ನ.24ರಂದು ಸುಪ್ರೀಂ ಕೋರ್ಟ್ ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ನ್ಯಾಯಮೂರ್ತಿ ಸೂರ್ಯಕಾಂತ್

Date:

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ನೀಡದ್ದ 370ನೇ ವಿಧಿಯನ್ನು ರದ್ದುಗೊಳಿಸುವುದು, ಬಿಹಾರದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಪೆಗಾಸಸ್ ಸ್ಪೈವೇರ್ ಪ್ರಕರಣ ಸೇರಿದಂತೆ ಹಲವು ತೀರ್ಪುಗಳು ಮತ್ತು ಆದೇಶಗಳನ್ನು ನೀಡಿದ ಸುಪ್ರೀಂ ಕೋರ್ಟ್‌ನ ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸೋಮವಾರ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ನಿವೃತ್ತರಾಗಲಿದ್ದಾರೆ.

ನ್ಯಾಯಮೂರ್ತಿ ಕಾಂತ್ ಅವರನ್ನು ಅಕ್ಟೋಬರ್ 30ರಂದು ಮುಂದಿನ ಸಿಜೆಐ ಆಗಿ ನೇಮಿಸಲಾಗಿದ್ದು, ಸುಮಾರು 15 ತಿಂಗಳುಗಳ ಕಾಲ ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ. ಹಾಗೆಯೇ ಅವರಿಗೆ 65 ವರ್ಷವಾಗುತ್ತಿದ್ದಂತೆ 2027ರ ಫೆಬ್ರವರಿ 9ರಂದು ನಿವೃತ್ತಿ ಹೊಂದಲಿದ್ದಾರೆ.

ಇದನ್ನು ಓದಿದ್ದೀರಾ? ಶರದ್ ಪವಾರ್ ಬಣಕ್ಕೆ ಹೊಸ ಹೆಸರು ಸೂಚಿಸಿದ ಸುಪ್ರೀಂ ಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1962ರ ಫೆಬ್ರವರಿ 10ರಂದು ಹರಿಯಾಣದ ಹಿಸಾರ್ ಜಿಲ್ಲೆಯಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ನ್ಯಾಯಮೂರ್ತಿ ಕಾಂತ್ ಅವರು, ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲಿ(Distance Education) 2011ರಲ್ಲಿ ಕಾನೂನು ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಹಲವಾರು ಗಮನಾರ್ಹ ತೀರ್ಪುಗಳನ್ನು ನೀಡಿದ ನ್ಯಾಯಮೂರ್ತಿ ಕಾಂತ್ ಅವರನ್ನು 2018ರ ಅಕ್ಟೋಬರ್ 5ರಂದು ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ. ಅದಾದ ಬಳಿಕ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದು, 370ನೇ ವಿಧಿ ರದ್ದತಿ, ವಾಕ್ ಸ್ವಾತಂತ್ರ್ಯ ಮತ್ತು ಪೌರತ್ವ ಹಕ್ಕುಗಳ ಕುರಿತ ತೀರ್ಪುಗಳನ್ನು ನೀಡಿದ್ದಾರೆ.

ದೇಶದ್ರೋಹ ಕಾನೂನನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದ, ಸರ್ಕಾರ ಪರಿಶೀಲನೆ ನಡೆಸುವವರೆಗೂ ಯಾವುದೇ ಹೊಸ ಎಫ್‌ಐಆರ್‌ಗಳನ್ನು ದಾಖಲಿಸಬಾರದು ಎಂದು ನಿರ್ದೇಶಿಸಿದ್ದರು. ಇನ್ನು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸುವ ಚುನಾವಣಾ ಸಮಿತಿಯ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನೂ ನ್ಯಾಯಮೂರ್ತಿ ಸೂರ್ಯಕಾಂತ್ ನಡೆಸಿದ್ದರು. ಕರಡು ಮತದಾರರ ಪಟ್ಟಿಯಿಂದ ಹೊರಗುಳಿದ 65 ಲಕ್ಷ ಮತದಾರರ ವಿವರಗಳನ್ನು ಬಹಿರಂಗಪಡಿಸುವಂತೆ ನ್ಯಾಯಮೂರ್ತಿ ಕಾಂತ್ ಚುನಾವಣಾ ಆಯೋಗಕ್ಕೆ ಸೂಚಿಸಿದ್ದರು.

ಇನ್ನು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಸೇರಿದಂತೆ ಬಾರ್ ಅಸೋಸಿಯೇಷನ್‌ಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಬೇಕೆಂದು ನಿರ್ದೇಶಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ. ಕಾನೂನುಬಾಹಿರವಾಗಿ ಪದಚ್ಯುತಗೊಳಿಸಲಾದ ಮಹಿಳಾ ಸರಪಂಚರನ್ನು ಪುನಃ ನೇಮಿಸಿದ ಪೀಠದ ನೇತೃತ್ವ ವಹಿಸಿದ್ದ ಅವರು ಲಿಂಗ ಪಕ್ಷಪಾತವನ್ನು ಟೀಕಿಸಿದ್ದರು.

ಇದನ್ನು ಓದಿದ್ದೀರಾ? ಮತದಾರರ ಪಟ್ಟಿಯಿಂದ ಅಳಿಸಲಾದ 65 ಲಕ್ಷ ಜನರ ಗುರುತು, ಕಾರಣ ಬಹಿರಂಗಪಡಿಸಿ: ಇಸಿಗೆ ಸುಪ್ರೀಂ ಸೂಚನೆ

ಇನ್ನು 2022ರಲ್ಲಿ ಪ್ರಧಾನಿ ನರೇಂದ್ರ ಮೋದಿ ಪಂಜಾಬ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದ ಭದ್ರತಾ ಉಲ್ಲಂಘನೆಯ ತನಿಖೆಗಾಗಿ ಮಲ್ಹೋತ್ರಾ ನೇತೃತ್ವದ ಮಾಜಿ ನ್ಯಾಯಮೂರ್ತಿಗಳ ಐವರು ಸದಸ್ಯರ ಸಮಿತಿಯನ್ನು ನೇಮಿಸಿದ ಪೀಠದಲ್ಲಿ ನ್ಯಾಯಮೂರ್ತಿ ಕಾಂತ್ ಇದ್ದರು. “ಇಂತಹ ವಿಷಯಗಳ ತನಿಖೆಗೆ ನ್ಯಾಯಾಂಗದಲ್ಲಿ ತರಬೇತಿ ಪಡೆದ ಮನಸ್ಸುಗಳ ಅಗತ್ಯವಿದೆ” ಎಂದು ಹೇಳಿದ್ದರು.

ಹಾಗೆಯೇ ನ್ಯಾಯಮೂರ್ತಿ ಕಾಂತ್ ಅವರು ರಕ್ಷಣಾ ಪಡೆಗಳಿಗೆ ಒನ್ ರ್ಯಾಂಕ್-ಒನ್ ಪಿಂಚಣಿ ಯೋಜನೆಯನ್ನು ಸಹ ಎತ್ತಿಹಿಡಿದಿದ್ದರು. “ಇದು ಸಾಂವಿಧಾನಿಕವಾಗಿ ಮಾನ್ಯವಾಗಿದೆ” ಎಂದು ಹೇಳಿದ್ದರು. 1967ರ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ತೀರ್ಪನ್ನು ರದ್ದುಗೊಳಿಸಿದ ಏಳು ನ್ಯಾಯಾಧೀಶರ ಪೀಠದಲ್ಲಿ ನ್ಯಾಯಮೂರ್ತಿ ಕಾಂತ್ ಇದ್ದರು. ಈ ತೀರ್ಪು ಸಂಸ್ಥೆಯ ಅಲ್ಪಸಂಖ್ಯಾತ ಸ್ಥಾನಮಾನದ ಮರುಪರಿಶೀಲನೆಗೆ ದಾರಿ ಮಾಡಿಕೊಟ್ಟಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...