ವಿವಾದಿತ NCERT ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

Date:

NCERT ಇತ್ತೀಚೆಗೆ ಬಿಡುಗಡೆ ಮಾಡಿದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ “ನ್ಯಾಯಾಂಗದಲ್ಲಿನ ಭ್ರಷ್ಟಾಚಾರ” ಎಂಬ ಅಧ್ಯಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ವಿವಾದಿತ ಪಠ್ಯಪುಸ್ತಕವನ್ನು ನಿಷೇಧಿಸಿದೆ. ಈ ಕುರಿತು ವಿವರಣೆಯನ್ನು ಕೋರಿ NCERT ನಿರ್ದೇಶಕರಿಗೆ ನೋಟಿಸ್ ನೀಡಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ ಪಾಂಚೋಲಿ ಅವರ ಪೀಠವು, ಇದು ಆಳವಾಗಿ ಬೇರೂರಿರುವ ಪಿತೂರಿಯ ಭಾಗವಾಗಿದೆ ಮತ್ತು ಇದಕ್ಕೆ ಹೊಣೆಗಾರರಾಗಿರುವವರನ್ನು ಕಾನೂನಿನ ಮುಂದೆ ತರಬೇಕು ಎಂದು ಹೇಳಿದ್ದಾರೆ.

ಈ ಬಗ್ಗೆ ನ್ಯಾಯಾಲಯವು ಶಾಲಾ ಶಿಕ್ಷಣ ಇಲಾಖೆ ಮತ್ತು NCERT ನಿರ್ದೇಶಕ ಡಾ. ದಿನೇಶ್ ಪ್ರಸಾದ್ ಸಕ್ಲಾನಿ ಅವರಿಗೆ ʼನ್ಯಾಯಾಲಯ ನಿಂದನೆʼಗೆ ಸಂಬಂಧಿಸಿ ನೋಟಿಸ್ ಜಾರಿ ಮಾಡಿದೆ. ನ್ಯಾಯಾಲಯ ನಿಂದನೆ ಆರೋಪದಡಿ ಸೂಕ್ತ ಕ್ರಮ ಕೈಗೊಳ್ಳದಿರಲು ಕಾರಣ ತಿಳಿಸುವಂತೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪಠ್ಯದಲ್ಲಿ ನ್ಯಾಯಾಂಗ ಭ್ರಷ್ಟಾಚಾರ: ಸುಪ್ರೀಂ ಕೆಂಗಣ್ಣು – ಕೇಸರೀಕರಣ, ಇತಿಹಾಸ ತಿರುಚುವಿಕೆಗೂ ಬೀಳುವುದೇ ಕಡಿವಾಣ?

ಇದಲ್ಲದೆ ಪುಸ್ತಕದ ಎಲ್ಲಾ ಪ್ರತಿಗಳನ್ನು ಡಿಜಿಟಲ್ ಅಥವಾ ಸಾರ್ವಜನಿಕ ವೇದಿಕೆಯಿಂದ ತೆಗೆದು ಹಾಕುವಂತೆ NCERT, ಕೇಂದ್ರ ಮತ್ತು ರಾಜ್ಯ ಶಿಕ್ಷಣ ಇಲಾಖೆಗಳಿಗೆ ನ್ಯಾಯಾಲಯ ಆದೇಶಿಸಿದೆ.

ಪುಸ್ತಕದ ಉತ್ಪಾದನೆ ಮತ್ತು ವಿತರಣೆಯ ಮೇಲೆ ಸಂಪೂರ್ಣ ನಿಷೇಧ ವಿಧಿಸಿದ ಸುಪ್ರೀಂ ಕೋರ್ಟ್ ಮತ್ತು ಆಕ್ಷೇಪಾರ್ಹ ಅಧ್ಯಾಯವನ್ನು ಬರೆದ ರಾಷ್ಟ್ರೀಯ ಪಠ್ಯಕ್ರಮ ಮಂಡಳಿಯ ಸದಸ್ಯರ ಬಗ್ಗೆಯೂ ವಿವರಗಳನ್ನು ಕೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...