ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿ ಫಾತಿಮಾ ಬೀವಿ ನಿಧನ

Date:

ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ಹಾಗೂ ತಮಿಳುನಾಡಿನ ಮಾಜಿ ರಾಜ್ಯಪಾಲರಾದ ನ್ಯಾ. ಫಾತಿಮಾ ಬೀವಿ ಅವರು ಗುರುವಾರ ಕೇರಳದ ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು.

1927 ಏಪ್ರಿಲ್ 30 ರಂದು ಕೇರಳದ ತಿರುವಂಕೂರಿನ ಗ್ರಾಮವೊಂದರಲ್ಲಿ ಜನಿಸಿದ ಫಾತಿಮಾ ಬೀವಿ ಅವರು 1950ರಲ್ಲಿ ಚಿನ್ನದ ಪದಕದೊಂದಿಗೆ ಎಲ್‌ಎಲ್‌ಬಿ ಪದವಿ ಪಡೆದು ಜಿಲ್ಲಾ ನ್ಯಾಯಾಲಯದಲ್ಲಿ ವಕೀಲ ವೃತ್ತಿಯನ್ನು ಪ್ರಾರಂಭಿಸಿದರು. ಎಂಟು ವರ್ಷಗಳ ನಂತರ ಅವರು ನ್ಯಾಯಾಂಗ ಸೇವೆಗೆ ಮ್ಯಾಜಿಸ್ಟ್ರೇಟ್ ಆಗಿ ಸೇರಿಕೊಂಡರು ಮತ್ತು 1974 ರಲ್ಲಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದರು.

ಬೀವಿ ಅವರು 1983 ರಲ್ಲಿ ಕೇರಳ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು ಮತ್ತು 1989 ರಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿರಿಯಾನಿಗಾಗಿ 60 ಬಾರಿ ಇರಿದು ಮೃತದೇಹದ ಮೇಲೆ ನೃತ್ಯವಾಡಿದ 18ರ ಯುವಕ

1993 ರಲ್ಲಿ ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾದ ನಂತರ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಮತ್ತು ತಮಿಳುನಾಡಿನ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದರು.

ನ್ಯಾಯಮೂರ್ತಿ ಫಾತಿಮ ಬೀವಿ ಅವರ ನಿಧನಕ್ಕೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಸಂತಾಪ ಸೂಚಿಸಿದ್ದಾರೆ.

“ನ್ಯಾಯಮೂರ್ತಿ ಬೀವಿ ಅವರು ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ಮತ್ತು ತಮಿಳುನಾಡು ರಾಜ್ಯಪಾಲರಾಗಿ ತಮ್ಮದೆ ಆದ ವಿಶಿಷ್ಟ ರೀತಿಯಲ್ಲಿ ಛಾಪು ಮೂಡಿಸಿದ್ದಾರೆ. ಅವರು ತನ್ನ ಹೆಸರಿಗೆ ಅನೇಕ ದಾಖಲೆಗಳನ್ನು ಹೊಂದಿದ್ದ ಧೈರ್ಯಶಾಲಿ ಮಹಿಳೆ. ಇಚ್ಛಾಶಕ್ತಿ ಮತ್ತು ಸದುದ್ದೇಶ ಹೊಂದಿರುವ ಗುರಿಯು ಎಂತಹ ಸಂದರ್ಭದಲ್ಲಿಯೂ ಗೆಲುವು ತಂದುಕೊಡುತ್ತದೆ ಎನ್ನುವುದನ್ನು ತಮ್ಮ ಸ್ವಂತ ಜೀವನದ ಮೂಲಕ ತೋರಿಸಿದ ವ್ಯಕ್ತಿತ್ವ ಅವರದು” ಎಂದು ಜಾರ್ಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...