ಕೇರಳ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ: ಐವರು ವೈದ್ಯಕೀಯ ವಿದ್ಯಾರ್ಥಿಗಳ ಸಾವು

Date:

ಸಾರಿಗೆ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ.

ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್, ಮಹಮ್ಮದ್ ಅಬ್ದುಲ್ ಜಬ್ಬರ್ ಮೃತ ವಿದ್ಯಾರ್ಥಿಗಳು. ಇವರು ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್ ಓದುತ್ತಿದ್ದರು.

ಕರ್ಲಕೋಡ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ 10 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ. ಭೀಕರ ಅಪಘಾತದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಹಾಗೂ ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಳಿಗೆ ಬಂದ ಸರ್ಕಾರ: ಆಡಳಿತ ಚುರುಕುಗೊಳ್ಳಲಿ, ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿ

ಕಾರಿನಲ್ಲಿ ಒಟ್ಟು ಏಳು ಮಂದಿ ಇದ್ದರು, ಈ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ವಾಹನ ಒಡೆದು ಒಳಗಿದ್ದ ಯುವಕರನ್ನು ಹೊರ ತೆಗೆಯಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಬಳಿಕ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಅಪಘಾತದ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...