5 ವರ್ಷ ಜೈಲಿನಲ್ಲಿದ್ದು ಬಿಡುಗಡೆಯಾದ ಕಾಶ್ಮೀರಿ ಪತ್ರಕರ್ತ, ಮತ್ತೆ ಬಂಧನ

Date:

ಕಾಶ್ಮೀರಿ ಪತ್ರಕರ್ತ ಆಸಿಫ್ ಸುಲ್ತಾನ್ ಅವರು ಐದು ವರ್ಷ ಜೈಲಿನಲ್ಲಿದ್ದು, ಮೊನ್ನೆಯಷ್ಟೇ ಬಿಡುಗಡೆಯಾಗಿದ್ದಾರೆ. ಆದರೆ, ಬಿಡುಗಡೆಯಾದ ಎರಡು ದಿನಗಳ ಬಳಿಕ, ಮತ್ತೊಂದು ಪ್ರಕರಣದಲ್ಲಿ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.

ಮಂಗಳವಾರ ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲಾ ಕಾರಾಗೃಹದಿಂದ ಅವರು ಬಿಡುಗಡೆಯಾಗಿದ್ದರು. ಗುರುವಾರ, ಕಾಶ್ಮೀರದಲ್ಲಿದ್ದ ತಮ್ಮ ಮನೆಗೆ ತೆರಳಿದ್ದರು. ಆದರೆ, ಗುರವಾರ ತಡರಾತ್ರಿ ಸುಲ್ತಾನ್‌ ಅವರನ್ನು ಮತ್ತೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಲ್ತಾನ್‌ ಅವರು ಅವರು ಸ್ಥಳೀಯ ನಿಯತಕಾಲಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. 2018ರ ಸೆಪ್ಟೆಂಬರ್‌ನಲ್ಲಿ ಅವರನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ಒಂದರಲ್ಲಿ ಬಂಧಿಸಲಾಗಿತ್ತು. ಅವರು, ನಿಷೇಧಿತ ಉಗ್ರಗಾಮಿ ಗುಂಪಿಗೆ ಬೆಂಬಲ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರು ಯಾವುದೇ ಉಗ್ರಗಾಮಿ ಗುಂಪಿನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬುದನ್ನು ಸಾಬೀತು ಮಾಡುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾದ ಕಾರಣ, 2022ರ ಏಪ್ರಿಲ್‌ನಲ್ಲಿ ಆವರಿಗೆ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಜಾಮೀನು ನೀಡಿತ್ತು.

ಈ ಸುದ್ದಿ ಓದಿದ್ದೀರಾ?: ನ್ಯೂಸ್‌ ಚಾನೆಲ್‌ಗಳಲ್ಲಿ ಕೋಮು ದ್ವೇಷ ಪ್ರಸಾರ: ಟೈಮ್ಸ್‌ ನೌ, ನ್ಯೂಸ್‌18ಗೆ ದಂಡ; ಆಜ್ ತಕ್‌ಗೆ ಎಚ್ಚರಿಕೆ

ಆದಾಗ್ಯೂ, ಕೆಲ ದಿನಗಳ ನಂತರ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯಿದೆ (ಪಿಎಸ್‌ಎ) ಅಡಿಯಲ್ಲಿ ಬಂಧಿಸಲಾಗಿತ್ತು. ಸಾರ್ವಜನಿಕ ಸುವ್ಯವಸ್ಥೆಗೆ ಯಾವುದೇ ರೀತಿಯಲ್ಲಿ ಅಡ್ಡಿಯುಂಟು ಮಾಡುವ ವ್ಯಕ್ತಿಗೆ ಕಾಯ್ದೆಯಡಿ 1 ವರ್ಷದವರೆಗೆ ಹಾಗೂ ರಾಜ್ಯದ ಭದ್ರತೆಗೆ ಧಕ್ಕೆಯುಂಟು ಮಾಡುವ ವ್ಯಕ್ತಿಗೆ 2 ವರ್ಷದವರೆಗೆ ಆತ್ಮಡಳಿತಾತ್ಮಕ ಬಂಧನ ವಿಧಿಸಲು ಅವಕಾಶವಿದೆ. ಹೀಗಾಗಿ, ಆ ಕಾಯ್ದೆಯಡಿ ಸುಲ್ತಾನ್ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು.

2018ರ ಸೆಪ್ಟೆಂಬರ್‌ನಿಂದ ಈವರೆಗೆ ಜೈಲಿನಲ್ಲಿದ್ದ ಸುಲ್ತಾನ್‌ ಅವರು ಮಂಗಳವಾರ ಬಿಡುಗಡೆಯಾಗಿದ್ದರು. ಇದೀಗ, ಮತ್ತೊಂದು ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...