹಲವರಿಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

18 ಸೈನಿಕರು ಪ್ರಯಾಣಿಸುತ್ತಿದ್ದ ಸೇನಾ ವಾಹನ 350 ಅಡಿ ಆಳದ ಕಣಿವೆಗೆ ಉರುಳಿದ್ದು, ಐವರು ಯೋಧರು ಸಾವನ್ನಪ್ಪಿದ್ದಾರೆ. ಹಲವು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. “ಜಮ್ಮು ಕಾಶ್ಮೀರದ ಪೂಂಚ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...