ಭಾರತದ ಮೊದಲ ದಲಿತ ರಾಷ್ಟ್ರಪತಿ ‘ರಾಮ್‌ ಕೋವಿಡ್’ ಎಂದ ಕಂಗನಾ; ವಿಡಿಯೋ ವೈರಲ್

Date:

ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್ ಮಾಧ್ಯಮ ಸಂದರ್ಶನದ ವೇಳೆ ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ‘ರಾಮ್‌ ಕೋವಿಡ್’ ಎಂದು ತಪ್ಪಾಗಿ ಉಚ್ಚಾರಣೆ ಮಾಡಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

The Lallantop ಸುದ್ದಿ ಮಾಧ್ಯಮದ ಸಂಸ್ಥಾಪಕ ಸಂಪಾದಕ ಸೌರಭ್ ದ್ವಿವೇದಿ ಜೊತೆಗಿನ ಸಂದರ್ಶನದಲ್ಲಿ ಕಂಗನಾ ರಣಾವತ್ ದೇಶದಲ್ಲಿ ಜಾತಿ ವ್ಯವಸ್ಥೆಯ ಬಗ್ಗೆ ಮಾತನಾಡುತ್ತಾ ನಮ್ಮ ದೇಶದ ಮೊದಲ ದಲಿತ ರಾಷ್ಟ್ರಪತಿ ‘ರಾಮ್ ಕೋವಿಡ್’ ಎಂದು ಹೇಳಿದ್ದಾರೆ.

ಈ ವೇಳೆ ಸಂದರ್ಶಕ ಸೌರಭ್ ದ್ವಿವೇದಿ ಮೊದಲನೆಯ ದಲಿತ ರಾಷ್ಟ್ರಪತಿ ಅಲ್ಲ ಎರಡನೇ ದಲಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಆಗಿದ್ದಾರೆ. ಮೊದಲನೆಯ ದಲಿತ ರಾಷ್ಟ್ರಪತಿ ಕೆ ಆರ್ ನಾರಾಯಣನ್ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಕೂಡಲೇ ನಟಿ, ಬಿಜೆಪಿ ಸಂಸದೆ ತನ್ನ ತಪ್ಪು ಮಾಹಿತಿಗೆ ಕ್ಷಮೆಯಿರಲಿ (Sorry for my misinformation) ಎಂದು ಹೇಳಿದ್ದಾರೆ. ಸದ್ಯ ಟ್ರೋಲಿಗರಿಗೆ ಈ ವಿಡಿಯೋ ಹಬ್ಬವಾಗಿದ್ದು, ಕಂಗನಾ ಕಾಲೆಳೆಯುತ್ತಿದ್ದಾರೆ.

ಇದನ್ನು ಓದಿದ್ದೀರಾ? ಕಂಗನಾ ರಣಾವತ್ | ಬಿಜೆಪಿ ಪಾಲಿಗೆ ಸೆರಗಿನ ಕೆಂಡವೋ, ಫೈರ್‌ ಬ್ರ್ಯಾಂಡೋ?

“ಮೊದಲನೆಯದಾಗಿ ಅವರ ಹೆಸರು ‘ರಾಮ್‌ ಕೋವಿಡ್’ ಅಲ್ಲ ರಾಮ್ ನಾಥ್ ಕೋವಿಂದ್ ಆಗಿದೆ. ಮತ್ತೆ ಅವರು ದೇಶದ ಮೊದಲ ದಲಿತ ರಾಷ್ಟ್ರಪತಿಯಲ್ಲ, ಎರಡನೇ ದಲಿತ ರಾಷ್ಟ್ರಪತಿ” ಎಂದು ನೆಟ್ಟಿಗರು ಕಂಗನಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕಂಗನಾಗೆ ಐಕ್ಯೂ ಕಡಿಮೆಯಿದೆ ಎಂದು ಕೆಲವು ನೆಟ್ಟಿಗರು ಹೇಳಿದರೆ, ಇನ್ನು ಕೆಲವು ನೆಟ್ಟಿಗರು ರಾಮ್‌ ನಾಥ್ ಕೋವಿಡ್ ಅವರು ಇದನ್ನು ಕೇಳಿದರೆ ಖಂಡಿತವಾಗಿಯೂ ಅಳುತ್ತಾರೆ ಎಂದಿದ್ದಾರೆ. ಇನ್ನು ಕೆಲವು ನೆಟ್ಟಿಗರು ಇದೊಂದು ಗುಪ್ತ ಪ್ರತಿಭೆ ಎಂದು ಆಡಿಕೊಂಡಿದ್ದಾರೆ. ಕೆಲವರು ಕೋವಿಡ್ ಲಸಿಕೆ ಅಡ್ಡ ಪರಿಣಾಮ ಎಂದು ಹಾಸ್ಯ ಮಾಡಿದ್ದಾರೆ.

“ಇಂತಹ ಅದ್ಭುತ ಸಂಸದರನ್ನು ಕಳುಹಿಸಿದ್ದಕ್ಕಾಗಿ ನಾವು ಹಿಮಾಚಲಕ್ಕೆ ಧನ್ಯವಾದ ಹೇಳಬೇಕು. ಇಲ್ಲದಿದ್ದರೆ ಅಂತಹ ಗುಪ್ತ ರತ್ನಗಳ ಬಗ್ಗೆ ನಮಗೆ ತಿಳಿಯುತ್ತಿರಲಿಲ್ಲ” ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...