ಉತ್ತರ ಪ್ರದೇಶ | ಪತ್ರಕರ್ತನಿಗೆ ಗುಂಡಿಕ್ಕಿ ಹತ್ಯೆ; ಆರೋಪಿಗಳು ಪರಾರಿ

Date:

ಬೈಕ್‌ನಲ್ಲಿ ಬಂದ ಅಪರಿಚಿತರು ಪತ್ರಕರ್ತನೋರ್ವನಿಗೆ ಗುಂಡಿಕ್ಕಿ ಹತ್ಯೆ ಮಾಡಿ, ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಸೀತಾಪುರ- ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ಹಲವು ದಿನಗಳಿಂದ ಬೆದರಿಕೆ ಕರೆಗಳನ್ನು ಬರುತ್ತಿದ್ದವು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸ್ಥಳೀಯ ಹಿಂದಿ ದೈನಿಕದಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಬಾಜ್ಪಾಯಿ (35) ಎಂಬವರಿಗೆ ಸೀತಾಪುರ- ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ಬಂದ ಅಪರಿಚಿತರು ಶನಿವಾರ ಗುಂಡಿಕ್ಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಬೀದರ್ | ಹಿರಿಯ ಪತ್ರಕರ್ತ ಕಾಜಿ ಅಲಿಯೋದ್ದೀನ್‌ಗೆ ಕರ್ನಾಟಕ ಉರ್ದು ಅಕಾಡೆಮಿ ಪ್ರಶಸ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಘವೇಂದ್ರ ಕೂಡಾ ಬೈಕ್‌ನಲ್ಲಿ ಸಾಗುತ್ತಿದ್ದ ವೇಳೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸೀತಾಪುರ ಎಎಸ್‌ಪಿ ಪ್ರವೀಣ್ ರಂಜನ್ ಸಿಂಗ್, “ಪತ್ರಕರ್ತನ ಹೆಗಲಿಗೆ ಮೂರು ಬುಲೆಟ್ ಮತ್ತು ಎದೆಗೆ ಒಂದು ಬುಲೆಟ್ ತಗುಲಿದೆ. ಆರೋಪಿಗಳು ಗುಂಡು ಹಾರಿಸಿದ ಬಳಿಕ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಸ್ಥಳೀಯರ ಸಹಾಯ ಪಡೆದು ಪೊಲೀಸರು ರಾಘವೇಂದ್ರ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ರಾಘವೇಂದ್ರ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಬೆನ್ನಲ್ಲೇ ರಾಘವೇಂದ್ರ ಅವರಿಗೆ ಹಲವು ದಿನಗಳಿಂದ ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಕುಟುಂಬಸ್ಥರು ಮಾಧ್ಯಮಕ್ಕೆ ತಿಳಿಸಿದ್ದಾರೆ.

“ಸದ್ಯ ಸಾಕ್ಷಿ ಸಂಗ್ರಹಿಸಲಾಗುತ್ತಿದೆ. ಜಿಲ್ಲಾ ಗಡಿಗಳಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಇತರೆ ಕಾನೂನಾತ್ಮಕ ಕಾರ್ಯಗಳನ್ನು ನಡೆಸಲಾಗುತ್ತಿದೆ” ಎಂದು ಎಎಸ್‌ಪಿ ಸಿಂಗ್ ಹೇಳಿದ್ದಾರೆ. ಸದ್ಯ ಪತ್ರಕರ್ತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...