ಸಮಸ್ಯೆ ಪರಿಹರಿಸದಿದ್ದರೆ ಕಾಶ್ಮೀರಕ್ಕೂ ಗಾಜಾದ ಪರಿಸ್ಥಿತಿಯೇ ಬರಲಿದೆ: ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

Date:

ಭಾರತ ಮತ್ತು ಪಾಕಿಸ್ತಾನಗಳು ಕಣಿವೆ ಪ್ರದೇಶದ ಸಮಸ್ಯೆಯನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳದಿದ್ದರೆ ಕಾಶ್ಮೀರವು ಮುಂದಿನ ದಿನಗಳಲ್ಲಿ ಗಾಜಾ ಮತ್ತು ಪ್ಯಾಲೆಸ್ತೀನ್‌ನಲ್ಲಿ ನಡೆಯುತ್ತಿರುವ ಸಮಸ್ಯೆಯನ್ನೇ ಎದುರಿಸಬೇಕಾಗುತ್ತದೆ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, “ನಾವು ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳದಿದ್ದರೆ, ಇಸ್ರೇಲ್‌ನಿಂದ ಬಾಂಬ್‌ ದಾಳಿಗೆ ಒಳಗಾಗುತ್ತಿರುವ ಗಾಜಾ ಮತ್ತು ಪ್ಯಾಲೆಸ್ತೀನ್ ನಂತೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ” ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಫಾರೂಕ್ ಅಬ್ದುಲ್ಲಾ ಅವರು ಪೂಂಚ್‌ ಜಿಲ್ಲೆಯಲ್ಲಿ ಐವರು ಸೈನಿಕರು ಉಗ್ರಗಾಮಿಗಳಿಂದ ಸಾವಿಗೀಡಾದ ನಂತರ ಮೂವರು ನಾಗರಿಕರು ಮೃತಪಟ್ಟ ಬಗ್ಗೆ ಆಘಾತ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾವು ನಮ್ಮ ಸ್ನೇಹಿತರನ್ನು ಬದಲಿಸಬಹುದು, ಆದರೆ ನಮ್ಮ ನೆರೆಹೊರೆಯವರನ್ನು ಬದಲಿಸಲಾಗದು ಎಂದು ಕಾಶ್ಮೀರದ ಬಗೆಗಿನ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಮಾತನ್ನು ಫಾರೂಕ್ ಅಬ್ದುಲ್ಲಾ ಉಲ್ಲೇಖಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

“ನಾವು ನಮ್ಮ ನೆರೆಹೊರೆಯವರೊಂದಿಗೆ ಸ್ನೇಹವನ್ನು ಉಳಿಸಿಕೊಳ್ಳಬೇಕಾದರೆ, ನಮ್ಮ ಮಾತುಕತೆ ಮುಂದುವರಿಯಬೇಕು. ಪ್ರಧಾನಿ ನರೇಂದ್ರ ಮೋದಿ ಕೂಡ ಯುದ್ಧ ನಮ್ಮ ಆಯ್ಕೆಯಲ್ಲ ಮಾತುಕತೆಯ ಮೂಲಕ ವಿವಾದ ಇತ್ಯರ್ಥ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದರು” ಎಂದು ಫಾರೂಕ್ ತಿಳಿಸಿದರು.

ನವಾಜ್‌ ಷರೀಫ್ ತಾವು ಪ್ರಧಾನಿಯಾಗಲಿದ್ದು, ಭಾರತದೊಂದಿಗೆ ಮಾತುಕತೆಗೆ ಸಿದ್ಧವಿರುವುದಾಗಿ ಹೇಳಿದ್ದಾರೆ. ಆದರೆ ಭಾರತ ಏಕೆ ಮಾತುಕತೆಗೆ ಸಿದ್ಧವಿಲ್ಲ ಎಂದು ಪ್ರಶ್ನಿಸಿದ ಫಾರೂಕ್ ಅವರು, ನಾವು ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳದಿದ್ದರೆ, ಇಸ್ರೇಲ್‌ನಿಂದ ಬಾಂಬ್‌ ದಾಳಿಗೆ ಒಳಗಾಗುತ್ತಿರುವ ಗಾಜಾ ಮತ್ತು ಪ್ಯಾಲೆಸ್ತೀನ್‌ನಂತೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಪುನರುಚ್ಚರಿಸಿದರು.

ಏತನ್ಮಧ್ಯೆ, ಭೂಸೇನಾ ಮುಖ್ಯಸ್ಥ ಮನೋಜ್ ಪಾಂಡೆ ಸೋಮವಾರ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಮತ್ತು ಪೂಂಚ್ ಜಿಲ್ಲೆಗಳಿಗೆ ಭೇಟಿ ನೀಡಿದ್ದು, ಭಯೋತ್ಪಾದಕರ ಅಡಗುತಾಣಗಳಾಗಿ ಬಳಸುತ್ತಿರುವ ಗುಹೆಗಳನ್ನು ಕೆಡವಲು ಸ್ಥಳೀಯ ಸೈನಿಕರಿಗೆ ಆದೇಶಿಸಿದ್ದಾರೆ. ಅಲ್ಲದೆ ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ರಜೌರಿ-ಪೂಂಚ್ ಸೆಕ್ಟರ್‌ಗೆ ಭೇಟಿ ನೀಡಿ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಕರ್ತವ್ಯ ನಿರತ ಸೈನಿಕರೊಂದಿಗೆ ಸಂವಾದ ನಡೆಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...