ಉದ್ಯೋಗ ಮಾಹಿತಿ | 1,161 ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ; ಏಪ್ರಿಲ್‌ 3 ಕಡೆ ದಿನ

Date:

ಕೇಂದ್ರ ಸರ್ಕಾರದ ಅಡಿಯಲ್ಲಿರುವ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (ಸಿಐಎಸ್ಎಫ್) ಕಾನ್ಸ್‌ಟೇಬಲ್‌ಗಳನ್ನು ನೇಮಕ ಮಾಡಿಕೊಳ್ಳಲು ಗೃಹ ಸಚಿವಾಲಯ ಅರ್ಜಿ ಆಹ್ವಾನಿಸಿದೆ. 1,161 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ ಆಸಕ್ತರು ಏಪ್ರಿಲ್‌ 3ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.

ಸಿಐಎಸ್ಎಫ್ – ಭಾರತದ ವಿವಿಧ ಭಾಗಗಳಲ್ಲಿರುವ ಕೈಗಾರಿಕೆಗಳು, ವಿಮಾನ ನಿಲ್ದಾಣಗಳು ಹಾಗೂ ಇತರ ಸರ್ಕಾರಿ ಉದ್ದಿಮೆಗಳಿಗೆ ಭದ್ರತಾ ಸೇವೆ ಒದಗಿಸುತ್ತದೆ. ಅಂತಹ ಪ್ರದೇಶಗಳಿಗೆ ಸಿಬ್ಬಂದಿಗಳನ್ನು ನಿಯೋಜಿಸುತ್ತದೆ.

ಇದೀಗ, 1,161 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಮಾರ್ಚ್‌ 5ರಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಏಪ್ರಿಲ್‌ 3ರ ಒಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರಬೇಕು. 18ರಿಂದ 23 ವರ್ಷ ವಯೋಮಾನದವರಾಗಿರಬೇಕು ಎಂದು ಸಚಿವಾಲಯ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿ ಶುಲ್ಕವು ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ 100 ರೂ.ಗಳನ್ನು ನಿಗದಿ ಮಾಡಲಾಗಿದೆ. ಮಹಿಳಾ ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕರಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.

ಆಸಕ್ತ, ಅರ್ಹ ಅಭ್ಯರ್ಥಿಗಳು ಸಿಐಎಸ್‌ಎಫ್‌ನ ಅಧಿಕೃತ ವೆಬ್‌ಸೈಟ್ cisfrectt.cisf.gov.inನಲ್ಲಿ ಅರ್ಜಿ ಸಲ್ಲಿಸಬಹುದು.

ನೇಮಕಾತಿ ಪ್ರಕ್ರಿಯೆಯು 5 ಹಂತದಲ್ಲಿ ನಡೆಯಲಿದ್ದು, ಎಲ್ಲ ಹಂತಗಳಲ್ಲಿಯೂ ಉತ್ತೀರ್ಣರಾಗುವವರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಐದು ಹಂತದ ನೇಮಕಾತಿ ಪ್ರಕ್ರಿಯೆ;
ದೈಹಿಕ ದಕ್ಷತೆ ಪರೀಕ್ಷೆ (PET),
ದೈಹಿಕ ಗುಣಮಟ್ಟ ಪರೀಕ್ಷೆ (PST),
ವ್ಯಾಪಾರ ಪರೀಕ್ಷೆ,
ಲಿಖಿತ ಪರೀಕ್ಷೆ,
ದಾಖಲೆ ಪರಿಶೀಲನೆ

ಪಿಇಟಿಯಲ್ಲಿ ಪುರುಷ ಅಭ್ಯರ್ಥಿಗಳು 6 ನಿಮಿಷ 30 ಸೆಕೆಂಡುಗಳಲ್ಲಿ 1.6 ಕಿ.ಮೀ ಓಟ ಮುಗಿಸಬೇಕು. ಮಹಿಳಾ ಅಭ್ಯರ್ಥಿಗಳು 4 ನಿಮಿಷಗಳಲ್ಲಿ 800 ಮೀಟರ್ ಓಟ ಪೂರೈಸಬೇಕು. ಪಿಎಸ್‌ಟಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಎತ್ತರ, ಎದೆ ಮತ್ತು ತೂಕವನ್ನು ಪರೀಕ್ಷಿಸಲಾಗುತ್ತದೆ. ಈ ಎರಡೂ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ವ್ಯಾಪಾರ ಪರೀಕ್ಷೆಗೆ ಅರ್ಹರಾಗುತ್ತಾರೆ. ಅದನ್ನೂ ಪೂರೈಸಿದವರಿಗೆ ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಇರಲಿದೆ.

ಅರ್ಜಿ ಸಲ್ಲಿಸುವುದು ಹೇಗೆ;
– ಸಿಐಎಸ್‌ಎಫ್‌ನ ಅಧಿಕೃತ ವೆಬ್‌ಸೈಟ್ cisfrectt.cisf.gov.inಗೆ ಭೇಟಿ ನೀಡಬೇಕು.
– ಮುಖಪುಟದಲ್ಲಿ ಕಾಣುವ ಸಿಐಎಸ್‌ಎಫ್‌ ಕಾನ್ಸ್‌ಟೇಬಲ್ ನೇಮಕಾತಿ ಲಿಂಕ್‌ ಮೇಲೆ ಕ್ಲಿಕ್ ಮಾಡಬೇಕು.
– ನೋಂದಣಿ ವಿವರಗಳನ್ನು ನಮೂದಿಸಿ ಮತ್ತು ‘ಸಲ್ಲಿಸು’ (ಸಬ್‌ಮಿಟ್‌) ಮೇಲೆ ಕ್ಲಿಕ್ ಮಾಡಬೇಕು.
– ಖಾತೆಗೆ ಲಾಗಿನ್ ಮಾಡಬೇಕು.
– ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
– ಅರ್ಜಿ ಶುಲ್ಕವನ್ನು ಪಾವತಿಸಬೇಕು.
– ‘ಸಬ್‌ಮಿಟ್‌’ ಮೇಲೆ ಕ್ಲಿಕ್ ಮಾಡಿದ ಬಳಿಕ, ದೃಢೀಕರಣ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...