ರಾಜಸ್ಥಾನ | ಜೆಇಇ ಆಕಾಂಕ್ಷಿ ಆತ್ಮಹತ್ಯೆ; 24 ಗಂಟೆಯಲ್ಲೇ ಎರಡನೇ ಪ್ರಕರಣ

Date:

ತನ್ನ ಪಿಜಿ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು 20 ವರ್ಷದ ಜೆಇಇ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ನಡೆದಿದೆ. ಕಳೆದ 24 ಗಂಟೆಗಳಲ್ಲಿ ಎರಡನೇ ಪ್ರಕರಣ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೆಇಇ ಆಕಾಂಕ್ಷಿಯನ್ನು ಮಧ್ಯಪ್ರದೇಶದ ಗುಣ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ. ಕಳೆದ ವರ್ಷ ಮೇ ತಿಂಗಳಿನಿಂದ ಕೋಟಾದ ಕೋಚಿಂಗ್ ಸಂಸ್ಥೆಯಲ್ಲಿ ಜೆಇಇಗೆ ತಯಾರಿ ನಡೆಸುತ್ತಿದ್ದರು. ವಿಜ್ಞಾನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಡಕಾನಿಯಾ ಪ್ರದೇಶದ ಪಿಜಿ ಕೋಣೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಕೋಟಾ: ನೀಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ; ಈ ವರ್ಷದಲ್ಲಿ 25ನೇ ಘಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಚಿಂಗ್ ಕೇಂದ್ರ, ಕೋಚಿಂಗ್ ರಾಜಧಾನಿ ಎಂದೇ ಕರೆಯಲಾಗುವ ಕೋಟಾದಲ್ಲಿ 24 ಗಂಟೆಗಳಲ್ಲಿ ಕೋಚಿಂಗ್ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಎರಡನೇ ಪ್ರಕರಣ ಇದಾಗಿದೆ. ಹರಿಯಾಣದ ಮತ್ತೊಬ್ಬ ಜೆಇಇ ಆಕಾಂಕ್ಷಿ ನೀರಜ್ (19) ಮಂಗಳವಾರ ಸಂಜೆ ತಡರಾತ್ರಿ ತಮ್ಮ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬುಧವಾರ ರಾತ್ರಿ ವೇಳೆಗೆ ಅಭಿಷೇಕ್ ಎಂಬ ಜೆಇಇ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ವಿಜ್ಞಾನ ನಗರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಮುಖೇಶ್ ಮೀನಾ, “ಮತ್ತೋರ್ವ ಜೆಇಇ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವಕನ ಮೃತದೇಹವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಕುಟುಂಬಸ್ಥರು ಆಗಮಿಸಿದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು” ಎಂದು ತಿಳಿಸಿದರು.

ಇನ್ನು ಪಿಜಿ ಕೊಠಡಿಯಲ್ಲಿ ಯಾವುದೇ ಡೆತ್‌ನೋಟ್ ಕಂಡುಬಂದಿಲ್ಲ. ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ತಿಳಿದುಬಂದಿಲ್ಲ ಎಂದು ಎಸ್‌ಎಚ್‌ಒ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ರಾಜಸ್ಥಾನ| ಕೋಟಾದಲ್ಲಿ ಐಐಟಿ-ಜೆಇಇ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಈ ವರ್ಷದ 11ನೇ ಪ್ರಕರಣ

ಕೋಟಾವನ್ನು ಕೋಚಿಂಗ್‌ಗಳ ರಾಜಧಾನಿ ಎಂದೇ ಕರೆಯಲಾಗುತ್ತದೆ. ಕೋಚಿಂಗ್‌ ಸೆಂಟರ್‌ನಲ್ಲಿ ಮಾನಸಿಕ ಖಿನ್ನತೆ, ಒತ್ತಡಕ್ಕೆ ಒಳಗಾಗಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಹಲವು ಘಟನೆಗಳು ಕೋಟಾದಲ್ಲಿ ನಡೆದಿದೆ.

2023ಕ್ಕೆ ಹೋಲಿಸಿದರೆ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆಯ ಪ್ರಮಾಣವು 2024ರಲ್ಲಿ ಶೇಕಡ 50ರಷ್ಟು ಕಡಿಮೆಯಾಗಿದೆ ಎಂದು ಕೋಟಾ ಜಿಲ್ಲಾಡಳಿತ ಹೇಳಿದೆ. ಕೋಟಾದಲ್ಲಿ 2023ರಲ್ಲಿ 26 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರೆ 2024ರಲ್ಲಿ 17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...