ರಾಜೀನಾಮೆ ನೀಡಿ ಕೆಲಸ ತೊರೆದಿದ್ದ ಮಹಿಳಾ ಬಸ್ ಚಾಲಕಿಗೆ ಕಾರು ಉಡುಗೊರೆ ನೀಡಿದ ಕಮಲ್ ಹಾಸನ್

Date:

ಕಳೆದ ವಾರ ಡಿಎಂಕೆ ಸಂಸದೆ ಕನಿಮೊಳಿ ಅವರ ಪ್ರಯಾಣದ ವೇಳೆ ಟಿಕೆಟ್ ವಿಚಾರವಾಗಿ ಉಂಟಾದ ವಿವಾದ ಹಿನ್ನೆಲೆಯಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಬಸ್ ಚಾಲಕಿಗೆ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಸೋಮವಾರ (ಜೂ.26) ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

ಕೊಯಮತ್ತೂರಿನ ಮೊದಲ ಬಸ್ ಚಾಲಕಿಯಾಗಿರುವ ಶರ್ಮಿಳಾ ಅವರಿಗೆ ಕಮಲ್ ಕಲ್ಚರಲ್ ಸೆಂಟರ್ ವತಿಯಿಂದ ಚಾಲಕಿ ಹಾಗೂ ಉದ್ಯಮಿಯಾಗಲು ಅವಕಾಶ ಮಾಡಿಕೊಡುವ ಸಲುವಾಗಿ ಈ ಕಾರನ್ನು ನೀಡಲಾಗಿದೆ ಎಂದು ಮಕ್ಕಳ್ ನೀಧಿ ಮಾಯಂ (ಎಂಎನ್‌ಎಂ) ಅಧ್ಯಕ್ಷರು ಆದ ಕಮಲ್ ಹಾಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಚಾಲಕಿಯಾಗಿ ಕಾರ್ಯನಿರ್ವಹಿಸುತ್ತ ತನ್ನ ವಯಸ್ಸಿನ ಮಹಿಳೆಯರಿಗೆ ಅತ್ಯುತ್ತಮ ಉದಾಹರಣೆಯಾಗಿದ್ದ ಶರ್ಮಿಳಾ ಅವರು ಇತ್ತೀಚಿಗೆ ಕೆಲಸ ಕಳೆದುಕೊಂಡ ಬಗ್ಗೆ ನಾನು ದುಃಖಿತನಾಗಿದ್ದೆ. ಶರ್ಮಿಳಾ ಕೇವಲ ಚಾಲಕಿಯಾಗಿ ಉಳಿಯಬಾರದು. ಅನೇಕ ಶರ್ಮಿಳಾರನ್ನು ಸೃಷ್ಟಿಸಬೇಕೆಂಬುದು ನನ್ನ ನಂಬಿಕೆ” ಎಂದು ಕಮಲ್‌ ಹಾಸನ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಣಿಪುರದ ಬಗ್ಗೆ ಕಾಳಜಿಯಿದ್ದರೆ ಮೊದಲು ಮುಖ್ಯಮಂತ್ರಿಯನ್ನು ವಜಾ ಮಾಡಿ: ಪ್ರಧಾನಿಗೆ ಖರ್ಗೆ ಆಗ್ರಹ 

ಕಳೆದ ವಾರ, ಶರ್ಮಿಳಾ ಚಲಾಯಿಸುತ್ತಿದ್ದ ಬಸ್‌ನಲ್ಲಿ ಗಾಂಧಿಪುರಂನಿಂದ ಕೊಯಮತ್ತೂರಿನ ಪೀಲಮೇಡುವಿಗೆ ಕನಿಮೊಳಿ ಪ್ರಯಾಣಿಸಿದ್ದರು. ಈ ವೇಳೆ ಅವರ ಬಳಿ ಟಿಕೆಟ್ ಇದ್ದರೂ ಡಿಎಂಕೆ ಸಂಸದರನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದಿತ್ತು. ಅಲ್ಲದೇ ಪ್ರಚಾರಕ್ಕಾಗಿ ಶರ್ಮಿಳಾ ಈ ರೀತಿ ಮಾಡಿದ್ದಾರೆ ಎಂಬ ಆರೋಪದ ನಂತರ ಚಾಲಕಿ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...