ಕಾಂಗ್ರೆಸ್ ಸೇರ್ಪಡೆ ನಂತರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ ಕೇಶವ್ ರಾವ್

Date:

ಕಾಂಗ್ರೆಸ್‌ ಸೇರ್ಪಡೆಗೊಂಡ ಒಂದು ದಿನದ ನಂತರ ಹಿರಿಯ ನಾಯಕ ಕೆ ಕೇಶವ್‌ ರಾವ್ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಆರ್‌ಎಸ್‌ ಟಿಕೆಟ್‌ನಿಂದ ರಾಜ್ಯಸಭೆ ಸದಸ್ಯರಾಗಿದ್ದ ಅವರು ತಾವು ಸದಸ್ಯರಾಗಿ ಮುಂದುವರಿಯಲು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ ಎಂದು ತಿಳಿಸಿದ್ದಾರೆ.

85 ವರ್ಷದ ಕೆ ಕೇಶವ್‌ರಾವ್‌ ಅವರಿಗೆ ತಮ್ಮ ರಾಜ್ಯಸಭಾ ಸದಸ್ಯತ್ವದ ಅವಧಿ ಇನ್ನು ಎರಡು ವರ್ಷಗಳವರೆಗೆ ಇತ್ತು. ಕೇಶವ್‌ ರಾವ್‌ ಅವರು ರಾಜ್ಯಸಭಾ ಅಧ್ಯಕ್ಷ ಜಗದೀಪ್‌ ಧನಕರ್‌ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ.

“ನಿನ್ನೆ ಕಾಂಗ್ರೆಸ್ ಸೇರಿಕೊಂಡ ಪರಿಣಾಮ ಕಳೆದ ಬಾರಿ ಬಿಆರ್‌ಎಸ್‌ ಚಿಹ್ನೆಯಿಂದ ರಾಜ್ಯಸಭೆಗೆ ಚುನಾಯಿತರಾಗಿದ್ದ ಕಾರಣ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಿತ್ತು. ನಾನು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ನನ್ನ ಸ್ಥಾನವನ್ನು ತ್ಯಜಿಸಿದ್ದೇನೆ” ಎಂದು ರಾವ್‌ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಮಳೆ ಹೊಯ್ಯುತಿದೆ, ಡೆಂಘೀ ಹರಡುತಿದೆ- ಆರೋಗ್ಯ ಇಲಾಖೆ ಏನು ಮಾಡುತ್ತಿದೆ?

“ಕನಿಷ್ಠ ಮೌಲ್ಯಗಳನ್ನು ಎತ್ತಿಹಿಡಿಯುವುದಕ್ಕಾಗಿ ರಾಜ್ಯಸಭೆ ಅಧ್ಯಕ್ಷರಿಗೆ ನನ್ನ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನ್ನ ಅವಧಿ ಇನ್ನು ಎರಡು ವರ್ಷಗಳ ಕಾಲದವರೆಗೆ ಇತ್ತು” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮೊದಲು ಕಾಂಗ್ರೆಸ್‌ನಲ್ಲಿದ್ದ ಕೇಶವ್‌ ರಾವ್‌ ಅವರು ತೆಲಂಗಾಣ ರಾಜ್ಯ ರಚನೆಗೆ ತಡ ಮಾಡಿದ ಕಾರಣಕ್ಕಾಗಿ 2013ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಕೆ ಚಂದ್ರಶೇಖರ್‌ ರಾವ್‌ ನೇತೃತ್ವದಲ್ಲಿ ಬಿಆರ್‌ಎಸ್‌ ಸೇರ್ಪಡೆಗೊಂಡಿದ್ದರು. ಈ ಮೊದಲು ಆಂಧ್ರ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದರು.

ಬುಧವಾರ ಜುಲೈ 3 ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್‌ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...