ಕೇರಳ | ಮಲಯಾಳಂ ನಟ, ಶಾಸಕ ಮುಖೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

Date:

ಮಲಯಾಳಂನ ಖ್ಯಾತ ನಟ ಮತ್ತು ಆಡಳಿತಾರೂಢ ಸಿಪಿಐ(ಎಂ) ಶಾಸಕ ಎಂ ಮುಖೇಶ್ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಮುಖೇಶ್ ಅವರು ವರ್ಷಗಳ ಹಿಂದೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂಬ ಮಹಿಳಾ ನಟಿ ಆರೋಪ ಮಾಡಿದ್ದರು. ಈ ಆರೋಪದ ಆಧಾರದಲ್ಲಿ ಮುಖೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ರಾತ್ರಿ ಕೊಚ್ಚಿ ನಗರದ ಮರಡು ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ 376 (ಅತ್ಯಾಚಾರ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬರುವ ಮುನ್ನವೇ ಈ ಅಪರಾಧ ನಡೆದಿರುವುದರಿಂದ ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಲೈಂಗಿಕ ದೌರ್ಜನ್ಯವಾಗಿದ್ದಕ್ಕೆ ಮಲಯಾಳಂ ಚಿತ್ರರಂಗ ತೊರೆದೆ: ನಟಿ ಮಿನು ಮುನೀರ್

ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಬಗ್ಗೆ ಬೆಳಕು ಚೆಲ್ಲುವ ನ್ಯಾಯಮೂರ್ತಿ ಕೆ ಹೇಮಾ ಸಮಿತಿಯ ವರದಿಯ ಬೆನ್ನಲ್ಲೇ ಹಲವಾರು ನಟಿಯರು ತಮ್ಮ ಮೇಲಾದ ಅತ್ಯಾಚಾರ, ಲೈಂಗಿಕ ಕಿರುಕುಳದ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ.

ಎಂಟು ವರ್ಷಗಳ ಹಿಂದೆ ಹೋಟೆಲ್‌ವೊಂದರಲ್ಲಿ ನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಟ ಸಿದ್ಧಿಕ್ ವಿರುದ್ಧ ತಿರುವನಂತಪುರಂ ಮ್ಯೂಸಿಯಂ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದರು.

ಇನ್ನು ಹಲವಾರು ನಟರು ಮತ್ತು ನಿರ್ದೇಶಕರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಶೋಷಣೆಯ ಆರೋಪಗಳ ನಡುವೆ, ರಾಜ್ಯ ಸರ್ಕಾರ ಆಗಸ್ಟ್ 25ರಂದು ತನಿಖೆಗಾಗಿ ಏಳು ಸದಸ್ಯರ ವಿಶೇಷ ತನಿಖಾ ತಂಡವನ್ನು ಸ್ಥಾಪಿಸುವುದಾಗಿ ಘೋಷಿಸಿದೆ. ಇದಾದ ಬಳಿಕ ನಟಿಯರು ಮುಂದೆ ಬಂದು ದೂರು ದಾಖಲಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...