ಹಿಮಪಾತ | ಕೇದಾರನಾಥ ಯಾತ್ರೆ ಸ್ಥಗಿತ; ಆರೆಂಜ್‌ ಅಲರ್ಟ್

Date:

  • ಯಾತ್ರೆ ಪ್ರದೇಶದಲ್ಲಿ ಇನ್ನು 2-3 ದಿನ ಹಿಮಪಾತ
  • ಹಿಮಪಾತ ಹಿನ್ನೆಲೆಯಲ್ಲಿ ಯಾತ್ರಿಕರ ನೋಂದಣಿ ಸ್ಥಗಿತ

ಭಾರೀ ಹಿಮಪಾತದ ಹಿನ್ನೆಲೆ ಕೇದಾರನಾಥ ಯಾತ್ರೆ ಬುಧವಾರ (ಮೇ 3) ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೇದಾರನಾಥ ದೇಗುಲ ಪ್ರದೇಶದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಯಾತ್ರೆ ರದ್ದುಗೊಳಿಸಲಾಗಿದೆ. ಇಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ (ಮೇ 4) ಹೇಳಿದರು.

ಕೇದಾರನಾಥ ಯಾತ್ರೆ ಸ್ಥಳದಲ್ಲಿ ಕಳೆದ ಎರಡು ದಿನಗಳಿಂದ ಹಿಮಪಾತ ಉಂಟಾಗುತ್ತಿದೆ. ಇದರಿಂದ ಚಳಿ ಹೆಚ್ಚಾಗಿದ್ದು ದೇಗುಲಕ್ಕೆ ಬಂದವರಿಗೂ ಅನೇಕ ಸಮಸ್ಯೆಗಳು ಉಂಟಾಗಿವೆ. ಹಿಮಪಾತ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಉಳಿದುಕೊಳ್ಳುವಂತೆ ಯಾತ್ರಾರ್ಥಿಗಳಿಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಏಪ್ರಿಲ್ 30 ರವರೆಗೆ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಹಿಮಪಾತ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರಿಕರ ನೋಂದಣಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ರುದ್ರಪ್ರಯಾಗದ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮಯೂರ್ ದೀಕ್ಷಿತ್ ತಿಳಿಸಿದ್ದಾರೆ.

ರಿಷಿಕೇಶದಲ್ಲಿರುವ ಪ್ರಯಾಣಿಕರ ನೋಂದಣಿ ಕೇಂದ್ರದಲ್ಲಿ ಬದರಿನಾಥ, ಗಂಗೋತ್ರಿ ಮತ್ತು ಯಮುನೋತ್ರಿ ಧಾಮಕ್ಕೆ ಮಾತ್ರ ಯಾತ್ರೆಗೆ ನೋಂದಣಿ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

“ಭೈರವ ಅಥವಾ ಕುಬೇರ ಹಸರಿನ ಹಿಮನದಿಯ ಒಂದು ಭಾಗ ಒಡೆದು ಹಿಮಾಲಯದ ದೇಗುಲದ ಕೆಳಗೆ ಸುಮಾರು 5 ಕಿ.ಮೀ ವರೆಗೆ ಜಾರಿದೆ” ಎಂದು ರುದ್ರಪ್ರಯಾಗದ ಜಿಲ್ಲಾ ವಿಪತ್ತು ನಿರ್ವಹಣೆ ಅಧಿಕಾರಿ ನಂದನ್‌ ಸಿಂಗ್‌ ರಾಜ್‌ವಾರ್‌ ಹೇಳಿದರು.

“ಯಾತ್ರೆ ಸ್ಥಳದಲ್ಲಿ ನಾಲ್ಕು ನೇಪಾಳಿ ಯಾತ್ರಿಕರು ಸಿಲುಕಿಕೊಂಡಿದ್ದರು. ಅವರನ್ನು ರಾಜ್ಯ ವಿಪತ್ತು ನಿರ್ವಹಣಾ ದಳದ (ಎಸ್‌ಡಿಆರ್‌ಎಫ್‌) ಸಿಬ್ಬಂದಿ ರಕ್ಷಿಸಿದ್ದಾರೆ” ಎಂದು ದಳದ ಅಧಿಕಾರಿ ಸಂತೋಷ್‌ ರಾವತ್‌ ತಿಳಿಸಿದರು.

ನೇಪಾಳಿ ಯಾತ್ರಿಕರು ಲಿಂಚೋಳಿಯಿಂದ ಕೇದಾರನಾಥಕ್ಕೆ ತೆರಳುತ್ತಿದ್ದರು ಎಂದು ಸಂತೋಷ್‌ ಹೇಳಿದರು.

ಈ ಸುದ್ದಿ ಓದಿದ್ದೀರಾ? ‘ದಿ ಕೇರಳ ಸ್ಟೋರಿ’ ಬಿಡುಗಡೆಗೆ ತಡೆ ಕೋರಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಕೇದಾರನಾಥ ಯಾತ್ರೆ ಸಂದರ್ಭ ಮಂಗಳವಾರ (ಮೇ 2) ಭಾರೀ ಹಿಮಪಾತ ಉಂಟಾಗಿತ್ತು. ಯಾತ್ರಿಗಳನ್ನು ರಿಷಿಕೇಶ, ಶ್ರೀನಗರ, ಫಟಾ ಮತ್ತು ಸೋನ್‌ಪ್ರಯಾಗದಲ್ಲಿ ತಂಗುವಂತೆ ಸೂಚಿಸಲಾಗಿತ್ತು.

ಮುಂದಿನ 2-3 ದಿನಗಳ ಕಾಲ ಹಿಮಾಲಯದ ಎತ್ತರದ ಪ್ರದೇಶಗಳಲ್ಲಿ ಮಳೆ ಮತ್ತು ಹಿಮಪಾತ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...