ನನ್ನನ್ನು ಅವಮಾನಿಸಿದ್ದೀರಿ, ನಾನು ಹೋರಾಟ ಮುಂದುವರೆಸುತ್ತೇನೆ: ಅನುರಾಗ್ ಠಾಕೂರ್ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

Date:

ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಯುವ ಸಂದರ್ಭದಲ್ಲಿ ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಅವರು ರಾಹುಲ್‌ ಗಾಂಧಿ ಅವರನ್ನು ನಿಂದನೆ ಮಾಡಿದ್ದು ಸದನದಲ್ಲಿ ವಾಗ್ವಾದಕ್ಕೆ ಕಾರಣವಾಯಿತು.

ಅನುರಾಗ್‌ ಠಾಕೂರ್‌ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಮಾತನಾಡಿದ ರಾಹುಲ್ ಗಾಂಧಿ, “ನಿಮಗೆ ಬೇಕಾದಷ್ಟು ನನ್ನನ್ನು ಅವಮಾನಿಸಿದ್ದೀರಿ, ಪ್ರತಿದಿನ ಮಾಡುತ್ತಿದ್ದೀರಿ. ಯಾರು ಆದಿವಾಸಿ, ದಲಿತ ಹಾಗೂ ಹಿಂದುಳಿದವರ ಬಗ್ಗೆ ಮಾತನಾಡುತ್ತಾರೋ ಅವರನ್ನು ಅವಮಾನಿಸಲಾಗುತ್ತಿದೆ. ನಾನು ಅವಮಾನಗಳನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ಅನುರಾಗ್‌ ಠಾಕೂರ್‌ ನನ್ನನ್ನು ನಿಂದಿಸಿ, ಅವಮಾನಿಸಿದ್ದಾರೆ. ಅವರಿಂದ ಯಾವುದೇ ಕ್ಷಮೆ ನನಗೆ ಬೇಕಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದೇಶದಲ್ಲಿ ಎಷ್ಟು ಹಿಂದುಳಿದವರು, ದಲಿತರು ಹಾಗೂ ಬುಡಕಟ್ಟು ಸಮುದಾಯದವರಿದ್ದಾರೊ ಎಂಬುದರ ಬಗ್ಗೆ ಯಾರಿಗೂ ತಿಳಿದಿಲ್ಲ. ಜನಸಂಖ್ಯೆಯ ಬಗ್ಗೆ ದೊಡ್ಡ ದೊಡ್ಡ ಯೋಜನೆ ರೂಪಿಸುವವರಿಗೆ  ಶೋಷಿತರ ಸಂಖ್ಯೆಯ ಬಗ್ಗೆ ತಿಳಿದಿಲ್ಲ. ಬಿಜೆಪಿ ಸರ್ಕಾರಕ್ಕೆ ಜಾತಿ ಗಣತಿಯ ಅಂಕಿಅಂಶಗಳ ಬಗ್ಗೆ ತಿಳಿದಿಲ್ಲ. ಜನಸಂಖ್ಯೆಯಲ್ಲಿ ವಿವಿಧ ಜಾತಿ ಗುಂಪುಗಳ ಬಗ್ಗೆ ತಿಳಿದುಕೊಳ್ಳಲು ನಾವು ಸಂಸತ್ತಿನಲ್ಲಿ ಜಾತಿ ಗಣತಿಯ ಮಸೂದೆಯನ್ನು ಮಂಡಿಸುತ್ತೇವೆ. ಒಮ್ಮೆ ಜಾತಿ ಗಣತಿ ಪೂರ್ಣಗೊಂಡ ನಂತರ ದೇಶ ಬದಲಾಗುತ್ತದೆ” ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಂದಾಣಿಕೆ ರಾಜಕಾರಣ ಮತ್ತು ಪಾದಯಾತ್ರೆ ಪಾಲಿಟಿಕ್ಸ್

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕೂಡ ಧ್ವನಿಗೂಡಿಸಿ, “ನೀವು ಯಾರೊಬ್ಬರ ಜಾತಿಯನ್ನು ಹೇಗೆ ಕೇಳುತ್ತೀರಿ? ನೀವು ಯಾರ ಜಾತಿಯನ್ನು ಕೇಳಲು ಸಾಧ್ಯವಿಲ್ಲ” ಎಂದು ಪ್ರಶ್ನಿಸಿದರು.

ಜಾತಿ ಗೊತ್ತಿಲ್ಲದವರು ಜಾತಿ ಗಣತಿಯ ಬಗ್ಗೆ ಮಾತನಾಡುತ್ತಾರೆ. ಈ ಸದನದಲ್ಲಿಯೇ ಮಾಜಿ ಪ್ರಧಾನಿ ಆರ್‌ಜಿ -1 (ರಾಜೀವ್‌ ಗಾಂಧಿ) ಅವರು ಒಬಿಸಿಗಳಿಗೆ ಮೀಸಲಾತಿಯನ್ನು ವಿರೋಧಿಸಿದ್ದರು ಎಂಬುದನ್ನು ಸ್ಪೀಕರ್‌ಗೆ ನೆನಪಿಸಲು ಬಯಸುತ್ತೇನೆ ಎಂದು ಬಿಜೆಪಿ ಸಂಸದ ಅನುರಾಗ್ ಠಾಕೂರ್ ರಾಹುಲ್ ಗಾಂಧಿ ಬಗ್ಗೆ ಪರೋಕ್ಷವಾಗಿ ಹೇಳಿದ್ದು, ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...