ಮತಗಳ್ಳತನ ಆರೋಪ: ದಾಖಲೆ ಕೊಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

Date:

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಗಂಭೀರ ಮತ ಕಳ್ಳತನ ನಡೆದಿದೆ ಎಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ನಾಯಕ ರಾಹುಲ್ ಗಾಂಧಿ ಅವರಿಗೆ ರಾಜ್ಯ ಚುನಾವಣಾ ಆಯೋಗವು ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು , ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ಆರೋಪಿಸಿರುವ ದಾಖಲೆಗಳನ್ನು ಹಂಚಿಕೊಳ್ಳುವಂತೆ ಕೇಳಿದ್ದಾರೆ.

ಇತ್ತೀಚಿಗೆ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್ ಗಾಂಧಿ, ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1,00,250 ಮತಗಳಲ್ಲಿ ಅಕ್ರಮ ನಡೆದಿರುವುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಈ ಚುನಾವಣೆಯಲ್ಲಿ ಐದು ವಿಧದ ಅಕ್ರಮಗಳನ್ನು ಗುರುತಿಸಿರುವುದಾಗಿ ಅವರು ತಿಳಿಸಿದ್ದರು. ಆದರೆ, ಈ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳು ಚುನಾವಣಾ ಆಯೋಗದ ಅಧಿಕೃತ ದಾಖಲೆಗಳಿಂದ ಬಂದಿಲ್ಲವೆಂದು ಆಯೋಗ ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿಗಷ್ಟೆ ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್‌ ಗಾಂಧಿ ಅವರು, 70 ವಯಸ್ಸಿನ ಶಕುನ್ ರಾಣಿ ಎಂಬ ಮತದಾರರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ಆರೋಪಿಸಿದ್ದರು. “ಈಸ್ ಐಡಿ ಕಾರ್ಡ್ ಪರ್ ದೋ ಬಾರ್ ವೋಟ್ ಲಗಾಹೈ” ಎಂದು ಉಲ್ಲೇಖಿಸಿ, ಶಕುನ್ ರಾಣಿ ಎರಡು ವಿಭಿನ್ನ ಫೋಟೋಗಳೊಂದಿಗೆ ಎರಡು ಬಾರಿ ನೋಂದಣಿ ಮಾಡಿಕೊಂಡು ಮತ ಚೀಟಿ ಪಡೆದಿದ್ದಾರೆ ಎಂದು ಹೇಳಿದ್ದರು. ಆದರೆ, ಚುನಾವಣಾ ಆಯೋಗದ ಪ್ರಾಥಮಿಕ ತನಿಖೆಯಲ್ಲಿ, ಶಕುನ್ ರಾಣಿ ಕೇವಲ ಒಂದೇ ಬಾರಿ ಮತ ಚಲಾಯಿಸಿದ್ದಾರೆ ಎಂದು ಸ್ಪಷ್ಟವಾಗಿದೆ. ರಾಹುಲ್ ಗಾಂಧಿ ತೋರಿಸಿರುವ ಟಿಕ್ ಗುರುತಿನ ದಾಖಲೆಯು ಮತಗಟ್ಟೆ ಅಧಿಕಾರಿಗಳಿಂದ ನೀಡಲ್ಪಟ್ಟಿಲ್ಲ ಎಂದು ಆಯೋಗ ತಿಳಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿ ಮೋದಿಗೆ ಅದಾನಿ-ಅಂಬಾನಿ ದೋಸ್ತಿ ತಂದ ದುರ್ಗತಿ

ಚುನಾವಣಾ ಆಯೋಗವು ರಾಹುಲ್ ಗಾಂಧಿಗೆ, ಶಕುನ್ ರಾಣಿ ಅಥವಾ ಬೇರೆ ಯಾರಾದರೂ ಎರಡು ಬಾರಿ ಮತ ಚಲಾಯಿಸಿದ್ದರೆ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಕೇಳಿದೆ. ದಾಖಲೆಗಳು ಸಿಕ್ಕರೆ, ಆಯೋಗವು ಈ ವಿಷಯದ ಬಗ್ಗೆ ತನಿಖೆ ನಡೆಸಲಿದೆ ಎಂದು ತಿಳಿಸಿದೆ.

ರಾಹುಲ್ ಗಾಂಧಿ ತಮ್ಮ ನೀಡಿದ ದಾಖಲೆಗಳಲ್ಲಿ, ಮತದಾರರ ಪಟ್ಟಿಯಲ್ಲಿ 1,00,250 ಅಕ್ರಮ ಹೆಸರುಗಳು ಸೇರಿವೆ ಎಂದು ಆರೋಪಿಸಿದ್ದರು. ಇವುಗಳಲ್ಲಿ 11,965 ನಕಲಿ ಮತದಾರರು, 40,009 ತಪ್ಪು ವಿಳಾಸಗಳು, 10,452 ಅಕ್ರಮವಾಗಿ ಸೇರಿಸಲಾದ ಹೆಸರುಗಳು, 4,132 ತಪ್ಪಾದ ಭಾವಚಿತ್ರಗಳು, ಮತ್ತು 33,692 ಫಾರ್ಮ್ 6 ದುರ್ಬಳಕೆಯಿಂದ ಮತದಾನ ಮಾಡಿದ್ದರು ಎಂದು ವಿವರಿಸಿದ್ದರು.

ಈ ಆರೋಪಗಳ ಸತ್ಯಾಸತ್ಯತೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ರಾಹುಲ್ ಗಾಂಧಿಯಿಂದ ಸಾಕ್ಷ್ಯಾಧಾರಿತ ದಾಖಲೆಗಳನ್ನು ಕೋರಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...