ಅಸ್ಸಾಂ ಪ್ರವಾಹ: 13 ಜಿಲ್ಲೆಗಳ 1 ಲಕ್ಷ ಜನರು ತತ್ತರ

Date:

ಅಸ್ಸಾಂ ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಉಂಟಾಗಿರುವ ಪ್ರವಾಹದಿಂದ 1 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದು, ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಸಂಪೂರ್ಣ ಜಲಾವೃತವಾಗಿದೆ.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯ ಇತ್ತೀಚಿನ ವರದಿಗಳನ್ನು ಬಿಡುಗಡೆ ಮಾಡಿದೆ. ವರದಿಯನ್ವಯ ಇಂದಿನವರೆಗೆ, 13 ಜಿಲ್ಲೆಗಳ 371 ಗ್ರಾಮಗಳಲ್ಲಿ ಒಟ್ಟು 98,840 ಜನರು ಪ್ರವಾಹದಿಂದ ತತ್ತರಿಸುತ್ತಿದ್ದಾರೆ. ಆದಾಗ್ಯೂ, ಯಾವುದೇ ಹೊಸ ಸಾವುನೋವುಗಳು ಉಂಟಾಗಿಲ್ಲ. ಈ ವರ್ಷದ ಸಾವಿನ ಸಂಖ್ಯೆ 7 ರಷ್ಟಿದೆ ಎಂದು ತಿಳಿಸಿದೆ.

ದಿಖೌ ಮತ್ತು ಬ್ರಹ್ಮಪುತ್ರ ನದಿಗಳು ಪ್ರಸ್ತುತ ಅಸ್ಸಾಂನ ಹಲವು ಸ್ಥಳಗಳಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ದಿಖೌ ನದಿಯು ಶಿವಸಾಗರದಲ್ಲಿ ಅಪಾಯದ ಮಟ್ಟಕ್ಕಿಂತ ಹೆಚ್ಚಾಗಿ ಹರಿಯುತ್ತಿದ್ದರೆ, ಬ್ರಹ್ಮಪುತ್ರ ಧುಬ್ರಿ, ತೇಜ್‌ಪುರ ಮತ್ತು ನೇಮತಿಘಾಟ್‌ನಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ವಿಪಕ್ಷಗಳ ಒಗ್ಗಟ್ಟಿನ ಸಭೆ : ಯುಪಿಎ ಹೆಸರು ಬದಲಾವಣೆ ಸಾಧ್ಯತೆ

ಏತನ್ಮಧ್ಯೆ, ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಕಾಜಿರಂಗ ರಾಷ್ಟ್ರೀಯ ಉದ್ಯಾನವನ (ಕೆಎನ್‌ಪಿ) ಅರಣ್ಯ ವ್ಯಾಪ್ತಿಯ ಕೆಲವು ಭಾಗಗಳು ಜಲಾವೃತಗೊಂಡಿವೆ. ಜನಪ್ರಿಯ ಪ್ರವಾಸಿ ತಾಣವಾದ ಕೆಎನ್‌ಪಿಯ ಅಗೊರಟೋಲಿ ಅರಣ್ಯ ಶ್ರೇಣಿಯ ಶೇ 90 ರಷ್ಟು ಪ್ರವಾಹದಿಂದಾಗಿ ಮುಳುಗಿದೆ ಎಂದು ಅರಣ್ಯ ಅಧಿಕಾರಿ ತಿಳಿಸಿದ್ದಾರೆ.

“ಕಳೆದೆರಡು ದಿನಗಳಿಂದ ಮಳೆಯಿಂದಾಗಿ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಅರವತ್ತೆಂಟು ಅರಣ್ಯ ಶಿಬಿರಗಳು ಜಲಾವೃತವಾಗಿವೆ. ಪ್ರವಾಹದ ನೀರು ಕೆಎನ್‌ಪಿಗೆ ಪ್ರವೇಶಿಸಿ ಉದ್ಯಾನದ ಹೆಚ್ಚಿನ ಅರಣ್ಯ ಶಿಬಿರಗಳು ಜಲಾವೃತವಾಗಿವೆ. ಖೋರಾ ವ್ಯಾಪ್ತಿಯಲ್ಲಿ ಕನಿಷ್ಠ 15 ಅರಣ್ಯ ಶಿಬಿರಗಳು ಜಲಾವೃತವಾಗಿವೆ. ಬಗೋರಿ ವ್ಯಾಪ್ತಿಯಲ್ಲಿ ಒಂಬತ್ತು ಶಿಬಿರಗಳು ಮತ್ತು ಬುರಾಫರ್‌ನಲ್ಲಿ ಆರು ಅರಣ್ಯ ಶಿಬಿರಗಳು ಜಲಾವೃತಗೊಂಡಿವೆ. ಇಲ್ಲಿಯವರೆಗೆ ಯಾವುದೇ ಪ್ರಾಣಿಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಎರಡು ಹಂದಿ ಹಾಗೂ ಎರಡು ಜಿಂಕೆಗಳನ್ನು ಇಂದು ರಕ್ಷಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ” ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಹದಗೆಟ್ಟಿದ್ದರಿಂದ ಶನಿವಾರದಿಂದ ಕಾಜಿರಂಗದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಸದ್ಯ ಪರಿಸ್ಥಿತಿ ಗಂಭೀರವಾಗಿಲ್ಲ. ಆದರೆ ನಾವು ವನ್ಯಜೀವಿಗಳ ಸುರಕ್ಷತೆಯ ಮೇಲೆ ತೀವ್ರ ನಿಗಾ ಇರಿಸಿದ್ದೇವೆ” ಎಂದು ಅಧಿಕಾರಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...