ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸೋಮವಾರ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಭೋದಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಇತರ ಗಣ್ಯರ ಉಪಸ್ಥಿತಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನು ಓದಿದ್ದೀರಾ? ನ.24ರಂದು ಸುಪ್ರೀಂ ಕೋರ್ಟ್ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ನ್ಯಾಯಮೂರ್ತಿ ಸೂರ್ಯಕಾಂತ್
ನಿನ್ನೆ ಸಂಜೆ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ನಿವೃತ್ತರಾಗಿದ್ದು ಇಂದು ನ್ಯಾಯಮೂರ್ತಿ ಸೂರ್ಯಕಾಂತ್ ಸಿಜೆಐ ಆಗಿದ್ದಾರೆ. ಸುಮಾರು 15 ತಿಂಗಳುಗಳ ಕಾಲ ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ. 2027ರ ಫೆಬ್ರವರಿ 9ರಂದು ನಿವೃತ್ತಿ ಹೊಂದಲಿದ್ದಾರೆ.
ಜಸ್ಟಿಸ್ ಸೂರ್ಯಕಾಂತ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ನೀಡದ್ದ 370ನೇ ವಿಧಿಯನ್ನು ರದ್ದುಗೊಳಿಸುವುದು, ಬಿಹಾರದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಪೆಗಾಸಸ್ ಸ್ಪೈವೇರ್ ಪ್ರಕರಣ ಸೇರಿದಂತೆ ಹಲವು ತೀರ್ಪುಗಳು ಮತ್ತು ಆದೇಶಗಳನ್ನು ನೀಡಿದ ಸುಪ್ರೀಂ ಕೋರ್ಟ್‌ನ ಪೀಠದ ಭಾಗವಾಗಿದ್ದರು.





