ಕರ್ನಾಟಕ-ತಮಿಳುನಾಡು ಪೆನ್ನೈಯಾರ್ ನದಿ ವಿವಾದ: ನ್ಯಾಯಮಂಡಳಿ ರಚಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Date:

ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಮುಂದುವರಿದಿರುವ ಪೆನ್ನೈಯಾರ್ ನದಿ ನೀರಿನ ಹಂಚಿಕೆ ವಿವಾದವನ್ನು ಇತ್ಯರ್ಥಪಡಿಸಲು ಅಂತಾರಾಜ್ಯ ಜಲ ವಿವಾದ ನ್ಯಾಯಮಂಡಳಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೋಮವಾರ ಸೂಚಿಸಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ಪೀಠವು, ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ನ್ಯಾಯಮಂಡಳಿ ರಚಿಸಬೇಕೆಂದು ನಿರ್ದೇಶಿಸಿದೆ. ತಮಿಳುನಾಡು ಸಲ್ಲಿಸಿರುವ ದೂರನ್ನು ನ್ಯಾಯಮಂಡಳಿಯ ಮುಂದೆ ಪರಿಗಣನೆಗೆ ತೆಗೆದುಕೊಳ್ಳಬಹುದು ಎಂದು ಪೀಠ ಹೇಳಿದೆ

ಪೆನ್ನೈಯಾರ್ ನದಿಗೆ ಸಂಬಂಧಿಸಿದ ಅಣೆಕಟ್ಟುಗಳು ಹಾಗೂ ನೀರಿನ ತಿರುವು ರಚನೆಗಳ ವಿಚಾರವಾಗಿ ಕರ್ನಾಟಕ ಕೈಗೊಂಡ ಕ್ರಮಗಳಿಂದ ತಮಿಳುನಾಡಿನ ಹಿತಾಸಕ್ತಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ 2018ರಲ್ಲಿ ತಮಿಳುನಾಡು ಸರಕಾರವು ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ನದಿ ನೀರನ್ನು ತಮಿಳುನಾಡಿನ ಜನರಿಗೆ ಹಾನಿಯಾಗುವ ರೀತಿಯಲ್ಲಿ ಬಳಸುವ ಹಕ್ಕು ಕರ್ನಾಟಕಕ್ಕೆ ಇಲ್ಲ ಎಂದು ವಾದಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ |ಮುಂಬಯಿ TISS ವಿದ್ಯಾರ್ಥಿಗಳ ‘ಕ್ಯಾಂಪಸ್‌ ರಾಜಕೀಯ’ ದಮನ ಸಲ್ಲದು!

ಅಂತಾರಾಜ್ಯ ನದಿಗಳ ನೀರಿನ ಹರಿವು ರಾಷ್ಟ್ರೀಯ ಆಸ್ತಿಯಾಗಿದ್ದು, ಯಾವುದೇ ಒಂದು ರಾಜ್ಯವೂ ಅದರ ಮೇಲೆ ವಿಶೇಷ ಮಾಲೀಕತ್ವ ಹಕ್ಕು ಹೊಂದಲು ಸಾಧ್ಯವಿಲ್ಲ ಎಂದು ತಮಿಳುನಾಡು ನ್ಯಾಯಾಲಯದ ಗಮನಕ್ಕೆ ತಂದಿತ್ತು. 1892ರ ಒಪ್ಪಂದವು ಸಂಬಂಧಿತ ರಾಜ್ಯಗಳಿಗೆ ಮಾನ್ಯ ಹಾಗೂ ಬದ್ಧವಾಗಿದ್ದು, ನದಿಗೆ ನೇರವಾಗಿ ಅಥವಾ ಪರೋಕ್ಷವಾಗಿ ನೀರು ಒದಗಿಸುವ ಹೊಳೆಗಳು, ಉಪನದಿಗಳು ಸೇರಿದಂತೆ ಇತರ ಜಲಮಾರ್ಗಗಳನ್ನೂ ಅದರ ವ್ಯಾಪ್ತಿಗೆ ಒಳಪಡಿಸುತ್ತದೆ ಎಂದು ಹೇಳಿತ್ತು.

ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಲ್ಲಿ ಜಲಾನಯನ ಪ್ರದೇಶ ಹೊಂದಿರುವ ಪ್ರಮುಖ ಉಪನದಿ ಮಾರ್ಕಂಡೇಯ ನದಿಯನ್ನು ಒಪ್ಪಂದದ ವ್ಯಾಪ್ತಿಯಿಂದ ಹೊರಗಿಡಲು ಸಾಧ್ಯವಿಲ್ಲ. ಆದ್ದರಿಂದ ಮಾರ್ಕಂಡೇಯ ನದಿಯ ಹರಿವನ್ನು ತಡೆಯುವ ಯಾವುದೇ ಹೊಸ ನಿರ್ಮಾಣ ಕಾರ್ಯಗಳು 1892ರ ಒಪ್ಪಂದದ ನಿಯಂತ್ರಣಕ್ಕೆ ಒಳಪಡುತ್ತವೆ ಎಂದು ತಮಿಳುನಾಡು ವಾದಿಸಿತ್ತು.

ಮಾರ್ಕಂಡೇಯ ನದಿಗೆ ಅಡ್ಡಲಾಗಿ ತಿರುವು ರಚನೆಗಳು ಅಥವಾ ದೊಡ್ಡ ಅಣೆಕಟ್ಟುಗಳನ್ನು ನಿರ್ಮಿಸಲು ಕರ್ನಾಟಕಕ್ಕೆ ಸ್ವಾತಂತ್ರ್ಯ ಇದೆ ಎನ್ನುವ ನಿಲುವು ಅಸಂಗತ ಎಂದು ತಮಿಳುನಾಡು ಸುಪ್ರೀಂ ಕೋರ್ಟ್ ಮುಂದೆ ಅಭಿಪ್ರಾಯಪಟ್ಟಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...