‘ಆದಿವಾಸಿ ಜಾತಿಯಲ್ಲ’ ಎಂದ ಜಾರ್ಖಂಡ್ ಹೈಕೋರ್ಟ್; ಜಾತಿ ನಿಂದನೆ ಮಾಡಿದ ಅಧಿಕಾರಿಯ ವಿರುದ್ಧದ ಎಫ್‌ಐಆರ್ ರದ್ದು

Date:

ಮಹಿಳೆಯನ್ನು ‘ಹುಚ್ಚು ಆದಿವಾಸಿ’ ಎಂದು ಕರೆದ ಆರೋಪವನ್ನು ಹೊತ್ತಿರುವ ಸರ್ಕಾರಿ ಅಧಿಕಾರಿಯ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಅನ್ನು ಜಾರ್ಖಂಡ್ ಹೈಕೋರ್ಟ್ ರದ್ದುಗೊಳಿಸಿದೆ. ‘ಆದಿವಾಸಿ’ ಎಂಬ ಪದವು ಜಾತಿಯಲ್ಲ ಎಂದು ಹೈಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಅನಿಲ್ ಕುಮಾರ್ ಚೌಧರಿ ಅವರು ಆದೇಶ ಹೊರಡಿಸಿದ್ದು, ಅವರ ಜಾತಿ ಅಥವಾ ಪಂಗಡವನ್ನು ನಿರ್ದಿಷ್ಟವಾಗಿ ಉಲ್ಲೇಖಿಸದಿದ್ದರೆ, ಅವರು ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದ ಸದಸ್ಯರು ಎಂದು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಪಡಿಸಿದರು.

ಇದನ್ನು ಓದಿದ್ದೀರಾ? ಆಂಧ್ರಪ್ರದೇಶದಲ್ಲಿ ಜಾತಿ ತಾರತಮ್ಯಕ್ಕೆ ದಲಿತ ಸರ್ಕಾರಿ ವೈದ್ಯರ ಬಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುಮ್ಕಾದಲ್ಲಿ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ರಾಜ್ಯ ಸರ್ಕಾರದ ಅಧಿಕಾರಿ ಸುನಿಲ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ರಿಟ್ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ಕುಮಾರ್ ಅವರು ಸಿಟ್ಟಿಗೆದ್ದು ಸುನೀತಾ ಮರಾಂಡಿಯವರ ಆರ್‌ಟಿಐ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿದರು. “ಹುಚ್ಚು ಆದಿವಾಸಿಗಳು, ಕಿರಿಕಿರಿ ಮಾಡಲು ಬರುತ್ತಾರೆ” ಎಂದು ಹೇಳಿದ್ದರು. ಅಶ್ಲೀಲ ಭಾಷೆಯನ್ನು ಬಳಸಿದರು. ಅಸಭ್ಯವಾಗಿ ವರ್ತಿಸಿದರು. ಕಚೇರಿಯಿಂದ ಹೊರಗೆ ತಳ್ಳಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರುದಾರರು ಆರ್‌ಟಿಐ ಅರ್ಜಿಯನ್ನು ಸಲ್ಲಿಸಲು ಒತ್ತಾಯಿಸಿದ್ದರಿಂದ ಸಿಟ್ಟಿಗೆದ್ದ ಅರ್ಜಿದಾರರು ಅವರನ್ನು ತಮ್ಮ ಕೊಠಡಿಯಿಂದ ಹೊರಗೆ ತಳ್ಳಿದರು ಎಂಬುದು ನೇರ ಆರೋಪವಾಗಿದೆ. “ಆಕ್ರಮಣ ಮಾಡುವ ಉದ್ದೇಶದಿಂದ ಕ್ರಿಮಿನಲ್ ಬಲಪ್ರಯೋಗ ಮಾಡಿದರು ಎಂಬ ಆರೋಪ ಅರ್ಜಿದಾರರ ವಿರುದ್ಧ ಇರಲಿಲ್ಲ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಜಾತಿ ದೌರ್ಜನ್ಯ | ದಲಿತ ವ್ಯಕ್ತಿಯ ಬೆತ್ತಲೆ ಮೆರವಣಿಗೆ ಮಾಡಿ ಸವರ್ಣಿಯರ ವಿಕೃತಿ

“ಮಾಹಿತಿದಾರರಿಗೆ ಅಡ್ಡಿಪಡಿಸಿದ ಅಥವಾ ಮಾಹಿತಿದಾರರಿಗೆ ಮುಂದುವರಿಯುವ ಹಕ್ಕಿದೆ ಎಂಬ ದಿಕ್ಕಿನಲ್ಲಿ ಮುಂದುವರಿಯದಂತೆ ತಡೆದ ಯಾವುದೇ ಆರೋಪ ಅರ್ಜಿದಾರರ ವಿರುದ್ಧ ಇಲ್ಲ” ಎಂದು ಪೀಠವು ಉಲ್ಲೇಖಿಸಿದೆ.

ಬುಡಕಟ್ಟು ಜನಾಂಗಕ್ಕೆ ಆದಿವಾಸಿ ಎಂದು ಕೂಡಾ ಕರೆಯಲಾಗುತ್ತದೆ. ನೇರವಾಗಿ ನಿಂದಿಸಲು ಈ ಪದವನ್ನೇ ಬಳಸಲಾಗುತ್ತದೆ. ಹಾಗಿರುವಾಗ ಇದು ಜಾತಿಯಲ್ಲ ಎಂಬ ಕಾರಣ ನಿಂದನೆಯಲ್ಲ ಎಂದು ಪರಿಗಣಿಸುವ ಹೈಕೋರ್ಟ್ ಆದೇಶ ಸದ್ಯ ಚರ್ಚೆಗೆ ಗ್ರಾಸವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...