ನಿತೀಶ್ ಕುಮಾರ್‌ಗೆ ‘ಭಾರತ ರತ್ನ’ ನೀಡಿ: ಪೋಸ್ಟರ್ ಹಾಕಿದ ಜೆಡಿಯು ನಾಯಕ!

Date:

ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರಿಗೆ ನೀಡಬೇಕು ಎಂದು ಒತ್ತಾಯಿಸಿ ಜನತಾ ದಳ (ಯುನೈಟೆಡ್) ನಾಯಕರೊಬ್ಬರು ಜೆಡಿಯು ಕಚೇರಿಯ ಹೊರಭಾಗದಲ್ಲಿ ಪೋಸ್ಟರ್‌ ಒಂದನ್ನು ಹಾಕಿದ್ದಾರೆ. ಪಾಟ್ನಾದ ಹಲವು ಸ್ಥಳಗಳಲ್ಲಿಯೂ ಪೋಸ್ಟರ್ ಹಾಕಿದ್ದಾರೆ.

ಜೆಡಿಯು ವರಿಷ್ಠ ನಿತೀಶ್ ಕುಮಾರ್‌ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುತ್ತಿದ್ದ ಬಿರ್ಚಂದ್ ಪಟೇಲ್ ಮಾರ್ಗದಲ್ಲಿರುವ ಜೆಡಿಯು ಕಚೇರಿಯ ಪ್ರವೇಶ ದ್ವಾರದ ಪಕ್ಕದಲ್ಲಿ ನಿತೀಶ್ ಕುಮಾರ್‌ಗೆ ಭಾರತ ರತ್ನ ನೀಡಬೇಕು ಎಂಬ ಆಗ್ರಹದ ಪೋಸ್ಟರ್ ಅನ್ನು ಹಾಕಲಾಗಿದೆ.

ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಹಿರಿಯ ಜೆಡಿಯು ನಾಯಕರೊಬ್ಬರು, “ಭಾರತ ರತ್ನದ ಬೇಡಿಕೆಯು ಜೆಡಿಯುನ ಅಧಿಕೃತ ನಿಲುವು ಎಂದು ನಾವು ಹೇಳಲಾರೆವು. ಬಹುಶಃ ಕೆಲವು ನಾಯಕರುಗಳ ಬೇಡಿಕೆ ಆಗಿರಬಹುದು. ಆದರೆ ನಿತೀಶ್ ಕುಮಾರ್ ಅತ್ಯುನ್ನತ ಗೌರವಕ್ಕೆ ಅರ್ಹರು ಎಂದು ಪ್ರತಿಯೊಬ್ಬ ಜೆಡಿಯು ಕಾರ್ಯಕರ್ತರು ನಂಬುತ್ತಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್‌ ಅವರನ್ನು ‘ಮಿಮಿಕ್’ ಮಾಡಿದ ಆರ್‌ಜೆಡಿ ಎಂಎಲ್‌ಸಿ ಸದನದಿಂದ ಉಚ್ಚಾಟನೆ

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ನೇತೃತ್ವ ವಹಿಸಲಿರುವ ಕುಮಾರ್ ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಕೃಷಿ ಮತ್ತು ರೈಲ್ವೆಯಂತಹ ಪ್ರಮುಖ ಖಾತೆಯನ್ನು ನಿರ್ವಹಿಸಿದ್ದರು.

ಯಾವ ಸಾಧನೆಗೆ ಭಾರತ ರತ್ನ ಎಂದ ನೆಟ್ಟಿಗರು

ಇನ್ನು ಈ ಪೋಸ್ಟರ್‌ಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. “ಒಂದು ಕಡೆ ಬಿಹಾರ ಪ್ರವಾಹವನ್ನು ಎದುರಿಸುತ್ತಿದೆ. ಸಾವಿರಾರು ಜನರು ಪ್ರವಾಹದಿಂದ ತೊಂದರೆಗೆ ಒಳಗಾಗಿದ್ದಾರೆ. ಇನ್ನೊಂದು ಕಡೆ ರಾಜಕೀಯ ನಾಯಕರು ಸಿಎಂ ನಿತೀಶ್ ಕುಮಾರ್‌ಗೆ ಭಾರತ ರತ್ನ ನೀಡಬೇಕು ಎಂದು ಜೆಡಿಯು ನಾಯಕರು ಆಗ್ರಹಿಸುತ್ತಿದ್ದಾರೆ” ಎಂದು ದಿಲೀಪ್ ಕುಮಾರ್ ಚೌಧರಿ ಎಂಬ ನೆಟ್ಟಿಗರೊಬ್ಬರು ಟೀಕಿಸಿದ್ದಾರೆ.

ಇದನ್ನು ಓದಿದ್ದೀರಾ? ಆಧ್ಯಾತ್ಮಿಕತೆಯತ್ತ ಸಾಗುತ್ತಿದ್ದೇನೆ: ರಾಜಕೀಯ ಪ್ರವೇಶ ವದಂತಿಗೆ ತೆರೆ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ

“ಹೌದು ಬಿಜೆಪಿಯು ಮೂರನೇ ಬಾರಿಗೆ ಎನ್‌ಡಿಎ ಸರ್ಕಾರ ರಚಿಸಲು ಸಹಾಯ ಮಾಡಿದ ನಿತೀಶ್ ಕುಮಾರ್ ಅವರಿಗೆ ಭಾರತ ರತ್ನ ನೀಡಲೇಬೇಕು. ಬಿಜೆಪಿ ತನ್ನ ಸರ್ಕಾರ ಉಳಿಸಲು ಭಾರತ ರತ್ನ ನೀಡಲೂ ಬಹುದು” ಎಂದು ಮತ್ತೋರ್ವ ನೆಟ್ಟಿಗರು ವ್ಯಕ್ತವಾಡಿದ್ದರೆ, “ಯಾವ ಖುಷಿಗೆ ಭಾರತ ರತ್ನ ನೀಡಬೇಕು? ಬಿಹಾರವನ್ನು 20 ವರ್ಷದಿಂದ ವಿನಾಶದ ಅಂಚಿಗೆ ಕೊಂಡೊಯ್ಯುತ್ತಿದ್ದಾರೆ. ಯಾವ ಸಾಧನೆಗಾಗಿ ಭಾರತ ರತ್ನ ನೀಡಬೇಕು” ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಇನ್ನು ಬಿಹಾರದಲ್ಲಿ ಕಳೆದ ಹಲವು ತಿಂಗಳುಗಳಿಂದ ಅಲ್ಲಲ್ಲಿ ಸೇತುವೆ ಕುಸಿತವಾಗುತ್ತಿರುವುದನ್ನು ಕೂಡಾ ನೆಟ್ಟಿಗರು ಪ್ರಸ್ತಾಪಿಸಿದ್ದಾರೆ. ಬಿಹಾರದಲ್ಲಿ ನಾಲ್ಕು ತಿಂಗಳ ಅವಧಿಯಲ್ಲಿ 17ಕ್ಕೂ ಅಧಿಕ ಸೇತುವೆ ಕುಸಿದಿದೆ. ಇದಕ್ಕೆ ಕಳಪೆ ಕಾಮಗಾರಿ ಮತ್ತು ಸರಿಯಾದ ಸಮಯಕ್ಕೆ ಸೇತುವೆ ರಿಪೇರಿ ಕಾರ್ಯ ನಿರ್ವಹಿಸದಿರುವುದು ಕಾರಣ ಎಂದು ಆರೋಪಿಸಲಾಗಿದೆ. ಬಿಹಾರದಲ್ಲಿ ಸಾಲು ಸಾಲು ಸೇತುವೆ ಕುಸಿತದ ದಾಖಲೆ ಬರೆದ ನಿತೀಶ್ ಕುಮಾರ್ ಅವರಿಗೆ ಭಾರತ ರತ್ನ ಮಾತ್ರ ನೀಡುವುದಲ್ಲ ಗಿನ್ನಿಸ್ ದಾಖಲೆಗೆ ಅವರ ಹೆಸರು ಸೇರಿಸಬೇಕು ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...