ಬಂಗಾಳ ದೀದಿಗೆ ಕರ್ನಾಟಕ ಹೈಕೋರ್ಟ್‌ ರಿಲೀಫ್!

Date:

‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ್ದ ಕಾರಣಕ್ಕಾಗಿ ದೇಶದ್ರೋಹ ಪ್ರಕರಣದಡಿ ಬಂಧಿತಳಾಗಿದ್ದ ಪಶ್ಚಿಮ ಬಂಗಾಳದ ಮೂಲದ ಮಹಿಳೆಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿದೆ. ಪೊಲೀಸರು ಕಾನೂನು ಜಾರಿ ಪ್ರಕ್ರಿಯೆಯಲ್ಲಿ ಲೋಪದೋಷ ಎಸಗಿದ್ದಾರೆ ಮತ್ತು ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿದ್ದಾರೆ ಎಂಬುದನ್ನು ಗಮನಿಸಿರುವ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ಮೂಲತಃ ಪಶ್ಚಿಮ ಬಂಗಾಳದ ನಂದಿಗ್ರಾಮ ನಿವಾಸಿ ಸರ್ಭಾನು ಖಾತೂನ್ ಅವರು ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ವಾಸಿಸುತ್ತಿದ್ದರು. ಅವರು ವಾಸವಿದ್ದ ಜಮೀನು ಎಲ್ಲಾರೆಡ್ಡಿ ಎಂಬುವವರಿಗೆ ಸೇರಿತ್ತು ಎನ್ನಲಾಗಿದೆ. ಹೀಗಾಗಿ, ಆ ಜಮೀನಿನಲ್ಲಿ ಅನಧಿಕೃತ ಮನೆಗಳನ್ನು ತೆರವುಗೊಳಿಸಲಾಗಿತ್ತು. ತೆರವು ಕಾರ್ಯಾಚರಣೆ ವೇಳೆ, ಸರ್ಭಾನು ಖಾತೂನ್ ಅವರು ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ್ದಾರೆಂದು ಆರೋಪಿಸಲಾಗಿತ್ತು. ಇದೇ ಆರೋಪದ ಮೇಲೆ ಅವರ ವಿರುದ್ಧ ಬಿ.ಎನ್‌.ಎಸ್ ಸೆಕ್ಷನ್ 152 (ರಾಷ್ಟ್ರದ್ರೋಹ), 196, 197(1) ಹಾಗೂ 353(1) ಅಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.

ಅವರು ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ಬಳಿಕ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಅರ್ಜಿಯನ್ನು ಆಲಿಸಿರುವ ಹೈಕೋರ್ಟ್‌, “ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋವನ್ನು ಗಮನಿಸಿದರೆ, ಅಲ್ಲಿ ಮಹಿಳೆಯನ್ನು ಅಡ್ಡಗಟ್ಟಿ, ಕಿರುಕುಳ ನೀಡಿ, ಒತ್ತಡ ಹೇರಿ ಬಲವಂತವಾಗಿ ಆ ಘೋಷಣೆ ಕೂಗುವಂತೆ ಪ್ರಚೋದಿಸಲಾಗಿದೆ. ಇದು ಸ್ವ-ಇಚ್ಛೆಯಿಂದ ಮಾಡಿದ ಕೃತ್ಯವಲ್ಲ. ಆದ್ದರಿಂದ, ಅವರ ವಿರುದ್ಧ ಬಲವಂತದ ಕ್ರಮ ಸಲ್ಲದು” ಎಂದು ಹೇಳಿದೆ.

ಅಲ್ಲದೆ, “ಪೊಲೀಸರು ಡಿಜಿಪಿ ನಿರ್ದೇಶನಗಳನ್ನು ಗಾಳಿಗೆ ತೂರಿ, ವಿಡಿಯೋದ ಅಸಲಿಯತ್ತನ್ನು ಪರಿಶೀಲಿಸದೆ, ನೇರವಾಗಿ ‘ಸುಮೊಟೊ’ ಪ್ರಕರಣ ದಾಖಲಿಸಿದ್ದಾರೆ. ವಿದ್ಯುನ್ಮಾನ ಸಾಕ್ಷ್ಯಕ್ಕೆ ಅಗತ್ಯವಾದ ’63 ಬಿಎಸ್‌ಎ’ ಪ್ರಮಾಣಪತ್ರವೂ ದಾಖಲೆಯಲ್ಲಿಲ್ಲ. ಬಂಧನದ ವೇಳೆ ಪಾಲಿಸಬೇಕಾದ ನಿಯಮಗಳನ್ನು (ಸೆಕ್ಷನ್ 35 ನೋಟಿಸ್) ಪಾಲಿಸಿಲ್ಲ. ಅಲ್ಲದೆ, ಸಂವಿಧಾನದ ವಿಧಿ 22ರ ಅನ್ವಯ ಆರೋಪಿಗೆ ಆಕೆಯ ಭಾಷೆಯಲ್ಲಿ ‘ಬಂಧನದ ಕಾರಣ’ಗಳನ್ನು ತಿಳಿಸಿಲ್ಲ. ಇದು ವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ” ಎಂದು ಹೇಳಿದೆ.

ಈ ಲೇಖನ ಓದಿದ್ದೀರಾ?: ಇರಾನ್ ಯುದ್ಧ: ಭಾರತ ಕಲಿಯಬೇಕಿರುವ ಪಾಠವೇನು?

“ಆರೋಪಿ ಮಹಿಳೆ ಭಾರತೀಯ ಪ್ರಜೆಯಾಗಿದ್ದು, ಅದೇ ವಿಡಿಯೋದಲ್ಲಿ ಆಕೆ ಮೂರು ಬಾರಿ ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿರುವುದು ದಾಖಲಾಗಿದೆ. ಇಲ್ಲಿ ಯಾವುದೇ ‘ಅಪರಾಧಿ ಮನಸ್ಸು’ ಕಂಡುಬರುತ್ತಿಲ್ಲ” ಎಂದು ಹೈಕೋರ್ಟ್‌ ಗಮನಿಸಿದೆ.

“ಪ್ರಕರಣವು ಗಂಭೀರವಾದದ್ದು ಎಂಬುದಕ್ಕಿಂತಲೂ, ಕಾನೂನು ಪ್ರಕ್ರಿಯೆಯಲ್ಲಿನ ಲೋಪಗಳು ಮತ್ತು ಪ್ರಚೋದನೆಯಿಂದ ನಡೆದ ಘಟನೆ ಎಂಬುದು ಸ್ಪಷ್ಟವಾಗಿ ಕಂಡುಬಂದಿದೆ. ಪ್ರಚೋದನೆ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳದೆ, ಕೇವಲ ಬಡ ಮಹಿಳೆಯನ್ನು ಗುರಿ ಮಾಡಿರುವುದು ಕಾನೂನಿನ ದುರ್ಬಳಕೆಯಾಗಿದೆ” ಎಂದಿರುವ ನ್ಯಾಯಾಲಯ, ಆರೋಪಿ ಮಹಿಳೆಗೆ ಜಾಮೀನು ಮಂಜೂರು ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...