ಮೋದಿ ಸಂಪುಟದಲ್ಲಿ ರಾಮ್ ಮೋಹನ್ ನಾಯ್ಡು ಕಿರಿಯ, ಜಿತಿನ್ ರಾಮ್ ಮಾಂಝಿ ಹಿರಿಯ ಮಂತ್ರಿ

Date:

ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಆಂಧ್ರ ಪ್ರದೇಶದ ಟಿಡಿಪಿಯ ರಾಮ್ ಮೋಹನ್‌ ನಾಯ್ಡು ಅತೀ ಕಿರಿಯ ಸಚಿವನಾದರೆ, ಬಿಹಾರದ ಹಿಂದೂಸ್ತಾನಿ ಹವಾಮಿ ಮೋರ್ಚಾದ ಜಿತಿನ್ ರಾಮ್‌ ಮಾಂಝಿ ಅತೀ ಹಿರಿಯ ಸಚಿವರಾಗಿದ್ದಾರೆ.

ರಾಮಮೋಹನ್ ನಾಯ್ಡು ಅವರಿಗೆ ಈಗ ವಯಸ್ಸು ಕೇವಲ 36 ವರ್ಷ. ರಾಮಮೋಹನ್ ನಾಯ್ಡು ಮೂರನೇ ಬಾರಿ ಸಂಸದರಾಗಿದ್ದಾರೆ. 2014ರಲ್ಲಿ ಅವರು 26ನೇ ವಯಸ್ಸಿಗೆ ಸಂಸದರಾಗಿದ್ದರು. ಎರಡನೇ ಅತ್ಯಂತ ಕಿರಿಯ ವಯಸ್ಸಿನ ಸಂಸದರೆಂಬ ದಾಖಲೆ ಅವರದಾಗಿತ್ತು. ಈಗ ಅತ್ಯಂತ ಕಿರಿಯ ವಯಸ್ಸಿನ ಕೇಂದ್ರ ಮಂತ್ರಿ ಎಂಬ ದಾಖಲೆ ಅವರದ್ದಾಗಿದೆ. ಅವರು ಮೋದಿ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವ ಸ್ಥಾನ ದೊರಕಿದೆ.

ಆಂಧ್ರದ ಶ್ರೀಕಾಕುಲಂ ಕ್ಷೇತ್ರದಿಂದ ಸತತವಾಗಿ ಮೂರನೇ ಬಾರಿ ಗೆದ್ದಿರುವ ರಾಮಮೋಹನ್ ರೆಡ್ಡಿ ಅವರು ಮಾಜಿ ಕೇಂದ್ರ ಸಚಿವ ಕೆ ಯರನ್ ನಾಯ್ಡು ಅವರ ಪುತ್ರ. ಕುತೂಹಲ ಎಂದರೆ ಯರನ್ ನಾಯ್ಡು ಕೂಡ ಅತ್ಯಂತ ಕಿರಿಯ ವಯಸ್ಸಿನ ಸಂಪುಟ ದರ್ಜೆ ಸಚಿವ ಎಂಬ ದಾಖಲೆಯನ್ನು 1996ರಲ್ಲಿ ಹೊಂದಿದ್ದರು. 2012ರಲ್ಲಿ ಯರನ್ ನಾಯ್ಡು ರಸ್ತೆ ಅಪಘಾತದಲ್ಲಿ ಮೃತಪಟ್ಟ ನಂತರ ರಾಮಮೋಹನ್ ನಾಯ್ಡು ರಾಜಕೀಯಕ್ಕೆ ಬರಬೇಕಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೋದಿ ಮಂತ್ರಿಮಂಡಲದಲ್ಲಿ 71 ಸಚಿವರ ಪ್ರಮಾಣ ವಚನ: 24 ರಾಜ್ಯಗಳಿಗೆ, ಮಿತ್ರಪಕ್ಷಗಳ 11 ಮಂದಿಗೆ ಸ್ಥಾನ

ಬಿಹಾರದ ಮಾಜಿ ಮುಖ್ಯಮಂತ್ರಿ ಜಿತಿನ್‌ ರಾಮ್‌ ಮಾಂಝಿ ಅವರ ವಯಸ್ಸು 79 ವರ್ಷ. ಇವರು ಮೋದಿ ಸಂಪುಟದ ಅತೀ ಹಿರಿಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ಹಿಂದೂಸ್ತಾನಿ ಹವಾಮಿ ಮೋರ್ಚಾದ ಜಿತಿನ್ ರಾಮ್‌ ಮಾಂಝಿ ದಲಿತ ಸಮುದಾಯದವರು. ಬಿಹಾರದ ಗಯಾ ಕ್ಷೇತ್ರದಿಂದ ಈ ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

2014ರಲ್ಲಿ ತಾವು ಜೆಡಿಯುನಲ್ಲಿದ್ದಾಗ 8 ತಿಂಗಳ ಕಾಲ ಬಿಹಾರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಹಿಂದೂಸ್ತಾನಿ ಹವಾಮಿ ಮೋರ್ಚಾ ಪಕ್ಷ ಸ್ಥಾಪಿಸುವುದಕ್ಕೂ ಮುನ್ನ ಜೆಡಿಯು, ಆರ್‌ಜೆಡಿ, ಕಾಂಗ್ರೆಸ್‌ ಪಕ್ಷದಲ್ಲಿದ್ದರು.

ಇದಲ್ಲದೆ 37 ವರ್ಷದ ಮಹಾರಾಷ್ಟ್ರದ ರಕ್ಷಾ ಖಡ್ಸಾ, 41 ವರ್ಷದ ಬಿಹಾರದ ಎಲ್‌ಜೆಪಿಯ ಚಿರಾಗ್‌ ಪಾಸ್ವಾನ್‌ ಹಾಗೂ ಉತ್ತರ ಪ್ರದೇಶದ 45 ವರ್ಷದ ಆರ್‌ಎಲ್‌ಡಿಯ ಜಿತಿನ್‌ ಪ್ರಸಾದ್‌ ಇತರ ಕಿರಿಯ ವಯಸ್ಸಿನ ಮಂತ್ರಿಗಳಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...