ರಸ್ತೆಯಲ್ಲೇ ವರದಕ್ಷಿಣೆ ಪ್ರಕರಣ ವಜಾ ಮಾಡಿದ ನ್ಯಾಯಾಧೀಶರು

Date:

ವೃದ್ಧ ದಂಪತಿಗಳ ವಿರುದ್ಧ ಅವರ ಸೊಸೆ ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ನ್ಯಾಯಾಧೀಶರು ರಸ್ತೆಯಲ್ಲೇ ಆಲಿಸಿ, ರದ್ದುಗೊಳಿಸಿದ್ದಾರೆ. ವೃದ್ಧ ದಂಪತಿಗಳು ಅನಾರೋಗ್ಯ ಕಾರಣದಿಂದ ನ್ಯಾಯಾಲಯದ ಮೆಟ್ಟಿಲುಗಳನ್ನು ಹತ್ತಿ ಬರಲಾಗದ ಸ್ಥಿತಿಯನ್ನು ಕಂಡು ನ್ಯಾಯಾಧೀಶರೇ ಪೀಠದಿಂದ ಇಳಿದುಬಂದು ರಸ್ತೆಯಲ್ಲೇ ವಿಚಾರಣೆ ನಡೆಸಿದ್ದಾರೆ.

ಇಂಥಹದೊಂದು ಅಪರೂಪದ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಬೋಧನ್‌ನಲ್ಲಿ ನಡೆದಿದೆ. ಬೋಧನ್‌ನ ಹೆಚ್ಚುವರಿ ಪ್ರಥಮ ದರ್ಜೆ ನ್ಯಾಯಾಲಯದಲ್ಲಿ (ಜೆಎಫ್‌ಸಿಎಂ) ವೃದ್ಧ ದಂಪತಿಗಳ ವಿರುದ್ಧದ ವರದಕ್ಷಿಣೆ ಕಿರುಕುಳ ಪ್ರಕರಣದ ವಿಚಾರಣೆ ಇತ್ತು. ನ್ಯಾಯಾಲಯಕ್ಕೆ ದಂಪತಿಗಳು ಆಟೋದಲ್ಲಿ ಬಂದಿದ್ದರು. ಆದರೆ, ಅವರಿಗೆ ನ್ಯಾಯಾಲಯದ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಿರಲಿಲ್ಲ. ಹೀಗಾಗಿ, ನ್ಯಾಯಾಲಯದ ನ್ಯಾಯಾಧೀಶ ಇ ಸಾಯಿ ಶಿವ ಅವರು ತಮ್ಮ ಪೀಠದಿಂದ ಎದ್ದು ಹೊರಬಂದು ರಸ್ತೆಯಲ್ಲಿ ವೃದ್ಧರ ವಾದವನ್ನು ಆಲಿಸಿದ್ದಾರೆ.

ನಿಜಾಮಾಬಾದ್ ಜಿಲ್ಲೆಯ ರಾಯ್ಕೂರ್ ಗ್ರಾಮದ ವೃದ್ಧ ನಿವಾಸಿಗಳಾದ ಸಾಯಮ್ಮ ಮತ್ತು ಗಂಗಾರಾಮ್ ವಿರುದ್ಧ ಅವರ ಸೊಸೆ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆಗೆ ದಂಪತಿಗಳು ನಿಯಮಿತವಾಗಿ ಹಾಜರಾಗುತ್ತಿದ್ದರು. ಆದರೆ, ಅನಾರೋಗ್ಯಕ್ಕೆ ತುತ್ತಾಗಿದ್ದ ಕಾರಣ, ದೈಹಿಕ ದೌರ್ಬಲ್ಯದಿಂದಾಗಿ, ಅವರಿಗೆ ನ್ಯಾಯಾಲಯದ ಒಳಗೆ ಹೋಗಲು ಸಾಧ್ಯವಾಗಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ನಿಜಕ್ಕೂ ಜಾತಿಗಣತಿ ನಡೆಸುತ್ತದಾ ಬಿಜೆಪಿ; ಸಿದ್ಧವಿರುವ ವರದಿ ಜಾರಿ ಮಾಡದೆ ವಿಳಂಬ ಮಾಡುತ್ತಿರುವುದೇಕೆ ಕಾಂಗ್ರೆಸ್‌?

ಅವರ ಪರಿಸ್ಥಿತಿಯ ಬಗ್ಗೆ ತಿಳಿದ ನ್ಯಾಯಾಧೀಶ ಸಾಯಿ ಶಿವ ಅವರು ನ್ಯಾಯಾಲಯದ ನಿಯಮಗಳಿಗೆ ವಿನಾಯಿತಿ ನೀಡುವುದು ಸೂಕ್ತವೆಂದು ತೀರ್ಮಾಸಿದರು. ನ್ಯಾಯಾಲಯದ ಕೋಣೆಯಿಂದ ಹೊರಬಂದು ಆವರಣದಲ್ಲಿ ವಿಚಾರಣೆ ನಡೆಸಿದರು. ಪರ-ವಿರೋಧ ವಾದವನ್ನು ಆಲಿಸಿದ ನ್ಯಾಯಾಧೀಶರು, ‘ವೃದ್ಧ ದಂಪತಿಗಳ ತಪ್ಪಿಲ್ಲ’ ಎಂದು ಘೋಷಿಸಿ, ಅವರು ವಿರುದ್ಧ ಪ್ರಕರಣವನ್ನು ವಜಾಗೊಳಿಸಿದರು.

ನ್ಯಾಯಾಧೀಶರು ನ್ಯಾಯಾಲಯದ ಆವರಣದಲ್ಲಿಯೇ ವಿಚಾರಣೆ ನಡೆಸಿದ ಅಪರೂಪದ ನಡೆ, ವಿಶಿಷ್ಟ ಮತ್ತು ವಿನಮ್ರತೆಯ ವರ್ತನೆಯನ್ನು ಸಾರ್ವಜನಿಕರು, ನೆಟ್ಟಿಗರು ಪ್ರಸಂಶಿಸಿದ್ದಾರೆ. ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...