ಜಾರ್ಖಂಡ್‌ | ಶಿವರಾತ್ರಿ ಆಚರಣೆ ವೇಳೆ ಕೋಮು ಘರ್ಷಣೆ; ಮೂವರ ಬಂಧನ

Date:

ಶಿವರಾತ್ರಿ ಆಚರಣೆಯ ಸಂದರ್ಭದಲ್ಲಿ ಸ್ಪೀಕರ್‌ಗಳನ್ನು ಅಳವಡಿಸುವ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಇಚಕ್ ಬ್ಲಾಕ್‌ನ ಡುಮ್ರಾನ್ ಗ್ರಾಮದಲ್ಲಿ ನಡೆದಿದೆ. ಘರ್ಷಣೆ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇತರರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಡುಮ್ರಾನ್ ಗ್ರಾಮದಲ್ಲಿ ಶಾಲೆಯ ಮುಂದೆ ಧಾರ್ಮಿಕ ಧ್ವಜಗಳು ಮತ್ತು ಧ್ವನಿವರ್ಧಕವನ್ನು ಅಳವಡಿಸಲಾಗಿತ್ತು. ಶಾಲೆ ಎದುರು ಹಾಕಬಾರದೆಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಹೀಗಾಗಿ, ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಹಿಂಸಾಚಾರಕ್ಕೆ ಕಾರಣವಾಯಿತು. ಎರಡೂ ಕಡೆಯವರು ಕಲ್ಲು-ಇಟ್ಟಿಗೆಗಳ ತೂರಾಟ ನಡೆಸಿದ್ದಾರೆ. ಕೆಲವರಿಗೆ ಗಾಯಗಳಾಗಿವೆ ಎಂದು ಇಚಕ್ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಸಂತೋಷ್ ಕುಮಾರ್ ಹೇಳಿದ್ದಾರೆ.

ಹಿಂಸಾಚಾರದ ಸಂದರ್ಭದಲ್ಲಿ ಮೂರು ಮೋಟಾರ್ ಸೈಕಲ್‌ಗಳು ಮತ್ತು ಒಂದು ಕಾರನ್ನು ಸುಟ್ಟುಹಾಕಲಾಗಿದೆ. ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಹಜಾರಿಬಾಗ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏತನ್ಮಧ್ಯೆ, ‘ಸಮಸ್ಯೆಯನ್ನು ಪರಿಹರಿಸಲು’ ಎರಡು ಸಮುದಾಯಗಳ ಸದಸ್ಯರು ಚರ್ಚೆಯಲ್ಲಿ ತೊಡಗಿದ್ದಾರೆ ಎಂದು ಇಚಕ್ ಬ್ಲಾಕ್ ಬಿಡಿಒ ಹೇಳಿದರು.

“ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ಸುಮಾರು 150 ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಅಗತ್ಯವಿದ್ದರೆ ಹೆಚ್ಚಿನ ಸಿಬ್ಬಂದಿಯನ್ನು ಕರೆಸಲಾಗುವುದು” ಎಂದು ಬಿಡಿಒ ಹೇಳಿದರು.

ಈ ಹಿಂದೆ, ಮದರಸದೊಳಗೆ ‘ಮಿನಾರ್ ರೀತಿಯ ರಚನೆ’ಯ ಬಗ್ಗೆ ಎರಡೂ ಸಮುದಾಯಗಳ ನಡುವೆ ಭಿನ್ನಾಭಿಪ್ರಾಯವಿತ್ತು ಎಂದು ಬಿಡಿಒ ಹೇಳಿದರು. ಮದರಸದ ಬಳಿ ಧ್ವನಿವರ್ಧಕಗಳನ್ನು ಅಳವಡಿಸಿದಾಗ ಪರಿಸ್ಥಿತಿ ಉಲ್ಬಣಗೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...