ಬಿಹಾರ, ಆಂಧ್ರ, ಒಡಿಶಾಗೆ ವಿಶೇಷ ಸ್ಥಾನಮಾನಕ್ಕೆ ಜೆಡಿಯು, ವೈಎಸ್ಆರ್‌ಸಿಪಿ, ಬಿಜೆಡಿ ಬೇಡಿಕೆ

Date:

ನವದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಬಿಹಾರ ಹಾಗೂ ಆಂಧ್ರ ಪ್ರದೇಶಗಳಿಗೆ ವಿಶೇಷ ಸ್ಥಾನಮಾನಕ್ಕಾಗಿ ಜೆಡಿಯು ಹಾಗೂ ವೈಎಸ್‌ಆರ್‌ಸಿಪಿ ಪಕ್ಷಗಳ ನಾಯಕರು ಬೇಡಿಕೆಯಿಟ್ಟಿದ್ದಾರೆ. ಆದರೆ ಟಿಡಿಪಿ ಈ ವಿಷಯದಲ್ಲಿ ಮೌನವಹಿಸಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್‌ ರಮೇಶ್ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಜೈರಾಮ್ ರಮೇಶ್, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಿತು.ಈ ಸಭೆಯಲ್ಲಿ ಜೆಡಿಯು ಮತ್ತು ವೈಎಸ್‌ಆರ್‌ಸಿಪಿ ಕ್ರಮವಾಗಿ ಬಿಹಾರ ಮತ್ತು ಆಂಧ್ರ ಪ್ರದೇಶಗಳಿಗೆ ವಿಶೇಷ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದವು. ಆದರೆ ಈ ವಿಷಯದಲ್ಲಿ ಟಿಡಿಪಿ ಮಾತ್ರ ಮೌನವಹಿಸಿತ್ತು” ಎಂದು ತಿಳಿಸಿದ್ದಾರೆ.

“ರಾಜಕೀಯ ವಾತಾವರಣ ಹೇಗೆ ಬದಲಾಗಿದೆ ಊಹಿಸಿ. ಸರ್ವಪಕ್ಷ ಸಭೆಯಲ್ಲಿ ಬಿಜೆಡಿ ನಾಯಕರು ಲೋಕಸಭೆ ಹಾಗೂ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರಣಾಳಿಕೆಯಂತೆ ಒಡಿಶಾ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವುದಾಗಿ ಬಿಜೆಪಿ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ ಭರವಸೆ ನೀಡಿದ್ದರು. ಇದನ್ನು ಈಡೇರಿಸುವಂತೆ ರಕ್ಷಣಾ ಸಚಿವರಿಗೆ ಬಿಜೆಡಿ ನಾಯಕರು ನೆನಪಿಸಿದರು” ಎಂದು ಜೈರಾಮ್‌ ರಮೇಶ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ‘ಭಗವಂತ’ನಿಗೇ ಎಚ್ಚರಿಕೆ ಕೊಟ್ಟರೆ ಭಾಗವತ್?

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಡಿ ನಾಯಕ ಸಸ್ಮಿತ್ ಪಾತ್ರ, ತಮ್ಮ ಪಕ್ಷ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸಿದೆ ಎಂದು ತಿಳಿಸಿದರು.

ಎನ್‌ಡಿಎ ಪ್ರಮುಖ ಮಿತ್ರ ಪಕ್ಷವಾಗಿರುವ ಜೆಡಿಯು ಇತ್ತೀಚಿಗಷ್ಟೆ ತಮ್ಮ ರಾಜ್ಯದ ವಿಧಾನಸಭೆಯಲ್ಲಿ ಬಿಹಾರಕ್ಕೆ ವಿಶೇಷ ಸ್ಥಾನಮಾನ ಅಥವಾ ಪ್ಯಾಕೇಜ್‌ ನೀಡುವಂತೆ ನಿರ್ಣಯ ಅಂಗೀಕರಿಸಿತ್ತು.

ವೈಎಸ್‌ಆರ್‌ಸಿಪಿ ನಾಯಕರು ಕೂಡ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಬೇಡಿಕೆಯಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...