ಜಾರ್ಖಂಡ್ ಭೂ ಹಗರಣ| ಮಾಜಿ ಸಿಎಂ ಹೇಮಂತ್ ಸೊರೇನ್‌ ನ್ಯಾಯಾಂಗ ಬಂಧನ 14 ದಿನ ವಿಸ್ತರಣೆ

Date:

ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಅವರ ನ್ಯಾಯಾಂಗ ಬಂಧನವನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಲಯವು 14 ದಿನಗಳ ಕಾಲ ವಿಸ್ತರಣೆ ಮಾಡಿದೆ.

ಭೂ ಹಗರಣದ ಮೂಲಕ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ರಾಂಚಿಯ ಬಿರ್ಸಾ ಮುಂಡಾ ಸೆಂಟ್ರಲ್ ಜೈಲಿನಲ್ಲಿ ಸೋರೆನ್ ಇದ್ದಾರೆ. ಸೋರೆನ್ ಮತ್ತು ಇತರ 11 ಆರೋಪಿಗಳನ್ನು ರಾಂಚಿಯ ವಿಶೇಷ ನ್ಯಾಯಾಲಯಕ್ಕೆ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿದೆ.

ಈ ವಿಚಾರಣೆಯ ಬಳಿಕ ನ್ಯಾಯಾಲಯವು ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಇನ್ನೂ 14 ದಿನಗಳವರೆಗೆ ವಿಸ್ತರಿಸಿದೆ. ಈ ಪ್ರಕರಣದಲ್ಲಿ ಮುಂದಿನ ವಿಚಾರಣೆಯು ಜುಲೈ 11ರಂದು ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ನಾದಿನಿ ಬಿಜೆಪಿ ಸೇರ್ಪಡೆ

ಹೇಮಂತ್ ಸೊರೇನ್ ಹೊರತುಪಡಿಸಿ, ಅಮಾನತುಗೊಂಡ ಬರ್ಗೈ ವಲಯದ ಕಂದಾಯ ಉಪನಿರೀಕ್ಷಕ ಭಾನು ಪ್ರತಾಪ್, ಜೆಎಂಎಂ ನಾಯಕ ಅಂತು ಟಿರ್ಕಿ, ಎಂಡಿ ಸದ್ದಾಂ, ಎಂಡಿ ಅಫ್ಸರ್ ಅಲಿ, ವಿಪಿನ್ ಸಿಂಗ್, ಪ್ರಿಯರಂಜನ್ ಸಹಾಯ್, ಇರ್ಷಾದ್ ಅಖ್ತರ್ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದರು.

ಶೇಖರ್ ಕುಶ್ವಾಹಾ, ಎಂಡಿ ಇರ್ಷಾದ್, ಕೋಲ್ಕತ್ತಾದ ರಿಜಿಸ್ಟ್ರಾರ್ ಆಫ್ ಅಶ್ಯೂರೆನ್ಸ್‌ನ ಇಬ್ಬರು ಉದ್ಯೋಗಿಗಳು ತಪಸ್ ಘೋಷ್ ಮತ್ತು ಸಂಜಿತ್ ಕುಮಾರ್ ಕೂಡಾ ವಿಚಾರಣೆಗೆ ಹಾಜರಾದರು. ಅವರ ವಿರುದ್ಧ ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಹಲವಾರು ಗಂಟೆಗಳ ವಿಚಾರಣೆ ನಡೆಸಿದ ಬಳಿಕ ಇಡಿಯು ಜನವರಿ 31ರಂದು ಜನವರಿ 31ರಂದು ಹೇಮಂತ್ ಸೊರೆನ್ ಅವರನ್ನು ಬಂಧಿಸಿದೆ. ಏಪ್ರಿಲ್ 15ರಂದು ಜೆಎಂಎಂ ನಾಯಕ ಅಂತು ಟಿರ್ಕಿ, ಭೂ ಉದ್ಯಮಿ ಬಿಪಿನ್ ಸಿಂಗ್, ಪ್ರಿಯರಂಜನ್ ಸಹಾಯ್, ಮೊಹಮ್ಮದ್ ಇರ್ಷಾದ್ ಅವರನ್ನು ಬಂಧಿಸಿದೆ.

ಇನ್ನು ನಕಲಿ ದಾಖಲೆಗಳನ್ನು ಸಿದ್ಧಪಡಿಸಿದ ಆರೋಪದಲ್ಲಿ ಮಾಸ್ಟರ್ ಮೈಂಡ್ ಎಂಡಿ ಅಫ್ಸರ್ ಮತ್ತು ಎಂಡಿ ಸದ್ದಾಂ ಅವರನ್ನೂ ಇಡಿ ಬಂಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...