11 ದಿನದ ನಂತರ ಶೇಕಡವಾರು ಮತದಾನದ ವಿವರ ಪ್ರಕಟ: ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಕಪಿಲ್ ಸಿಬಲ್

Date:

ಮೊದಲ ಹಾಗೂ ಎರಡನೇ ಹಂತದ ಶೇಕಡವಾರು ಮತದಾನದ ವಿವರಗಳನ್ನು ಗಮನಾರ್ಹವಾಗಿ ತಡ ಮಾಡಿದ ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ಶೇಕಡವಾರನ್ನು ಚುನಾವಣೆ ನಡೆದ 11 ದಿನದ ನಂತರ ಏಕೆ ಅಪ್‌ಲೋಡ್‌ ಮಾಡಲಾಗಿದೆ. ಸಾರ್ವಜನಿಕರ ದೃಷ್ಟಿಯಲ್ಲಿ ಆಯೋಗದ ವಿಶ್ವಾರ್ಹತೆ ಹಾಗೂ ಸಕಾಲಿಕ ಮಾಹಿತಿ ಮುಖ್ಯವಾಗಿದೆ ಎಂದು ತಿಳಿಸಿದರು.

“ಇವಿಎಂ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಧಾರ ಪ್ರಕಟಿಸಿದ್ದು, ಪ್ರತಿ ನಾಗರಿಕನು ಚುನಾವಣಾ ಆಯೋಗದ ಮೇಲೆ ನಂಬಿಕೆಯಿಡಬೇಕು ಎಂದು ಕೋರ್ಟ್ ಹೇಳಿದೆ. ಆದರೆ ಆಯೋಗವು ನಂಬಿಕಾರ್ಹವಾಗಿದೆಯೆ? ಮೊದಲ ಹಂತದ ಮತದಾನ ನಡೆದ 11 ದಿನಗಳ ನಂತರ ಚುನಾವಣಾ ಆಯೋಗವು ಮತದಾನದ ಶೇಕಡವಾರು ಅಂಕಿಅಂಶಗಳನ್ನು ಪ್ರಕಟಿಸಿದೆ. ಇದು ಕೇವಲ ಶೇಕಡವಾರನ್ನು ಪ್ರಕಟಿಸಲಾಗಿದೆ. ಅಂಕಿಅಂಶ ಪ್ರಕಟಿಸಲಾಗಿಲ್ಲ. ಚುನಾವಣಾ ಆಯೋಗವು ಏಕೆ 11 ದಿನದ ನಂತರ ಪ್ರಕಟಿಸಲಾಗಿದೆ ಎಂಬುದಕ್ಕೆ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲು ಇದು ಸಕಾಲ

“ನಾನು ಹಿಂದಿನ ಚುನಾವಣಾ ಆಯೋಗದ ಆಯುಕ್ತರ ಜೊತೆ ಮಾತನಾಡಿದ್ದು, ಅವರು ಹೇಳಿಕೆಯ ಪ್ರಕಾರ ಮತದಾನ ಮುಗಿನ ನಂತರ ಅಂದಿನ ರಾತ್ರಿ ಅಥವಾ ಮರುದಿನ ಪ್ರಕಟಿಸಬೇಕು ಎಂದು ಹೇಳಿದ್ದರು. ಮತ್ತೆ 11 ದಿನಗಳ ತಡವೇಕೆ. ಅನುಮಾನಗಳು ಹುಟ್ಟಿಕೊಂಡರೆ ಜನರ ನಂಬಿಕೆಯೂ ಕಡಿಮೆಯಾಗುತ್ತದೆ” ಎಂದು ಕಪಿಲ್ ಸಿಬಲ್ ಆಯೋಗದ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

ಈ ನಡುವೆ ಸುಪ್ರೀಂ ಕೋರ್ಟ್ ಕಳೆದ ವಾರ ಇವಿಎಂ ಮೂಲಕ ಮತದಾನ ಮಾಡಿದ ನಂತರ ವಿವಿಪ್ಯಾಡ್‌ನಲ್ಲಿ ಪರಿಶೀಲನಾ ಚೀಟಿಗಾಗಿ ಪ್ರಶ್ನಿಸಿದ್ದ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತ್ತು. ಅಲ್ಲದೆ ಮತಚೀಟಿಯ ಮೂಲಕ ನಡೆಯುವ ಮತದಾನಕ್ಕೂ ನಿರಾಕರಿಸಿತ್ತು.

ಚುನಾವಣಾ ಆಯೋಗವು ಏ.30 ರಂದು ಮೊದಲ ಹಂತದಲ್ಲಿ ಶೇ.66.14 ಹಾಗೂ ಎರಡನೇ ಹಂತದಲ್ಲಿ ಶೇ.66.71 ರಷ್ಟು ಮತದಾನವಾಗಿದೆ ಎಂದು ಪ್ರಕಟಣೆ ಹೊರಡಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...