10 ಲಕ್ಷ ಜನಸಂಖ್ಯೆಗೆ 25 ನ್ಯಾಯಾಧೀಶರೂ ಇಲ್ಲ, ತಪ್ಪಾಗುವುದು ಸಹಜ: ಸುಪ್ರೀಂ ಕೋರ್ಟ್

Date:

ಹತ್ತು ಲಕ್ಷ ಜನಸಂಖ್ಯೆಗೆ 25 ನ್ಯಾಯಾಧೀಶರೂ ಇಲ್ಲದಿದ್ದರೂ ಅವರ ಕೆಲಸದ ಹೊರೆ ಮಾತ್ರ ಏರುತ್ತಲೇ ಇದೆ ಎಂದು ಸುಪ್ರೀಂ ಕೋರ್ಟ್ ವಿಷಾದ ವ್ಯಕ್ತಪಡಿಸಿದೆ.

ನ್ಯಾಯಾಧೀಶರು ಒತ್ತಡದಲ್ಲಿ ಕಾರ್ಯ ನಿರ್ವಹಿಸುವುದನ್ನು ಕಂಡಾಗ ಅವರಿಂದ ತಪ್ಪುಗಳಾಗುತ್ತವೆ ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ, ಅಹ್ಸಾನುದ್ದೀನ್ ಅಮಾನುಲ್ಲಾ ಹಾಗೂ ಆಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ತಿಳಿಸಿತು.

“ನ್ಯಾಯಾಧೀಶರು ಮನುಷ್ಯರು. ಎಲ್ಲ ಮನುಷ್ಯರು ತಪ್ಪು ಮಾಡುತ್ತಾರೆ. ತಪ್ಪು ಮಾಡುವುದು ಮನುಷ್ಯರ ಸಹಜ ಗುಣ. ನಮ್ಮ ದೇಶದ ಬಹುತೇಕ ಎಲ್ಲ ನ್ಯಾಯಾಲಯಗಳು ಕೆಲಸದ ಹೊರೆ ಹೊತ್ತಿವೆ. 2002ರಲ್ಲಿ, “ಅಖಿಲ ಭಾರತ ನ್ಯಾಯಾಧೀಶರ ಸಂಘ ಇನ್ನಿತರರು ಮತ್ತು ಭಾರತ ಒಕ್ಕೂಟ ಮತ್ತಿತರರ ನಡುವಣ ಪ್ರಕರಣದಲ್ಲಿ ಐದು ವರ್ಷದೊಳಗೆ ಹತ್ತು ಲಕ್ಷ ಜನಸಂಖ್ಯೆಗೆ ನ್ಯಾಯಾಧೀಶರ ಸಂಖ್ಯೆಯನ್ನು 50ಕ್ಕೆ ಹೆಚ್ಚಿಸಬೇಕು ಎಂದಿತ್ತು. ಆದರೆ ಜನಸಂಖ್ಯೆ ಮತ್ತು ದಾವೆ ಸಂಖ್ಯೆ ಗಣನೀಯವಾಗಿ ಹೆಚ್ಚಿತು” ಎಂದು ಅದು ನುಡಿಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

ನ್ಯಾಯಾಧೀಶರು ಅವರು ಯಾವುದೇ ಜವಾಬ್ದಾರಿ ನಿರ್ವಹಿಸುತ್ತಿದ್ದರೂ ಕೆಲಸದ ಒತ್ತಡದಂತಹ ಕಾರಣಗಳಿಂದಾಗಿ ದೋಷ ಎಸಗುವ ಸಾದ್ಯತೆ ಇದೆ. ಹೀಗಾಗಿ ತಪ್ಪೆಸಗುವ ನ್ಯಾಯಾಧೀಶರ ವಿರುದ್ಧ ಪ್ರತಿಕೂಲ ಹೇಳಿಕೆ ನೀಡುವಾಗ ಉನ್ನತ ನ್ಯಾಯಾಲಯಗಳು ಸಂಯಮ ತೋರಬೇಕು ವೈಯಕ್ತಿಕ ಟೀಕೆ ಮಾಡುವುದನ್ನು ಅಥವಾ ತೀರ್ಪುಗಳಲ್ಲಿ ನ್ಯಾಯಾಧೀಶರ ನಡೆ ದಾಖಲಿಸುವುದುನ್ನು ತಪ್ಪಿಸಬೇಕು ಎಂದು ಕೋರ್ಟ್ ಹೇಳಿದೆ.

ತನ್ನ ನ್ಯಾಯಾಂಗ ಆದೇಶದಲ್ಲಿ ದೆಹಲಿ ಪೊಲೀಸರ ನಡೆಯನ್ನು ನ್ಯಾಯಾಧೀಶರೊಬ್ಬರು ಖಂಡಿಸಿದ್ದರು. ಹೀಗಾಗಿ ದೆಹಲಿ ಹೈಕೋರ್ಟ್‌ ಅವರ ವಿರುದ್ಧ ಪ್ರತಿಕೂಲ ಟೀಕೆ ಮಾಡಿತ್ತು. ಈ ಟೀಕೆಗಳನ್ನು ದಾಖಲೆಗಳಿಂದ ತೆಗೆದುಹಾಕುವಂತೆ ಕೋರಿ ನ್ಯಾಯಾಧೀಶ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ಮನವಿಯನ್ನು ಪುರಸ್ಕರಿಸಿ ಶುಕ್ರವಾರ ನೀಡಿದ್ದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಪ್ರತಿಕೂಲ ಹೇಳಿಕೆಗಳು ನ್ಯಾಯಾಧೀಶರ ವೃತ್ತಿಗೆ ಮಾರಕವಾಗಲಿದ್ದು ಸಾಂವಿಧಾನಿಕ ನ್ಯಾಯಾಲಯಗಳು ಕೂಡ ತಪ್ಪೆಸಗುವ ಸಾಧ್ಯತೆ ಇದೆ ಎಂದು ಪೀಠ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...