ಉದ್ಯೋಗ ಮಾಹಿತಿ | ರೈಲ್ವೇಯಲ್ಲಿ 32,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಫೆ.22 ಕಡೆಯ ದಿನ

Date:

ಭಾರತೀಯ ರೈಲ್ವೇಯಲ್ಲಿ ನಾನಾ ಹುದ್ದೆಗಳಿಗೆ ನೇಮಕಾತಿ ರೈಲ್ವೇ ನೇಮಕಾತಿ ಮಂಡಳಿ (RRB) ಅಧಿಸೂಚನೆ ಹೊರಡಿಸಿದೆ. ರೈಲ್ವೇಯಲ್ಲಿ ಲೆವೆಲ್ 1ರ 32,438 ಹುದ್ದೆಗಳಿಗೆ ನೇಮಕಾತಿ ಮಾಡಲು ಮುಂದಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಫೆಬ್ರವರಿ 22 ಕೊನೆಯ ದಿನವಾಗಿದೆ. ಆರ್‌ಆರ್‌ಬಿ ಅಧಿಕೃತ ವೆಬ್‌ಸೈಟ್ rrbahmedabad.gov.inನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷಗಳಾಗಿರಬೇಕು. ಗರಿಷ್ಠ 36 ವರ್ಷವನ್ನು ಮೀರಿರಬಾರದು. ವಿವಿಧ ವರ್ಗಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರಲಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಉಳಿದೆಲ್ಲ ವರ್ಗಗಳ ಅಭ್ಯರ್ಥಿಗಳಿಗೆ 250 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವವರು, rrbahmedabad.gov.inಗೆ ಭೇಟಿ ನೀಡಿ, ‘ನೇಮಕಾತಿ’ ವಿಭಾಗದಲ್ಲಿ ಅಗತ್ಯ ಮಾಹಿತಿಗಳನ್ನು ಒದಗಿಸಬೇಕು. ನಂತರ, ಅರ್ಜಿ ಶುಲ್ಕವನ್ನು ಪಾವತಿಸಬೇಕು. ಬಳಿಕ, ಅರ್ಜಿ ನಮೂನೆಯನ್ನು ಸಲ್ಲಿಸಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...