ಪತ್ರಿಕೋದ್ಯಮ ಮೌನವಾಗಿರುವುದಿಲ್ಲ: ಖಾಲಿ ಸಂಪಾದಕೀಯ ಪ್ರಕಟಿಸಿದ ತೆಲಂಗಾಣ ಉರ್ದು ದೈನಿಕ

Date:

ತೆಲಂಗಾಣದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ನಮ್ಮ ಪತ್ರಿಕೆಗೆ ನೀಡುತ್ತಿರುವ ಸರ್ಕಾರಿ ಜಾಹೀರಾತನ್ನು ಸಂಪೂರ್ಣ ಸ್ಥಗಿತಗೊಳಿಸಿದೆ ಎಂದು ಆಪಾದಿಸಿದ ಉರ್ದು ದೈನಿಕವೊಂದು ಸಂಪಾದಕೀಯ ಜಾಗವನ್ನು ಖಾಲಿ ಬಿಟ್ಟು ತನ್ನ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ.

1970ರ ದಶಕದಲ್ಲಿ ಇಂದಿರಾಗಾಂಧಿ ಸರ್ಕಾರ ತುರ್ತು ಪರಿಸ್ಥಿತಿ ಹೇರಿದ್ದ ಸಂದರ್ಭವನ್ನು ನೆನಪಿಸುವ ರೀತಿಯಲ್ಲಿ ಪ್ರಸಕ್ತ ರಾಜ್ಯ ಸರ್ಕಾರದ ಲೋಪಗಳನ್ನು ಎತ್ತಿ ಹಿಡಿದ ಕಾರಣಕ್ಕೆ ಪತ್ರಿಕೆಯನ್ನು ಶಿಕ್ಷಿಸಲಾಗುತ್ತಿದೆ ಎಂದು ಮುನ್ಸಿಫ್ ಡೈಲಿ ಆಪಾದಿಸಿದೆ.
ಆದರೆ ಕಾಂಗ್ರೆಸ್ ವಕ್ತಾರರು ಇದನ್ನು ಅಲ್ಲಗಳೆದಿದ್ದು, ಪತ್ರಿಕಾ ಜಾಹೀರಾತಿನ ಮೇಲಿನ ವೆಚ್ಚವನ್ನು ಸರ್ಕಾರ ಕಡಿತಗೊಳಿಸಿದೆ ಎಂದು ಸಮುಜಾಯಿಷಿ ನೀಡಿದ್ದಾರೆ. ಜತೆಗೆ ಯಾರನ್ನು ಬೆಂಬಲಿಸಬೇಕು ಎನ್ನುವುದು ಸರ್ಕಾರದ ವಿಶೇಷಾಧಿಕಾರ ಎಂದು ಸಮರ್ಥಿಸಿಕೊಂಡಿದ್ದಾರೆ.

“ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಡೆದ ಕೋಮು ಗಲಭೆ ಘಟನೆಗಳನ್ನು ಪತ್ರಿಕೆ ಬಹಿರಂಗಪಡಿಸಿತ್ತು. ಪೊಲೀಸ್ ವೈಫಲ್ಯ ಮತ್ತು ಸರ್ಕಾರದ ನಿಷ್ಕ್ರಿಯತೆಯನ್ನು ಎತ್ತಿ ಹಿಡಿದಿತ್ತು. ಚಿಲ್ಕೂರಿನಲ್ಲಿ ಮಸೀದಿಯೊಂದನ್ನು ಕೆಡವಿದ ಘಟನೆಯನ್ನು ವರದಿ ಮಾಡಲಾಗಿತ್ತು. ಅಲ್ಪಸಂಖ್ಯಾತ ವಿದ್ಯಾರ್ಥಿನಿಯರ ಸಮವಸ್ತ್ರದಿಂದ ದುಪ್ಪಟ ತೆಗೆದುಹಾಕಿದ್ದನ್ನು, ವಕ್ಫ್ ಆಸ್ತಿಗಳ ಸಂರಕ್ಷಣೆಗೆ ಸರ್ಕಾರ ವಿಫಲವಾಗಿದ್ದನ್ನು ಕೂಡಾ ಪತ್ರಿಕೆ ಬೆಳಕಿಗೆ ತಂದಿತ್ತು. ಇಮಾಮ್‌ಗಳ ವೇತನ ವಿಳಂಬ, ವಿಚ್ಛೇದಿತ ಮಹಿಳೆಯರಿಗೆ ಜೀವನಾಂಶ ಪಾವತಿಸದೇ ಇರುವುದು ಮತ್ತಿತರ ಕ್ರಮಗಳ ಬಗ್ಗೆಯೂ ಮುನ್ಸಿಫ್ ಪ್ರಶ್ನಿಸಿತ್ತು” ಎಂದು ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಅಥೆರ್ ಮೊಯಿನ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಸ್ಲಿಂ ಸಮುದಾಯದ ವಿರುದ್ಧ ಮುಂದುವರೆದ ಬಿಜೆಪಿ ನಾಯಕರ ದ್ವೇಷ: ನಿರ್ಲಕ್ಷ್ಯವೊಂದೆ ಪರಿಹಾರ

ತೆಲಂಗಾಣ ಸರ್ಕಾರದಲ್ಲಿ ಮುಸ್ಲಿಮರಿಗೆ ಪ್ರಾತಿನಿಧ್ಯ ನೀಡದ ರಾಜ್ಯ ಸರ್ಕಾರ ಇದೇ ಕಾರಣಕ್ಕೆ ಮೋದಿ ಸರ್ಕಾರವನ್ನು ಟೀಕಿಸುತ್ತಿದೆ ಎನ್ನುವುದನ್ನೂ ಪತ್ರಿಕೆ ವರದಿ ಮಾಡಿತ್ತು ಎಂದು ವಿವರಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ ತೆಲಂಗಾಣ ಹಾಲು ಮತ್ತು ಜೇನಿನ ನಾಡಾಗಿ ಪರಿವರ್ತನೆಯಾಗಿದೆ ಎಂದು ಓದುಗರ ಮನವೊಲಿಸಬೇಕು ಎಂದು ಸರ್ಕಾರ ನಿರೀಕ್ಷಿಸಿದರೆ, ನಾವು ಹಾಗೆ ಮಾಡಲು ಸಾಧ್ಯವಿಲ್ಲ. ಬದಲಾಗಿ ನಾವು ಭೂಮಿ ಏಕೆ ಬರಡಾಗಿದೆ? ಬಡವರನ್ನು ಹಸಿವು ಏಕೆ ಮಾಡುತ್ತಿದೆ?ಎಂದು ನಾವು ಪ್ರಶ್ನಿಸುವುದನ್ನು ಮುಂದುವರಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...