ದೆಹಲಿ | ಬೆಂಬಲಿಗನ ನೆಪದಲ್ಲಿ ಬಂದು ಕನ್ಹಯ್ಯ ಕುಮಾರ್ ಮೇಲೆ ಹಲ್ಲೆಗೈದ ಬಿಜೆಪಿ ಕಾರ್ಯಕರ್ತ

Date:

ಚುನಾವಣಾ ಪ್ರಚಾರ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವ ಬೆಂಬಲಿಗನ ನೆಪದಲ್ಲಿ ಬಂದು ಈಶಾನ್ಯ ದೆಹಲಿಯ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ನಡೆದಿದೆ.

ಹೂವಿನ ಹಾರವೊಂದನ್ನು ತಂದು, ಕನ್ಹಯ್ಯ ಕುಮಾರ್ ಕೊರಳಿಗೆ ಹಾಕಿದ ಬಳಿಕ ಕೆನ್ನೆಗೆ ಬಾರಿಸಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಕಾಂಗ್ರೆಸ್ ಹಾಗೂ ಇತರ ಕಾರ್ಯಕರ್ತರು ಆತನನ್ನು ಹಿಡಿದಿದ್ದಾರೆ. ಹಲ್ಲೆಗೈದಾತನ ವಿವರ ಇನ್ನೂ ಲಭ್ಯವಾಗಿಲ್ಲ. ಈಶಾನ್ಯ ದೆಹಲಿಯ ಓಸ್ಮಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ತಾರ್ ನಗರದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಯ ವೇಳೆಯಲ್ಲಿಯೇ ಆಮ್ ಆದ್ಮಿ ಪಕ್ಷದ ಮಹಿಳಾ ಕೌನ್ಸಿಲರ್ ಛಾಯಾ ಶರ್ಮಾ ಅವರೊಂದಿಗೂ ಬಿಜೆಪಿ ಕಾರ್ಯಕರ್ತರು ಅನುಚಿತವಾಗಿ ವರ್ತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ತಮ್ಮ ದೂರಿನಲ್ಲಿ, ಶುಕ್ರವಾರ ಸಂಜೆ 4 ಗಂಟೆಗೆ ಕರ್ತಾರ್ ನಗರದ ಸತ್ಯನಾರಾಯಣ ಭವನದ ಕೌನ್ಸಿಲರ್ ಕಚೇರಿ ಚೌತಾ ಪುಷ್ಮದಲ್ಲಿ ನಡೆದ ಸಭೆಯ ನಂತರ ಸುಮಾರು 7-8 ಜನರು ಬಂದು ಕನ್ನಯ್ಯಾ ಕುಮಾರ್‌ಗೆ ಹಾರ ಹಾಕಿ ಕಪಾಳಮೋಕ್ಷ ಮಾಡಿದರು. ಈ ವೇಳೆ ನಾನೂ ಕೂಡ ಅಲ್ಲಿ ಉಪಸ್ಥಿತಳಿದ್ದೆ. ನನ್ನ ಜುಟ್ಟು ಹಿಡಿದು ಎಳೆದಾಡಿದ್ದಾರೆ. ಇದಾದ ಬಳಿಕ ನನಗೆ ಹಾಗೂ ನನ್ನ ಪತಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಅಲ್ಲದೇ 30 ರಿಂದ 40 ಜನರ ಮೇಲೆ ಕಪ್ಪು ಮಸಿ ಎರಚಲಾಗಿದೆ. ಘಟನೆಯ ವೇಳೆ ಮೂರ್ನಾಲ್ಕು ಮಹಿಳೆಯರು ಕೂಡ ಗಾಯಗೊಂಡಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಕನ್ಹಯ್ಯ ಕುಮಾರ್ ಅವರಿಗೆ ಹಲ್ಲೆ ನಡೆಸಲು ಯತ್ನಿಸಿದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪೂರ್ವ ಯೋಜಿತ ಕೃತ್ಯ ಶಂಕೆ

ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾದ ಕನ್ಹಯ್ಯ ಕುಮಾರ್, ಬಿಜೆಪಿ ಅಭ್ಯರ್ಥಿಯಾದ ಮನೋಜ್ ತಿವಾರಿ ವಿರುದ್ಧ ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಭರ್ಜರಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇದರಿಂದ ಸಹಿಸದ ಬಿಜೆಪಿ ಅಭ್ಯರ್ಥಿ ಮನೋಜ್ ತಿವಾರಿ ಬೆಂಬಲಗನೋರ್ವ, ಪೂರ್ವ ಯೋಜಿತವಾಗಿ ಈ ಕೃತ್ಯ ಎಸಗಿರುವ ಅನುಮಾನ ದಟ್ಟವಾಗಿದೆ.

ವೈರಲ್ ಆಗಿರುವ ವಿಡಿಯೋವೊಂದರಲ್ಲಿ ವಿಡಿಯೋ ಮಾಡುತ್ತಿದ್ದ ಬಲಪಂಥೀಯ ಸುದ್ದಿ ಹರಡುವ ಸುದರ್ಶನ್ ನ್ಯೂಸ್‌ನ ವ್ಯಕ್ತಿ, “ಈಗ ಕನ್ಹಯ್ಯ ಕುಮಾರ್‌ಗೆ ಹೊಡೆತ ಬೀಳಲಿದೆ ಎಂದು ಹಿಂದಿಯಲ್ಲಿ ಹೇಳುತ್ತಿರುವುದು ಕೇಳಿಸಿದೆ.

ಹಲ್ಲೆಗೈದಿದ್ದ ಬಿಜೆಪಿ ಕಾರ್ಯಕರ್ತನನ್ನು ಕೂಡಲೇ ಹಿಡಿದ ಸ್ಥಳದಲ್ಲಿದ್ದವರು, ಆತನ ಮೇಲೂ ಹಲ್ಲೆಗೈದಿರುವುದಾಗಿ ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...