ಕಾಶ್ಮೀರ ದಾಳಿ: ಮೃತದೇಹ ಗುರುತಿಸಲು ಕನ್ನಡಿಗರಿಗೆ ಸಚಿವ ಸಂತೋಷ್‌ ಲಾಡ್‌ ನೆರವು

Date:

ಜಮ್ಮು ಕಾಶ್ಮೀರ ಪಹಲ್ಗಾಮ್​ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಗುರುತು ಪತ್ತೆ ನಡೆಯುತ್ತಿದ್ದು, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಕಣಿವೆನಾಡಿಗೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಲಾಡ್‌, ತೊಂದರೆಗೊಳಗಾದ ಕನ್ನಡಿಗರ ನೆರವಿಗೆ ನಿಂತಿದ್ದಾರೆ.

ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ಸಂತೋಷ್‌ ಲಾಡ್‌ ನೆರವಾಗಿದ್ದಾರೆ. ಮೃತದೇಹಗಳು ನಿಮ್ಮ ಸಂಬಂಧಿಕರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ. ಯಾವ ಮೃತದೇಹಗಳನ್ನು ಈಗಾಗಲೇ ನೋಡಲಾಗಿದೆ ಎಂಬುದನ್ನೂ ಸಹ ಅವರು ತಪಾಸಣೆ ಮಾಡುತ್ತಿದ್ದಾರೆ.

ಮೃತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್‌ ಲಾಡ್‌ ಅವರೇ ತಿಳಿಸುತ್ತಿದ್ದಾರೆ. ”ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆ ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವು ನೀಡಲಾಗುವುದು. ನಮ್ಮ ಸರ್ಕಾರ ಎಲ್ಲ ರೀತಿಯಲ್ಲಿ ಸಹಾಯ ಮಾಡಲಿದೆ” ಎಂದು ಸಚಿವ ಲಾಡ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ

ಇಬ್ಬರ ಗುರುತು ಪತ್ತೆ: ಉಗ್ರರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗ ಮತ್ತು ರಾಣೆಬೆನ್ನೂರಿನ ಇಬ್ಬರು ಪ್ರವಾಸಿಗರ ಗುರುತು ಪತ್ತೆಯಾಗಿದ್ದು, ಇನ್ನೂ ಒಬ್ಬರ ಗುರುತು ಸಿಗಬೇಕಿದೆ.

ಜಮ್ಮು-ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (Tour Operators & Travel Agents) ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಈ ಕೆಳಕಂಡ ಸಹಾಯವಾಣಿಗೆ (Helpline) ನೀಡಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

ಸಹಾಯವಾಣಿ ಸಂಖ್ಯೆಗಳು: 080-43344334, 080-43344335, 080-43344336 ಹಾಗೂ 080-43344342

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...