ಜಮ್ಮು ಕಾಶ್ಮೀರ | ಭಯೋತ್ಪಾದಕ ದಾಳಿ; ವೈದ್ಯ ಸೇರಿ 7 ಕಾರ್ಮಿಕರ ಸಾವು

Date:

ಜಮ್ಮು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುರಂಗ ನಿರ್ಮಾಣ ಸ್ಥಳದಲ್ಲಿ ಭಾನುವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಓರ್ವ ವೈದ್ಯ ಮತ್ತು ಆರು ಕಾರ್ಮಿಕರು ಸೇರಿದಂತೆ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಕಾರ್ಮಿಕರಲ್ಲಿ ಸ್ಥಳೀಯರು ಮತ್ತು ಇತರೆ ರಾಜ್ಯದವರು ಇದ್ದರು. ಗುಂಡ್‌ನಲ್ಲಿರುವ ನಿರ್ಮಾಣ ಸ್ಥಳದಲ್ಲಿ ಕೆಲಸ ಮುಗಿಸಿ ತಮ್ಮ ಶಿಬಿರಕ್ಕೆ ಮರಳುತ್ತಿದ್ದಾಗ ಈ ದಾಳಿ ನಡೆದಿದೆ. ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.

ಭಯೋತ್ಪಾದಕ ದಾಳಿಯಿಂದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ವೈದ್ಯ ಸೇರಿ ಇತರ ಗಾಯಾಳುಗಳು ಬಳಿಕ ಮೃತಪಟ್ಟಿದ್ದಾರೆ. ಇನ್ನೂ ಐವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರನ್ನು ಡಾ. ಶಾನವಾಜ್, ಫಹೀಮ್ ನಜೀರ್, ಕಲೀಂ, ಮೊಹಮ್ಮದ್ ಹನೀಫ್, ಶಶಿ ಅಬ್ರೋಲ್, ಅನಿಲ್ ಶುಕ್ಲಾ ಮತ್ತು ಗುರ್ಮೀತ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

ಈ ನಡುವೆ ಭಯೋತ್ಪಾದಕ ದಾಳಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಖಂಡಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಪ್ರಮಾಣ ವಚನ ಸ್ವೀಕರಿಸಿದ ಜೆ & ಕೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ, “ನಾಗರಿಕರ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಯು ಹೇಡಿತನದ ಕೃತ್ಯವಾಗಿದೆ. ಹೊಣೆಗಾರರು ನಮ್ಮ ಭದ್ರತಾ ಪಡೆಗಳಿಂದ ಕಠಿಣ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧನ ಮೃತದೇಹ ಪತ್ತೆ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಹತ್ಯೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. “ಈ ಕೃತ್ಯವು ಮಾನವೀಯತೆ ವಿರುದ್ದದ ಅಪರಾಧವಾಗಿದೆ. ಇಂತಹ ದುಷ್ಕೃತ್ಯಗಳ ವಿರುದ್ಧ ಇಡೀ ರಾಷ್ಟ್ರ ಒಗ್ಗಟ್ಟಾಗಿ ನಿಂತಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ” ಎಂದು ಹಾರೈಸಿದರು.

ಇನ್ನು “ಹಲವು ಗಾಯಗೊಂಡ ಕಾರ್ಮಿಕರನ್ನು ಚಿಕಿತ್ಸೆಗಾಗಿ ಶ್ರೀನಗರದ ಎಸ್‌ಕೆಐಎಂಎಸ್‌ಗೆ ಸ್ಥಳಾಂತರಿಸಲಾಗಿದೆ. ಆದ್ದರಿಂದ ಸಾವುನೋವುಗಳ ಅಂಕಿಅಂಶಗಳು ಹೆಚ್ಚಾಗಬಹುದು” ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ. ಹಾಗೆಯೇ ಪ್ರತ್ಯೇಕ ಹೇಳಿಕೆಯಲ್ಲಿ ಈ ದಾಳಿಯನ್ನು ‘ಭೀಕರ’ ಕೃತ್ಯ ಎಂದು ವಿವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...