ಅಕ್ರಮ ಹಣ ವರ್ಗಾವಣೆ ಪ್ರಕರಣ: ಜೆಟ್ ಏರ್‌ವೇಸ್‌ನ 538 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

Date:

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್‌ (ಇಂಡಿಯಾ) ಲಿಮಿಟೆಡ್‌ನ  500 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ.

ವಶಪಡಿಸಿಕೊಂಡಿರುವ ಆಸ್ತಿಯಲ್ಲಿ ಜೆಟ್ ಏರ್‌ವೇಸ್‌ ಸಂಸ್ಥಾಪಕ ನರೇಶ್ ಗೋಯಲ್, ಪತ್ನಿ ಅನಿತಾ ಗೋಯಲ್ ಮತ್ತು ಪುತ್ರ ನಿವಾನ್ ಗೋಯಲ್ ಸೇರಿದಂತೆ ಲಂಡನ್, ದುಬೈ ಮತ್ತು ಭಾರತದ ಕೆಲವು ರಾಜ್ಯಗಳಲ್ಲಿ ಕಂಪನಿಗಳು ಮತ್ತು ಸಂಬಂಧಪಟ್ಟ ಹೆಸರಿನಲ್ಲಿ ನೋಂದಾಯಿಸಲಾದ 17 ವಸತಿ ಫ್ಲಾಟ್‌ಗಳು, ಬಂಗಲೆಗಳು ಮತ್ತು ವಾಣಿಜ್ಯ ಕಟ್ಟಡಗಳು ಸೇರಿವೆ.

ಕೇಂದ್ರ ತನಿಖಾ ಸಂಸ್ಥೆ ಕನಿಷ್ಠ 538 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಥವಾ ಪಿಎಂಎಲ್ಎ, 2002ರ ಅಡಿಯಲ್ಲಿ ಜಪ್ತಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋಯಲ್‌ಗಳ ಹೊರತಾಗಿ, ಕೆಲವು ಆಸ್ತಿಗಳನ್ನು ಜೆಟೈರ್ ಪ್ರೈವೇಟ್ ಲಿಮಿಟೆಡ್ ಮತ್ತು ಜೆಟ್ ಎಂಟರ್‌ಪ್ರೈಸಸ್‌ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ನೋಂದಾಯಿಸಲಾಗಿದೆ.

ಕೆನರಾ ಬ್ಯಾಂಕ್ ಸಲ್ಲಿಸಿರುವ ವಂಚನೆ ಪ್ರಕರಣದಲ್ಲಿ ಇಡಿ ನಿನ್ನೆ ಗೋಯಲ್ ಮತ್ತು ಇತರ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.

ಈ ಸುದ್ದಿ ಓದಿದ್ದೀರಾ? ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ನಿರೀಕ್ಷಣಾ ಜಾಮೀನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಬ್ಯಾಂಕ್ ಸಲ್ಲಿಸಿರುವ ಎಫ್ಐಆರ್‌ನಲ್ಲಿ 848 ಕೋಟಿ ರೂ. ವರೆಗಿನ ಸಾಲದ ಮಿತಿಗಳನ್ನು ಮತ್ತು ಸಾಲವನ್ನು ಮಂಜೂರು ಮಾಡಿದೆ ಎಂದು ಆರೋಪಿಸಿದೆ. ಅದರಲ್ಲಿ 538 ಕೋಟಿ ರೂ. ಬಾಕಿ ಇದೆ.

ಗೋಯಲ್ ಅವರನ್ನು ಪಿಎಂಎಲ್ಎ ಅಡಿಯಲ್ಲಿ ಸೆಪ್ಟೆಂಬರ್ 1 ರಂದು ಇಡಿ ಬಂಧಿಸಿತು. ಸದ್ಯ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ ಇರಿಸಲಾಗಿದೆ.

ಜೆಟ್ ಏರ್‌ವೇಸ್ ಸಂಸ್ಥಾಪಕರು ಇತರ ದೇಶಗಳಲ್ಲಿ ಟ್ರಸ್ಟ್‌ಗಳನ್ನು ರಚಿಸುವ ಮೂಲಕ ಹಣವನ್ನು ವರ್ಗಾಯಿಸಿದ್ದಾರೆ ಎಂದು ಇಡಿ ಆರೋಪಿಸಿದೆ. ಆ ಟ್ರಸ್ಟ್​ಗಳ ಮೂಲಕ ಚಿರಾಸ್ತಿಗಳನ್ನು ಖರೀದಿಸಲಾಗಿದೆ. ಆಸ್ತಿ ಮಾತ್ರವಲ್ಲ, ಈ ಸಾಲದ ಹಣವನ್ನೇ ಬಳಸಿ ಬಟ್ಟೆಬರೆ, ಪೀಠೋಪಕರಣ, ಒಡವೆ ಇತ್ಯಾದಿಗಳನ್ನು ಗೋಯಲ್ ಕುಟುಂಬ ಸದಸ್ಯರು ಖರೀದಿ ಮಾಡಿರುವುದು ಆಡಿಟಿಂಗ್ ವೇಳೆ ಬೆಳಕಿಗೆ ಬಂದಿತ್ತು.

ಈ ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದೆ. ಎರಡು ತಿಂಗಳ ಹಿಂದೆ ನಡೆದ ವಿಚಾರಣೆ ವೇಳೆ ನರೇಶ್ ಗೋಯಲ್ ಅವರು ತಮ್ಮ ಹಣ ಬಳಕೆಯ ರೀತಿಯನ್ನು ಸಮರ್ಥಿಸಿಕೊಂಡಿದ್ದರು. ವೈಮಾನಿಕ ವಲಯವು ಬ್ಯಾಂಕ್ ಸಾಲದ ಮೇಲೆ ನಿಂತಿರುತ್ತವೆ. ಸಾಲದ ಹಣದ ಬಳಕೆಯನ್ನು ಮನಿ ಲಾಂಡರಿಂಗ್ ಎನ್ನಲಾಗದು ಎಂಬುದು ಅವರ ವಾದ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...