ಕೇರಳ| ಪ್ಯಾಲೆಸ್ತೀನ್ ಪರ ಪೋಸ್ಟರ್‌ ಹರಿದ ಆರೋಪ; ಇಬ್ಬರು ಆಸ್ಟ್ರೇಲಿಯಾದ ಮಹಿಳೆಯರ ಮೇಲೆ ಪ್ರಕರಣ

Date:

ಜಮಾತ್-ಎ-ಇಸ್ಲಾಮ್‌ನ ವಿದ್ಯಾರ್ಥಿ ವಿಭಾಗವಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ (ಎಸ್‌ಐಒ) ಹಾಕಿದ್ದ ಪ್ಯಾಲೆಸ್ತೀನ್ ಪರ ಪೋಸ್ಟರ್‌ಗಳನ್ನು ಹರಿದ ಆರೋಪದ ಮೇಲೆ ಇಬ್ಬರು ಆಸ್ಟ್ರೇಲಿಯಾದ ಮಹಿಳಾ ಪ್ರವಾಸಿಗರ ವಿರುದ್ಧ ಕೊಚ್ಚಿ ನಗರ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.

ಫೋರ್ಟ್ ಕೊಚ್ಚಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಆರೋಪಿಗಳ ಹೆಸರನ್ನು ಉಲ್ಲೇಖಿಸಿಲ್ಲ. ಆದರೆ ಐಪಿಸಿ ಸೆಕ್ಷನ್ 153 ಅಡಿಯಲ್ಲಿ (ಗಲಭೆಯಾಗಲಿ ಅಥವಾ ಗಲಭೆ ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಪ್ರಕರಣ ದಾಖಲಿಸಲಾಗಿದೆ. ಜಾಮೀನು ಪಡೆದ ಬಳಿಕ ಈ ಇಬ್ಬರು ಆಸ್ಟ್ರೇಲಿಯಾದ ಮಹಿಳೆಯರು ಠಾಣೆಯಿಂದ ಬಿಡುಗಡೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರ ಪ್ರಕಾರ, ಪ್ರವಾಸಿಗರು ಸೋಮವಾರ ರಾತ್ರಿ ಫೋರ್ಟ್ ಕೊಚ್ಚಿ ಬೋಟ್ ಜೆಟ್ಟಿ ಬಳಿ ಎಸ್‌ಐಒ ನಿರ್ಮಿಸಿದ್ದ ಪೋಸ್ಟರ್ ಅನ್ನು ಹರಿದು ಹಾಕಿದ್ದಾರೆ. ಕೆಲ ಸ್ಥಳೀಯ ಯುವಕರು ಮಹಿಳೆಯರನ್ನು ಪ್ರಶ್ನಿಸಿದ್ದು, ಎರಡು ಕಡೆಯವರ ನಡುವೆ ತೀವ್ರ ವಾಗ್ವಾದ ನಡೆದಿದೆ.

ಇದನ್ನು ಓದಿದ್ದೀರಾ?  ಬೆಂಗಳೂರು | ಪ್ಯಾಲೆಸ್ತೀನ್ ಸ್ವಾತಂತ್ರ್ಯಕ್ಕಾಗಿ ಫ್ರೀಡಂ ಪಾರ್ಕ್‌ನಲ್ಲಿ ಮೊಳಗಿದ ಘೋಷ

ಮಂಗಳವಾರ, ಎಸ್‌ಐಒ ಪ್ರದೇಶದ ನಾಯಕ ಕೆ ಎಸ್ ಅಜೀಂ ಅವರು ಮಹಿಳೆಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು ಎಸ್‌ಐಒ ಕಾರ್ಯಕರ್ತರು ಮಹಿಳೆಯೊಬ್ಬರನ್ನು ಫೋರ್ಟ್ ಕೊಚ್ಚಿ ಬಳಿಯ ಹೋಂಸ್ಟೇಯಲ್ಲಿ ಇರುವುದಾಗಿ ಪತ್ತೆ ಹಚ್ಚಿದ್ದಾರೆ.

ದೂರಿನ ಬಗ್ಗೆ ಕ್ರಮ ಕೈಗೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದಾರೆಂದು ಆರೋಪಿಸಿ ಎಸ್‌ಐಒ ಕಾರ್ಯಕರ್ತರು ಮಂಗಳವಾರ ರಾತ್ರಿ ಪೊಲೀಸ್ ಠಾಣೆ ಮುಂಭಾಗ ಜಮಾಯಿಸಿದ್ದು ಪೊಲೀಸರು ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು. ಅದಾದ ಬಳಿಕ ಪ್ರಕರಣ ದಾಖಲಿಸಲಾಗಿದೆ.

“ಹೊಸ ವರ್ಷದ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಪರ ಪೋಸ್ಟರ್ ಗಳನ್ನು ಹಾಕಲಾಗಿತ್ತು. ಪೋಸ್ಟರ್‌ಗಳನ್ನು ಹಾಕಲು ಯಾವುದೇ ಅನುಮತಿ ಇಲ್ಲ. ಆದರೆ ಪೋಸ್ಟರ್‌ಗಳನ್ನು ಸಾರ್ವಜನಿಕ ಸ್ಥಳಗಳಿಂದ ತೆಗೆದುಹಾಕುವ ಕಾರ್ಯ ಸ್ಥಳೀಯ ನಾಗರಿಕ ಸಂಸ್ಥೆಗೆ ಬಿಟ್ಟಿರುವುದು” ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...