ಕರ್ನಾಟಕ ರಾಜ್ಯಪಾಲರ ಮೊಮ್ಮಗನ ಮೇಲೆ ವರದಕ್ಷಿಣೆ ಕಿರುಕುಳ ಆರೋಪ

Date:

ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಮೊಮ್ಮಗ ದೇವೇಂದ್ರ ಗೆಹ್ಲೋಟ್ ಅವರ ಪತ್ನಿ ದಿವ್ಯಾ ಗೆಹ್ಲೋಟ್, ಪತಿ ವಿರುದ್ಧ ವರದಕ್ಷಿಣೆ ಕಿರುಕುಳ, ದೈಹಿಕ–ಮಾನಸಿಕ ಹಿಂಸೆ, ಕೊಲೆ ಯತ್ನ ಹಾಗೂ ನಾಲ್ಕು ವರ್ಷದ ಮಗಳ ಅಪಹರಣದ ಗಂಭೀರ ಆರೋಪಗಳನ್ನು ಹೊರಿಸಿರುವ ಘಟನೆ ಬೆಳಕಿಗೆ ಬಂದಿದೆ.

ದಿವ್ಯಾ ಅವರು ಮಧ್ಯ ಪ್ರದೇಶದ ರತ್ಲಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಅವರಿಗೆ ಸಲ್ಲಿಸಿರುವ ದೂರಿನಲ್ಲಿ, ತಮ್ಮ ಮಗಳನ್ನು ಉಜ್ಜಯಿನಿ ಜಿಲ್ಲೆಯ ನಾಗ್ಡಾದಲ್ಲಿ ಅತ್ತೆ-ಮಾವ ಬಲವಂತವಾಗಿ ಇರಿಸಿಕೊಂಡಿದ್ದಾರೆಂದು ಆರೋಪಿಸಿದ್ದಾರೆ. “ತಮ್ಮ 4 ವರ್ಷದ ಮಗುವನ್ನು ಸುರಕ್ಷಿತವಾಗಿ ಮರಳಿ ಪಡೆಯಲು ಕ್ರಮಕೈಗೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

ದಿವ್ಯಾ ದೂರಿನಲ್ಲಿ ಪತಿ ದೇವೇಂದ್ರ ಗೆಹ್ಲೋಟ್ (33), ಅಲೋಟ್‌ನ ಮಾಜಿ ಶಾಸಕ ಜಿತೇಂದ್ರ ಗೆಹ್ಲೋಟ್ (55), ಸೋದರ ಮಾವ ವಿಶಾಲ್ ಗೆಹ್ಲೋಟ್ (25), ಅಜ್ಜಿ ಅನಿತಾ ಗೆಹ್ಲೋಟ್ (60) ಇವರು 50 ಲಕ್ಷ ರೂ. ವರದಕ್ಷಿಣೆಗೆ ಒತ್ತಾಯಿಸಿ ಹಲವು ವರ್ಷಗಳಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮದುವೆಗೆ ಮುನ್ನ ಪತಿಯ ಮದ್ಯಪಾನ, ಮಾದಕ ವ್ಯಸನ ಹಾಗೂ ಅಕ್ರಮ ಸಂಬಂಧಗಳ ವಿಚಾರವನ್ನು ಮುಚ್ಚಿಡಲಾಗಿತ್ತು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2018ರ ಏಪ್ರಿಲ್ 29ರಂದು ತಾಲ್ (ಅಲೋಟ್) ನಲ್ಲಿ ಮುಖ್ಯಮಂತ್ರಿ ಕನ್ಯಾದಾನ ಯೋಜನೆಯಡಿ ಇವರ ವಿವಾಹ ನಡೆದಿತ್ತು. ಆಗಿನ ಕೇಂದ್ರ ಸಚಿವೆ ಹಾಗೂ ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಮದುವೆಯ ನಂತರ ಪತಿಯ ವ್ಯಸನ, ಅಸಭ್ಯ ವರ್ತನೆ ಮತ್ತು ದೈಹಿಕ ಹಿಂಸೆ ನಿತ್ಯವೂ ನಡೆಯುತ್ತಿತ್ತು ಎಂದು ದಿವ್ಯಾ ಹೇಳಿಕೊಂಡಿದ್ದಾರೆ. “ಹಣ ತರದಿದ್ದರೆ ನಿಂದನೆ, ಹೊಡೆತ… ಎಲ್ಲವು ಸಹಜವಾಗಿಬಿಟ್ಟಿತ್ತು” ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಸಂಚಾರ್ ಸಾಥಿ’ ಕಣ್ಗಾವಲು ಸನ್ನಾಹ, ವೇಷ ಬದಲಿಸಿ ಬಂದೀತು ಹುಷಾರ್!

ದಿವ್ಯಾ ಅವರು ಗರ್ಭಿಣಿಯಾಗಿದ್ದಾಗ 2021ರಲ್ಲಿ ಹಿಂಸೆ ಮತ್ತಷ್ಟು ತೀವ್ರಗೊಂಡಿತ್ತೆಂದು ಅವರು ಹೇಳಿದ್ದಾರೆ. ಆಹಾರವನ್ನೂ ನೀಡದೆ ಮಾನಸಿಕವಾಗಿ ಹಿಂಸೆ ನೀಡಲಾಗುತ್ತಿತ್ತು. ಮಗು ಜನಿಸಿದ ಬಳಿಕವೂ ಪರಿಸ್ಥಿತಿ ಹಾಗೆಯೇ ಮುಂದುವರಿದಿತ್ತು ಎಂದು ಆರೋಪಿಸಲಾಗಿದೆ.

ಈ ವರ್ಷ ಜನವರಿ 26ರ ರಾತ್ರಿ ಪತಿ ಪಾನಮತ್ತರಾಗಿ, ಹಣ ತರದಿದ್ದರೆ ಕೊಲ್ಲುವುದಾಗಿ ಬೆದರಿಸಿ, ಮೇಲ್ಛಾವಣಿಯಿಂದ ತಳ್ಳಿದ್ದಾರೆ ಎಂದು ದಿವ್ಯಾ ಆರೋಪಿಸಿದ್ದಾರೆ. ಕೆಳಗಿನ ಗ್ಯಾಲರಿಗೆ ಬಿದ್ದು ಅವರಿಗೆ ಬೆನ್ನು, ಭುಜ ಮತ್ತು ಸೊಂಟಕ್ಕೆ ಗಂಭೀರ ಗಾಯಗಳಾಗಿದ್ದರೂ, ರಾತ್ರಿಯಿಡೀ ಆಸ್ಪತ್ರೆಗೆ ಕರೆದೊಯ್ಯಲಿಲ್ಲ ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ. ಮರುದಿನ ನಾಗ್ಡಾದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವುದರಿಂದ ಇಂದೋರ್‌ನ ಬಾಂಬೆ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದ್ದರು. ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡದೇ, ತಂದೆಯೇ ಚಿಕಿತ್ಸೆ ವೆಚ್ಚ ಭರಿಸಬೇಕೆಂದು ಒತ್ತಡ ಹೇರಲಾಗಿದೆ ಎಂದು ಅವರು ಹೇಳಿದ್ದಾರೆ.

ರತ್ಲಂ ಪೊಲೀಸರು ಈ ಬಗ್ಗೆ ದೂರು ಸ್ವೀಕರಿಸಿದ್ದು, ಘಟನೆಯು ಉಜ್ಜಯಿನಿ ಜಿಲ್ಲೆಯಲ್ಲಿ ನಡೆದಿರುವ ಹಿನ್ನೆಲೆ, ಸಂಬಂಧಿತ ಅಧಿಕಾರಿಗಳಿಗೆ ದೂರನ್ನು ಕಳುಹಿಸಲಾಗಿದೆ.

ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಮಾಜಿ ಶಾಸಕ ಜಿತೇಂದ್ರ ಗೆಹ್ಲೋಟ್, “ಯಾರು ಬೇಕಾದರೂ ಆರೋಪ ಮಾಡಬಹುದು. ಎಲ್ಲ ಸಂಗತಿಗಳನ್ನು ನಾನು ಮಾಧ್ಯಮಗಳ ಮುಂದೆ ತಿಳಿಸುತ್ತೇನೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...