ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಚಿನ್ನಾಭರಣ: ಹಸ್ತಾಂತರ ಪ್ರಕ್ರಿಯೆಗೆ ನೀಡಿದ್ದ ತಡೆ ವಿಸ್ತರಿಸಿದ ಹೈಕೋರ್ಟ್‌

Date:

ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅಕ್ರಮವಾಗಿ ಗಳಿಸಿದ್ದ ಆಭರಣ ಮತ್ತು ಸ್ಥಿರಾಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ವಿಸ್ತರಿಸಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.

ಜಯಲಲಿತಾ ಪುತ್ರಿ ಎಂದು ಉಲ್ಲೇಖಿಸಿ ಜೆ ದೀಪಾ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ ಮೊಹಮ್ಮದ್‌ ನವಾಝ್ ಅವರಿದ್ದ ಏಕಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು.

ಜಯಲಲಿತಾ ಪ್ರಕರಣದ ವಿಚಾರಣೆ ನಡೆಸಿದ್ದರ ವೆಚ್ಚವಾಗಿ ತಮಿಳುನಾಡು ಸರ್ಕಾರವು ಕರ್ನಾಟಕ ಸರ್ಕಾರಕ್ಕೆ 5 ಕೋಟಿ ರೂಪಾಯಿ ಪಾವತಿಸಬೇಕು ಎಂದು ವಿಚಾರಣಾಧೀನ ನ್ಯಾಯಾಲಯ ಆದೇಶಿಸಿತ್ತು. ಈ ಆದೇಶಕ್ಕೆ ತಡೆ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು, “ಪ್ರಸ್ತುತ ಅರ್ಜಿಯು ಆಭರಣ ಮತ್ತು ಸ್ಥಿರಾಸ್ತಿಗೆ ಸಂಬಂಧಿಸಿದ್ದು. 5 ಕೋಟಿ ರೂಪಾಯಿಯನ್ನು ಕರ್ನಾಟಕ ಸರ್ಕಾರಕ್ಕೆ ಪಾವತಿಸುವ ಆದೇಶಕ್ಕೆ ತಡೆಯನ್ನು ವಿಚಾರಣಾಧೀನ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸುವ ಮೂಲಕ ಕೋರಬಹುದು ಎಂದು ಹೇಳಿ, ವಿಚಾರಣೆ ಮುಂದೂಡಿತು.

ಬೆಂಗಳೂರಿನ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಚಿನ್ನಾಭರಣ ಮತ್ತು ಇತರ ಪರಿಕರಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಕಳೆದ ಮಾರ್ಚ್ 5ರಂದು ತಡೆ ನೀಡಿತ್ತು. ಹೀಗಾಗಿ, ಮಾರ್ಚ್‌ 6 ಮತ್ತು 7ರಂದು ಜಯಲಲಿತಾ ಅವರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ವಿಶೇಷ ಸಿಬಿಐ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ಬಿದ್ದಿತ್ತು.

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರಿಂದ ವಶಪಡಿಸಿಕೊಳ್ಳಲಾದ ನೂರಾರು ಕೋಟಿ ಮೌಲ್ಯದ ಚಿನ್ನಾಭರಣ ಸೇರಿ ಇತರೆ ವಸ್ತುಗಳನ್ನು ಕಾನೂನಾತ್ಮಕ ವಾರಸುದಾರರಾದ ತಮಗೆ ಬಿಡುಗಡೆ ಮಾಡಬೇಕು ಎಂದು ಜಯಲಲಿತಾ ಅವರ ಸಹೋದರನ ಮಕ್ಕಳು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯವು 2023ರ ಜುಲೈ 12ರಂದು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರಲ್ಲಿ ಒಬ್ಬರಾದ ಜೆ ದೀಪಾ ಎಂಬುವವರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಮೊಹಮ್ಮದ್‌ ನವಾಝ್ ಅವರಿದ್ದ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಹಸ್ತಾಂತರ ಮಾಡುವ ಪ್ರಕ್ರಿಯೆಗೆ ತಡೆ ನೀಡಿತ್ತು.‌ ಈಗ ಅದೇ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.

ಜಯಲಲಿತಾ ಅವರಿಗೆ ಸೇರಿದ 28 ಕೆಜಿ ಚಿನ್ನ, ವಜ್ರಾಭರಣಗಳು, 800 ಕೆಜಿ ಬೆಳ್ಳಿ ಆಭರಣಗಳು, 11,344 ದುಬಾರಿ ರೇಷ್ಮೆ ಸೀರೆಗಳು ಮತ್ತು 740 ದುಬಾರಿ ಸ್ಯಾಂಡಲ್‌ಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡಬೇಕು. ಪ್ರಕರಣಕ್ಕಾಗಿನ ಐದು ಕೋಟಿ ವೆಚ್ಚವನ್ನು ಕರ್ನಾಟಕ ಸರ್ಕಾರಕ್ಕೆ ನೀಡುವಂತೆ ಹೈಕೋರ್ಟ್ ಆದೇಶಿಸಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...