ಜೈಲಿನಿಂದಲೇ ಬಿಆರ್‌ಎಸ್ ನಾಯಕಿ ಕೆ ಕವಿತಾರನ್ನು ಬಂಧಿಸಿದ ಸಿಬಿಐ

Date:

ಭಾರತ್‌ ರಾಷ್ಟ್ರೀಯ ಸಮಿತಿ(ಬಿಆರ್‌ಎಸ್) ನಾಯಕಿ, ಶಾಸಕಿ ಕೆ ಕವಿತಾ ಅವರನ್ನು ದೆಹಲಿ ಅಬಕಾರಿ ಹಗರಣ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತಿಹಾರಿ ಜೈಲಿನಿಂದ ಬಂಧಿಸಿದೆ.

ಕವಿತಾ ಅವರು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿದ್ದು, ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ.ಯಿಂದ ಮಾ.15ರಂದು ಬಂಧಿತರಾಗಿ ಏ.23ರವರೆಗೂ ತಿಹಾರಿ ಜೈಲಿನಲ್ಲಿ ಇರಬೇಕಾಗಿತ್ತು.

“ಇದು ಸಂಪೂರ್ಣವಾಗಿ ಹೇಳಿಕೆಯನ್ನು ಆದರಿಸಿದ ಪ್ರಕರಣವಾಗಿದೆ. ಇದೊಂದು ರಾಜಕೀಯ ಪ್ರಕರಣ. ಈ ಪ್ರಕರಣದಲ್ಲಿ ವಿರೋಧ ಪಕ್ಷಗಳನ್ನು ಗುರಿ ಮಾಡಲಾಗುತ್ತಿದೆ. ಜೈಲಿನಲ್ಲಿರುವಾಗಲೆ ನನ್ನ ಹೇಳಿಕೆಯನ್ನು ಸಿಬಿಐ ಈಗಾಗಲೇ ದಾಖಲಿಸಿದೆ” ಎಂದು ಕೆ ಕವಿತಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಪ್ರಣಾಳಿಕೆ- ಸುಳ್ಳು ಸುಳ್ಳೇ ಮುಸ್ಲಿಮ್ ಲೀಗ್ ಮೊಹರು ಹಾಕಿದ ಮೋದಿ

ಇತ್ತೀಚಿಗಷ್ಟೆ ಕೋರ್ಟಿನಿಂದ ವಿಶೇಷ ಅನುಮತಿ ಪಡೆದಿದ್ದ ಸಿಬಿಐ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿಯೇ ಕವಿತಾ ಅವರನ್ನು ಪ್ರಶ್ನಿಸಿದ್ದರು.

ದೆಹಲಿ ಅಬಕಾರಿ ನೀತಿಯಲ್ಲಿ ರಾಷ್ಟ್ರ ರಾಜಧಾನಿಯಿಂದ ಅನುಕೂಲ ಪಡೆಯಲು ಎಎಪಿಗೆ 100 ಕೋಟಿ ಲಂಚ ನೀಡಿದ ನಂತರ, ಸಹ ಅಪರಾಧಿ ಬುಚಿ ಬಾಬು ಅವರಿಂದ ಭೂವ್ಯವಹಾರದ ದೂರವಾಣಿ ಹಾಗೂ ದಾಖಲೆಗಳಿಗೆ ಸಂಬಂಧಿಸಿದ ವಾಟ್ಸಾಪ್‌ ಚಾಟ್‌ಗಳನ್ನು ವಶಪಡಿಸಿಕೊಂಡ ಬಗ್ಗೆ ಕವಿತಾ ಅವರನ್ನು ಪ್ರಶ್ನೆ ಕೇಳಲಾಗಿತ್ತು.

ಏಪ್ರಿಲ್ 6 ರಂದು ಸಿಬಿಐ ತಿಹಾರಿ ಜೈಲಿಗೆ ತೆರಳಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಹೇಳಿಕೆಯನ್ನು ಪಡೆದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...