ಬಿಆರ್‌ಎಸ್ ಪಕ್ಷದಿಂದ ಅಮಾನತು ಬೆನ್ನಲ್ಲೇ ಎಂಎಲ್‌ಸಿ ಸ್ಥಾನಕ್ಕೂ ಕೆ.ಕವಿತಾ ರಾಜೀನಾಮೆ

Date:

ತೆಲಂಗಾಣದ ಬಿಆರ್‌ಎಸ್ ಪಕ್ಷದಿಂದ ಅಮಾನತುಗೊಂಡಿದ್ದ ಕೆ.ಸಿ. ಚಂದ್ರಶೇಖರ ರಾವ್ ಅವರ ಪುತ್ರಿ ಕೆ. ಕವಿತಾ ಅವರು ಪಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ.

ದೆಹಲಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಆರ್‌ಎಸ್‌ಗೆ ರಾಜೀನಾಮೆ ನೀಡುತ್ತಿದ್ದೇನೆ. ಮತ್ತು ಪರಿಷತ್‌ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದು, ಪತ್ರವನ್ನು ಪರಿಷತ್ತಿನ ಸ್ಪೀಕರ್‌ಗೆ ಸಲ್ಲಿಸುತ್ತಿರುವೆ” ಎಂದು ಹೇಳಿದ್ದಾರೆ.

ಅಧ್ಯಕ್ಷ ಕೆ. ಚಂದ್ರಶೇಖ‌ರ್ ರಾವ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಕವಿತಾ ಅವರನ್ನು ಸೋಮವಾರ ಅಮಾನತು ಮಾಡಿದ್ದರು. ಕವಿತಾ ಅವರ ಇತ್ತೀಚೆಗೆ ನಡೆ ಮತ್ತು ಅವರ ಪಕ್ಷ ವಿರೋಧಿ ಚಟುವಟಿಕೆಗಳು ಬಿಆರ್‌ಎಸ್‌ಗೆ ಇರಿಸುಮುರಿಸು ಉಂಟು ಮಾಡಿದ್ದವು. ಇದರಿಂದಾಗಿ ಅವರನ್ನು ಅಮಾನತು ಮಾಡುವ ನಿರ್ಧಾರವನ್ನು ಪಕ್ಷ ತೆಗೆದುಕೊಂಡಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಟಿ.ರವೀಂದರ್ ರಾವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...