ನಾಲ್ಕನೇ ಬಾರಿಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

Date:

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಅಧ್ಯಕ್ಷರಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಗುರುವಾರ ಆಯ್ಕೆಯಾಗಿದ್ದಾರೆ. ಸಂಘದ ಚುನಾವಣೆ ಗುರುವಾರ ನಡೆದಿದ್ದು ಸುಮಾರು 23 ವರ್ಷಗಳ ಬಳಿಕ ಮತ್ತೆ ಕಪಿಲ್ ಸಿಬಲ್ ಆಯ್ಕೆಗೊಂಡಿದ್ದಾರೆ.

ಎಸ್‌ಸಿಬಿಎ ಅಧ್ಯಕ್ಷ ಸ್ಥಾನಕ್ಕೆ ಕಪಿಲ್ ಸಿಬಲ್ ಮಾತ್ರವಲ್ಲದೆ ಹಿರಿಯ ವಕೀಲರಾದ ಆದಿಶ್ ಸಿ ಅಗರ್ವಾಲಾ, ಪ್ರದೀಪ್ ಕುಮಾರ್ ರೈ, ಪ್ರಿಯಾ ಹಿಂಗೋರಾಣಿ ಮತ್ತು ವಕೀಲರಾದ ತ್ರಿಪುರಾರಿ ರೇ ಮತ್ತು ನೀರಜ್ ಶ್ರೀವಾಸ್ತವ ಸ್ಪರ್ಧಿಸಿದ್ದರು.

ಇದನ್ನು ಓದಿದ್ದೀರಾ?  11 ದಿನದ ನಂತರ ಶೇಕಡವಾರು ಮತದಾನದ ವಿವರ ಪ್ರಕಟ: ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಕಪಿಲ್ ಸಿಬಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಪಿಲ್ ಸಿಬಲ್ ಅವರಿಗೆ ಎಸ್‌ಸಿಬಿಎ ಅಧ್ಯಕ್ಷಗಿರಿ ಚುನಾವಣೆಯಲ್ಲಿ ಒಂದು ಸಾವಿರಕ್ಕೂ ಅಧಿಕ ಮತಗಳು ಲಭ್ಯವಾಗಿದ್ದರೆ, ಪ್ರದೀಪ್ ಕುಮಾರ್ ರೈ ಅವರಿಗೆ 650ಕ್ಕೂ ಅಧಿಕ ಮತಗಳು ಲಭಿಸಿದೆ ಎಂದು ವರದಿಯಾಗಿದೆ.

ಹಾರ್ವರ್ಡ್ ಕಾನೂನು ಶಾಲೆಯಲ್ಲಿ ಪದವಿ ಪಡೆದ ಸಿಬಲ್ ಅವರು 1989-90ರ ಅವಧಿಯಲ್ಲಿ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ಅವರನ್ನು 1983 ರಲ್ಲಿ ಹಿರಿಯ ವಕೀಲರಾಗಿ ನೇಮಿಸಲಾಗಿದೆ.

ಈ ಹಿಂದೆ 1995 ಮತ್ತು 2002ರ ನಡುವೆ, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಮಾಜಿ ಸಚಿವರು ಆಗಿದ್ದ ಕಪಿಲ್ ಸಿಬಲ್ ಅವರ ಈ ಹಿಂದೆ ಮೂರು ಬಾರಿ ಎಸ್‌ಸಿಬಿಎ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಈಗ ನಾಲ್ಕನೇ ಬಾರಿಗೆ ಮತ್ತೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇದನ್ನು ಓದಿದ್ದೀರಾ?  ದೇಣಿಗೆ ನೀಡಿ ಲಾಭ ಪಡೆದಿರುವುದು ದೊಡ್ಡ ಹಗರಣ: ಎಸ್ಐಟಿ ತನಿಖೆಗೆ ಕಪಿಲ್ ಸಿಬಲ್ ಆಗ್ರಹ

ಎಸ್‌ಸಿಬಿಎಯ ಕಾರ್ಯಕಾರಿ ಸಮಿತಿಯಲ್ಲಿ ಕೆಲವು ಹುದ್ದೆಗಳನ್ನು ಮಹಿಳಾ ಸದಸ್ಯರಿಗೆ ಮೀಸಲಿಡುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು. ಮುಂಬರುವ 2024-2025ರ ಎಸ್‌ಸಿಬಿಎ ಚುನಾವಣೆಯಲ್ಲಿ ಕಾರ್ಯಕಾರಿ ಸಮಿತಿಯ ಖಜಾಂಚಿ ಹುದ್ದೆಯನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಪೀಠ ಹೇಳಿತ್ತು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಕ್ಸ್ ಪೋಸ್ಟ್

ಸಿಬಲ್ ಅವರು ಎಸ್‌ಸಿಬಿಎ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಮೇಲೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್ ಪೋಸ್ಟ್ ಮಾಡಿದ್ದು, “ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿ ಈಗಷ್ಟೇ ಪ್ರಚಂಡ ಬಹುಮತದಿಂದ ಆಯ್ಕೆಯಾಗಿದ್ದಾರೆ. ಇದು ಉದಾರವಾದಿ, ಜಾತ್ಯತೀತ, ಪ್ರಜಾಪ್ರಭುತ್ವ, ಪ್ರಗತಿಪರ ಶಕ್ತಿಗಳಿಗೆ ದೊಡ್ಡ ಗೆಲುವು. ಇದು ರಾಷ್ಟ್ರೀಯವಾಗಿ ಶೀಘ್ರದಲ್ಲೇ ಸಂಭವಿಸುವ ಬದಲಾವಣೆಗಳಿಗೆ ಟ್ರೇಲರ್ ಆಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...