ಕಾಸರಗೋಡು | ದೀಪಾವಳಿಗೂ ಮುನ್ನವೇ ಪಟಾಕಿ ದುರಂತ; 154 ಮಂದಿಗೆ ಗಾಯ

Date:

ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡ ನಡೆದಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ಗಾಯಗೊಂಡವರಲ್ಲಿ 10 ಮಂದಿ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಕಾಸರಗೋಡಿನ ನೀಲೇಶ್ವರದಲ್ಲಿ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವ ನಡೆಯುತ್ತಿತ್ತು. ಈ ವೇಳೆ, ಪಟಾಕಿ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿದೆ. ಪಾಟಾಕಿ ಅಂಗಡಿ ಸ್ಪೋಟಗೊಂಡಿದೆ. ಘಟನೆಯಲ್ಲಿ 150 ಮಂದಿಗೆ ಗಾಯವಾಗಿದೆ. ಅವರಲ್ಲಿ 10 ಮಂದಿ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಹಾಗೂ ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವಘಡಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಕಾಸರಗೋಡು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವೀರರ್‌ ಕಾವು ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಾಗಾರವಿದೆ. ಅಲ್ಲಿನ ಪಾಟಾಕಿಗಳಿಗೆ ಬೆಂಕಿ ತಗುಲಿ ಅವಘಡ ಸಂಭವಿಸಿದೆ ಎಂಬ ಅನುಮಾನವಿದೆ. ಪಟಾಕಿ ಸಂಗ್ರಹಾಗಾರದಲ್ಲಿ ಸುರಕ್ಷತಾ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಂಡಿಲ್ಲ ಎಂಬ ಆರೋಪಗಳೂ ಇವೆ ಎಂದು ಪೊಲೀಸರು ತಿಳಿಸಿದ್ದಾರೆ. ಪಟಾಕಿ ಸಂಗ್ರಹಿಸಲು ಸಗ್ರಹಾಗಾರದವರು ಯಾವುದೇ ಅನುಮತಿ ತೆಗೆದುಕೊಂಡಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿರುವ ಪೊಲೀಸರು ದೇವಸ್ಥಾನದ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...